Homeರಾಜ್ಯರಾಜ್ಯದಲ್ಲಿ ಜೋರಾಯ್ತು SIR ಪಾಲಿಟಿಕ್ಸ್ : ಕಾಂಗ್ರೆಸ್‌‍ ವಿರುದ್ಧ ನಾಳೆ ಆಯೋಗಕ್ಕೆ ಎನ್‌ಡಿಎ ನಾಯಕರಿಂದ ದೂರು

ರಾಜ್ಯದಲ್ಲಿ ಜೋರಾಯ್ತು SIR ಪಾಲಿಟಿಕ್ಸ್ : ಕಾಂಗ್ರೆಸ್‌‍ ವಿರುದ್ಧ ನಾಳೆ ಆಯೋಗಕ್ಕೆ ಎನ್‌ಡಿಎ ನಾಯಕರಿಂದ ದೂರು

ಬೆಂಗಳೂರು,ಅ.4-ಭಾರತದ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ(ಎಸ್‌‍ಐಆರ್‌) ವಿಚಾರವು ರಾಜಕೀಯ ಪಕ್ಷಗಳ ನಡುವಿನ ಆರೋಪ- ಪ್ರತ್ಯಾರೋಪ ತಾರಕಕ್ಕೇರುವಂತೆ ಮಾಡಿದೆ. ಅಲ್ಲದೆ, ಪರಸ್ಪರ ಆರೋಪಿಸಿ ಚುನಾವಣಾ ಆಯೋಗಕ್ಕೂ ದೂರುಗಳು ಸಲ್ಲಿಕೆಯಾಗಿವೆ. ಇದರ ಬೆನ್ನಲ್ಲೇ ಎನ್‌ಡಿಎ ನಾಯಕರು ಜಂಟಿಯಾಗಿ ಎಸ್‌‍ಐಆರ್‌ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷದ ವಿರುದ್ಧ ನಾಳೆ ಚುನಾವಣಾ ಆಯೋಗಕ್ಕೆ ದೂರು ನೀಡಲು ನಿರ್ಧರಿಸಿದ್ದಾರೆ.

ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ, ಮೇಲನೆ ಪ್ರತಿ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಜೆಡಿಎಸ್‌‍ ಶಾಸಕಾಂಗ ಪಕ್ಷದ ನಾಯಕ ಸಿ.ಬಿ.ಸುರೇಶ್‌ ಬಾಬು ಸೇರಿದಂತೆ ಜೆಡಿಎಸ್‌‍ ಹಾಗೂ ಬಿಜೆಪಿ ನಾಯಕರ ನಿಯೋಗವು ನಾಳೆ ಮಧ್ಯಾಹ್ನ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್‌ ಅವರಿಗೆ ದೂರು ಸಲ್ಲಿಸಲಿದೆ.

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹಾಗೂ ಅವರ ಸಂಪುಟದ ಸಚಿವರು ಸಂಪುಟ ಸಭೆಯನ್ನೇ ಮುಂದೂಡಿ ಎಸ್‌‍ಐಆರ್‌ನಲ್ಲಿ ಕೆಲವು ಸಮುದಾಯದ ಮತಗಳನ್ನು ಮತದಾರರ ಪಟ್ಟಿಯಿಂದ ಅಳಿಸಲಾಗುತ್ತಿದೆ ಎಂದು ಆರೋಪಿಸಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ್ದರು.

ಇದರ ಬೆನ್ನಲ್ಲೇ ಜೆಡಿಎಸ್‌‍ ಮತ್ತು ಬಿಜೆಪಿ ನಾಯಕರು ಚುನಾವಣಾಧಿಕಾರಿ ಕಚೇರಿ ಮುಂದೆ ಧರಣಿ ನಡೆಸಿದ ಕಾಂಗ್ರೆಸ್‌‍ ನಾಯಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು. ಅಲ್ಲದೆ, ನಮೂನೆ-7ಅನ್ನು ಸಲ್ಲಿಸಿರುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವುದನ್ನು ಕೈಬಿಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್‌‍.ಯಡಿಯೂರಪ್ಪ, ಅಶೋಕ ಅವರ ನೇತೃತ್ವದಲ್ಲಿ ಬಿಜೆಪಿ ನಾಯಕರು ರಾಜ್ಯ ಪೊಲೀಸ್‌‍ ಮಹಾ ನಿರ್ದೇಶಕರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.

ಎಸ್‌‍ಐಆರ್‌ ಪ್ರಕ್ರಿಯೆ ಆರಂಭಿಸಿದ ಸಂದರ್ಭದಲ್ಲಿ ಕಾಂಗ್ರೆಸ್‌‍ ಪಕ್ಷದ ವತಿಯಿಂದ ಕಲ್ಯಾಣ ಮಂಟಪ, ಸಮುದಾಯ ಭವನಗಳಲ್ಲಿ ಕೆಲವೊಂದು ಸಮುದಾಯದ ಮತದಾರರನ್ನು ಗುಂಪು ಗುಂಪಾಗಿ ಸೇರಿಸಿ ನಮೂನೆಗಳನ್ನು ವಿತರಣೆ ಮಾಡಿದ್ದಾರೆ ಎಂದು ಆರೋಪಿಸಿ ಎನ್‌ಡಿಎ ನಾಯಕರು ಆಯೋಗಕ್ಕೆ ದೂರು ನೀಡಿದ್ದರು. ಜೊತೆಗೆ ಗುಂಪು ಸೇರಿಸಲು ಅವಕಾಶ ನೀಡಬಾರದು ಹಾಗೂ ಆ ರೀತಿ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದರು.

ಆಡಳಿತಾರೂಢ ಕಾಂಗ್ರೆಸ್‌‍ ಪಕ್ಷ ಅಧಿಕಾರ ದುರ್ಬಳಕೆ ಮಾಡಿಕೊಂಡು ಎಸ್‌‍ಐಆರ್‌ ವಿಚಾರದಲ್ಲಿ ಅನಗತ್ಯ ಆರೋಪ ಮಾಡುತ್ತಿದೆ. ಅಲ್ಲದೆ, ಜನರಿಗೆ ತಪ್ಪು ಸಂದೇಶ ನೀಡುತ್ತಿದೆ. ಗುಂಪು ಸೇರಿಸಿ ನಮೂನೆಗಳನ್ನು ವಿತರಿಸಿದ ಕಾಂಗ್ರೆಸ್‌‍ ಪಕ್ಷದ ಮುಖಂಡರ ವಿರುದ್ಧ ಕಾನೂನು ರೀತಿಯ ಕ್ರಮ ಜರುಗಿಸುವಂತೆ ದೂರಿನಲ್ಲಿ ಆಯೋಗವನ್ನು ಕೋರುವ ಸಾಧ್ಯತೆಗಳಿವೆ.

RELATED ARTICLES
spot_img

Latest News