Homeಜಿಲ್ಲಾ ಸುದ್ದಿಗಳುಗೊರೂರು ಪಂಕಜ ಅವರಿಗೆ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಗೊರೂರು ಪಂಕಜ ಅವರಿಗೆ ನಾಡೋಜ ಕಯ್ಯಾರ ಕಿಞ್ಞಣ್ಣ ರೈ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಬೆಂಗಳೂರು. ಅ.5 : ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ -2026 ಕ್ಕೆ ಖ್ಯಾತ ಕವಯತ್ರಿ ಗೊರೂರು ಪಂಕಜ ಅವರನ್ನು ಅಯ್ಕೆ ಮಾಡಲಾಗಿದೆ ಎಂದು ಕಾಸರಗೋಡಿನ ಕನ್ನಡ ಭವನ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ ರಾವ್ ಬೇಕಲ್, ಕಾರ್ಯದರ್ಶಿ ವಸಂತ ಕೆರೆಮನೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಗೊರೂರು ಪಂಕಜ ಅವರಿಗೆ ಈಗಾಗಲೇ ಪ್ರತಿಷ್ಠಿತ ಅಂತರಾಷ್ಟ್ರೀಯ ಆರ್ಯಭಟ ಪ್ರಶಸ್ತಿ, ಅಮ್ಮ ಪ್ರಶಸ್ತಿ, ಅಪ್ಪ ಸಾಹಿತ್ಯ ಪ್ರಶಸ್ತಿ, ಬಿ ಎಂ ಶ್ರೀ ಕಾವ್ಯ ಪುರಸ್ಕಾರ, ರಾಜೀವ್ ಗಾಂಧಿ ರಾಷ್ಟ್ರೀಯ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಗೌರವಗಳು ದೊರೆತಿವೆ. ಇದೇ ಅಕ್ಟೋಬರ್ 18ರಂದು ಕಾಸರಗೋಡಿನಲ್ಲಿ ನಡೆಯಲಿರುವ ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ* ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಿದ್ದಾರೆ.

RELATED ARTICLES
spot_img

Latest News