Friday, May 10, 2024
Homeಬೆಂಗಳೂರುಚುನಾವಣೆ ಹಿನ್ನೆಲೆಯಲ್ಲಿ 290 ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ, ಶೋಧ

ಚುನಾವಣೆ ಹಿನ್ನೆಲೆಯಲ್ಲಿ 290 ರೌಡಿಗಳ ಮನೆಗಳ ಮೇಲೆ ಪೊಲೀಸರ ದಾಳಿ, ಶೋಧ

ಬೆಂಗಳೂರು, ಮಾ.27- ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ ಉತ್ತರ ವಿಭಾಗದ ಪೊಲೀಸರು ತಡರಾತ್ರಿ 290 ರೌಡಿಗಳ ಮನೆಗಳ ಮೇಲೆ ದಾಳಿ ಮಾಡಿ ಶೋಧ ನಡೆಸಿದ್ದಾರೆ.ಏಕಕಾಲಕ್ಕೆ 50 ಪೊಲೀಸರ ತಂಡ ಈ ದಾಳಿ ನಡೆಸಿದ್ದು, ರಾತ್ರಿ 11 ಗಂಟೆಯಿಂದ ಇಂದು ಬೆಳಗಿನ ಜಾವ 2 ಗಂಟೆಯವರೆಗೆ ಕಾರ್ಯಾಚರಣೆ ಕೈಗೊಂಡು ರೌಡಿಗಳ ಮೊಬೈಲ್ ಸಂಖ್ಯೆ, ಪ್ರಸ್ತುತ ಮಾಡುತ್ತಿರುವ ಉದ್ಯೋಗದ ಬಗ್ಗೆ ಮಾಹಿತಿ ಪಡೆದುಕೊಂಡರು.

ಉತ್ತರ ವಿಭಾಗದ ರಾಜಗೋಪಾಲ ನಗರ, ಆರ್‍ಎಂಸಿ ಯಾರ್ಡ್, ಪೀಣ್ಯ ಸೇರಿದಂತೆ ವಿವಿಧ ನಗರಗಳಲ್ಲಿ ವಾಸವಾಗಿರುವ ರೌಡಿಗಳ ಮನೆ ಮೇಲೆ ದಾಳಿ ಮಾಡಿ ಶೋಧ ನಡೆಸಿ ಬಾಲಬಿಚ್ಚದಂತೆ ಎಚ್ಚರಿಕೆ ನೀಡಿದ್ದಾರೆ. ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ರೌಡಿಗಳಿಗೆ ಎಚ್ಚರಿಕೆ ನೀಡಿ ಯಾವುದೇ ಅಪರಾಧ ಕೃತ್ಯಗಳಲ್ಲಿ ಭಾಗಿಯಾಗದಂತೆ ಪೊಲೀಸರು ತಾಕೀತು ಮಾಡಿದ್ದಾರೆ.

ಈಗಾಗಲೇ ನಗರದ ಪಶ್ಚಿಮ, ದಕ್ಷಿಣ ಮತ್ತು ಕೇಂದ್ರ ವಿಭಾಗದ ಪೊಲೀಸರು ರೌಡಿಗಳ ಮನೆಗಳ ಮನೆ ದಾಳಿ ಮಾಡಿ ಪರಿಶೀಲಿಸಿದ್ದಾರೆ.ಇಂದು ಉತ್ತರ ವಿಭಾಗದ ಡಿಸಿಪಿ…… ಅವರ ನೇತೃತ್ವದಲ್ಲಿ ಎಸಿಪಿ ಹಾಗೂ ಇನ್ಸ್‍ಪೆಕ್ಟರ್‍ಗಳು ಈ ದಾಳಿ ನಡೆಸಿದ್ದು, ಯಾವುದೇ ಚಟುವಟಿಕೆಗಳಲ್ಲಿ ಭಾಗಿಯಾಗದಂತೆ ಸೂಚಿಸಿದ್ದು, ಒಂದು ವೇಳೆ ಅಕ್ರಮ ಚಟುವಟಿಕೆಗಳಲ್ಲಿ ತೊಡಗಿಕೊಂಡರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿದ್ದಾರೆ.

RELATED ARTICLES

Latest News