ಕೊಪ್ಪ,ಮಾ.26- ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕಾತಿಗೆ ತೀವ್ರ ವಿರೋಧ ವ್ಯಕ್ತವಾಗಿದ್ದು, ಕೂಡಲೇ ತಡೆಹಿಡಿಯುವಂತೆ ಕಾಂಗ್ರೆಸ್‍ನ ನಿಷ್ಠಾವಂತ ಬಣ ಕೆಪಿಸಿಸಿಗೆ ಮನವಿ ಮಾಡಿದೆ. ಈ ಸಂಬಂಧ ಕೊಪ್ಪದಲ್ಲಿ ಇಂದು ಕಾಂಗ್ರೆಸ್‍ನ ನಿಷ್ಠಾವಂತ ಬಣದ ಪ್ರಮುಖರು ಸಭೆ ಸೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಳೆಮನೆ ನಟರಾಜ್ ರವರಿಗೆ ಮಾಡಿರುವ ಆದೇಶವನ್ನು ತಕ್ಷಣವೇ ರದ್ದುಪಡಿಸಿ ಪಕ್ಷನಿಷ್ಠರಿಗೆ ಹುದ್ದೆ ನೀಡಬೇಕೆಂದು ಮನವಿ ಮಾಡಿದ್ದಾರೆ.
ಇದೇ ವೇಳೆ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾದ ಅಂಶುಪಂತ್ ಗೌಡ ಅವರ ಏಕಪಕ್ಷೀಯ ನಿರ್ಧಾರಕ್ಕೆ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರು ಕಡಿವಾಣ ಹಾಕಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳಲು ಸೂಚನೆ ನೀಡಬೇಕೆಂಬ ಒಮ್ಮತದ ತೀರ್ಮಾನವನ್ನು ಸಭೆಯಲ್ಲಿ ಕೈಗೊಳ್ಳಲಾಯಿತು.
ಕೊಪ್ಪ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ನಟರಾಜ್ ನೇಮಕ ಮಾಡಿರುವ ಜಿಲ್ಲಾಧ್ಯಕ್ಷರ ಸರ್ವಾಧಿಕಾರಿ ಧೋರಣೆಯನ್ನು ಖಂಡಿಸಿ ಆಕಾಂಕ್ಷಿಗಳಾಗಿದ್ದ ರವೀಂದ್ರ ಕುಕ್ಕೋಡಿಗೆ, ಮಂಜುನಾಥ್ ನುಗ್ಗಿಘಿ, ನವೀನ್ ಮಾವಿನಕಟ್ಟೆಘಿ, ರಾಜೇಂದ್ರ ಧರೇಕೊಪ್ಪಘಿ, ನವೀನ್ ಕರುವಾನೆ, ಶ್ರೀಹರ್ಷ ಹರಿಹರಪುರ, ಮಿತ್ರ ಕೋಡ್ತಾಳ್, ಅಶೋಕ್ ನಾರ್ವೆ, ರತ್ನಾಕರ್ ಒಣತೋಟ ಈ ಮುಖಂಡರ ನೇತೃತ್ವದಲ್ಲಿ ಸುಮಾರು 500 ಕ್ಕೂ ಹೆಚ್ಚು ಕಾರ್ಯಕರ್ತರ ಸಭೆ ಸೇರಿಸಿ ಕೆಲವು ನಿರ್ಣಯಗಳನ್ನು ತೆಗೆದುಕೊಂಡರು.
ಜಿಲ್ಲಾಧ್ಯಕ್ಷರಾದ ಅಂಶುಮಂತ್ ಗೌಡ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕ ಮಾಡುವ ಮುನ್ನ ಸೌಜನ್ಯಕ್ಕಾದರೂ ನಮ್ಮ ಅಭಿಪ್ರಾಯವನ್ನು ಕೇಳಲಿಲ್ಲಘಿ. 30 ವರ್ಷಗಳ ಹಿಂದೆ ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಅಮಾನತುಗೊಂಡಿದ್ದ ಹಾಗೂ ಪ್ರಸ್ತುತ ಕೆಪಿಸಿಸಿ ಸದಸ್ಯರೂ ಆಗಿರುವ ಬಾಳೆಮನೆ ನಟರಾಜ್ ಅವರನ್ನು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನೆ ಮಾಡಿದರು.
