Homeಕ್ರೀಡಾ ಸುದ್ದಿಬೆಂಗಳೂರಿಗೆ ಮರಳಿದ ಮಹಿಳಾ ಹಾಕಿ ತಂಡಕ್ಕೆ ಅದ್ಧೂರಿ ಸ್ವಾಗತ

ಬೆಂಗಳೂರಿಗೆ ಮರಳಿದ ಮಹಿಳಾ ಹಾಕಿ ತಂಡಕ್ಕೆ ಅದ್ಧೂರಿ ಸ್ವಾಗತ

ಬೆಂಗಳೂರು, ಅ.4- ಏಷ್ಯನ್‌ ಗೇಮ್ಸ್‌ನಲ್ಲಿ 44 ವರ್ಷಗಳ ಬಳಿಕ ಭಾರತಕ್ಕೆ ಚಿನ್ನದ ಪದಕ ತಂದುಕೊಟ್ಟ ಭಾರತೀಯ ಹಾಕಿ ತಂಡ ಬೆಂಗಳೂರಿಗೆ ಆಗಮಿಸಿದ್ದು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ಧೂರಿ ಸ್ವಾಗತ ನೀಡಲಾಯಿತು.

ಕ್ರೀಡಾ ಇಲಾಖೆ ಹಾಗೂ ಭಾರತೀಯ ಕ್ರೀಡಾ ಪ್ರಾಧಿಕಾರದ ವತಿಯಿಂದ ತಂಡದ ಆಟಗಾರ್ತಿಯರನ್ನು ಆತ್ಮೀಯವಾಗಿ ಬರಮಾಡಿಕೊಳ್ಳಲಾಯಿತು. ಅಭಿಮಾನಿಗಳು ಪುಷ್ಪವೃಷ್ಟಿ ಮಾಡಿ, ಹೂವಿನ ಮಾಲೆ ಹಾಕಿ ಸಂಭ್ರಮಿಸಿದರು.

ಸಾಂಸ್ಕೃತಿಕ ಡೊಳ್ಳು ಕುಣಿತದೊಂದಿಗೆ ಸ್ವಾಗತ ಕೋರಲಾಯಿತು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾರತ್‌ ಮಾತಾ ಕಿ ಜೈ ಘೋಷಣೆ ಮೊಳಗಿತು.ತಂಡದ ನಾಯಕಿ ಸಲೀಮಾ ಟೇಟೆ ಮಾತನಾಡಿ, ಏಷ್ಯನ್‌ ಗೇಮ್ಸ್‌ನಲ್ಲಿ ಚಿನ್ನ ಗೆದ್ದಿರುವುದು ಬಹಳ ಸಂತಸ ತಂದಿದೆ ಎಂದರು.

ಬೆಂಗಳೂರಿನಲ್ಲಿ ತರಬೇತಿ ಪಡೆಯುವಾಗಲೇ ಚಿನ್ನ ಗೆಲ್ಲಬೇಕೆಂಬ ಛಲವಿತ್ತು. ತಂಡ ಉತ್ತಮ ಅಭ್ಯಾಸ ನಡೆಸಿ ಗುರಿ ಸಾಧಿಸಿದೆ ಎಂದು ಹೇಳಿದರು. ನಮ್ಮ ಮುಂದಿನ ಗುರಿ ಒಲಿಂಪಿಕ್ಸ್‌ನಲ್ಲಿ ಚಿನ್ನ ಗೆಲ್ಲುವುದು. ಮುಂದಿನ ಒಲಿಂಪಿಕ್ಸ್‌ನಲ್ಲಿ ಭಾರತ ತಂಡ ಚಿನ್ನ ಗೆಲ್ಲಲಿದೆ ಎಂಬ ವಿಶ್ವಾಸವಿದೆ ಎಂದು ಸಲೀಮಾ ಟೇಟೆ ಹೇಳಿದರು.

RELATED ARTICLES
spot_img

Latest News