ಆಕಾಂಕ್ಷಿಗಳನ್ನು ಕೇಳದೆ, ಸಭೆಯನ್ನು ನಡೆಸದೆ ಜಿಲ್ಲಾಧ್ಯಕ್ಷರು ತಾವೊಬ್ಬರೇ ಪಕ್ಷವನ್ನು ಸಂಘಟಿಸಿದ್ದೆವೆ ಎಂಬ ಪೋಸ್ ಕೊಡುತ್ತಿರುವ ಅವರು ಏಕಪಕ್ಷೀಯ ತೀರ್ಮಾನಗಳನ್ನು ತೆಗೆದುಕೊಳ್ಳುತ್ತಾರೆ. ಗ್ಯಾರಂಟಿ ಅನುಷ್ಠಾನ ಸಮಿತಿಗೂ ನೇಮಕ ಮಾಡುವ ಮುನ್ನ ನಮ್ಮ ಜೊತೆ ಚರ್ಚೆ ಮಾಡುವುದಿಲ್ಲಘಿ. ಕೇವಲ ಅವರ ಹಿಂಬಾಲಕರನ್ನು ನೇಮಕ ಮಾಡಿದರೆ ಹಲವಾರು ವರ್ಷಗಳಿಂದ ಪಕ್ಷಕ್ಕೆ ದುಡಿದವರು ಏನು ಮಾಡಬೇಕೆಂದು ನಿಷ್ಠಾವಂತರು ಆಕ್ರೋಶ ವ್ಯಕ್ತಪಡಿಸಿದರು.
ಕೂಡಲೇ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ನೇಮಕವನ್ನು ರದ್ದುಪಡಿಸಿ ಪಕ್ಷ ನಿಷ್ಠರನ್ನು ನೇಮಿಸಬೇಕು ಅಲ್ಲದೆ ಇನ್ನು ಮುಂದೆ ಯಾವುದೇ ತೀರ್ಮಾನವನ್ನು ಕೈಗೊಳ್ಳುವ ಮುನ್ನ ತಾಲ್ಲೂಕಿನ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಜಿಲ್ಲೆಯಲ್ಲಿನ ಬೆಳವಣಿಗೆಗಳ ಕುರಿತಂತೆ ಶೀಘ್ರದಲ್ಲೇ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ಅವರಿಗೆ ಈ ಸಭೆಯಲ್ಲಿ ನಡೆದ ನಿರ್ಣಯಗಳನ್ನು ಹಾಗೂ ಸಾವಿರಾರು ಕಾರ್ಯಕರ್ತರ ಸಹಿ ಸಂಗ್ರಹ ಮಾಡಿ ಮನವಿಯನ್ನು ಸಲ್ಲಿಸುವುದಾಗಿ ನಿರ್ಣಯ ಕೈಗೊಳ್ಳಲಾಯಿತು.
ಸಭೆಯ ನಿರ್ಣಯಗಳು:
- ಉಡುಪಿ-ಚಿಕ್ಕಮಗಳೂರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಸೋಲಿಸಲು ಹಳ್ಳಿ ಹಳ್ಳಿಯಲ್ಲಿ ಪ್ರಚಾರ ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಬೇಕು.
- ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿಯಾದ ಜಯಪ್ರಕಾಶ್ ಹೆಗಡೆ ತಾಲ್ಲೂಕಿಗೆ ಆಗಮಿಸುತ್ತಿದ್ದುಘಿ, ಅವರಿಗೆ ಅಭೂತಪೂರ್ವ ಸ್ವಾಗತಕ್ಕೆ ತಯಾರಿ ನಡೆಸುವುದು.
- ತಾಲ್ಲೂಕು ಅಧ್ಯಕ್ಷರ ನೇಮಕಾತಿಯನ್ನು ರದ್ದುಪಡಿಸಿ ಈಗಿರುವ ಆಕಾಂಕ್ಷಿಗಳಲ್ಲಿ ಯಾರನ್ನಾದರೂ ಒಬ್ಬರನ್ನು ನೇಮಕ ಮಾಡುವಂತೆ ರಾಜ್ಯಾಧ್ಯಕ್ಷರಿಗೆ ಮನವಿ ಸಲ್ಲಿಸುವುದು.
- ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುತ್ತಿರುವ ಜಿಲ್ಲಾಧ್ಯಕ್ಷರ ವಿರುದ್ಧ ರಾಜ್ಯಾಧ್ಯಕ್ಷರಿಗೆ ದೂರು ನೀಡುವುದು