Homeರಾಜ್ಯಕಳೆದೆರಡು ತಿಂಗಳಿನಿಂದ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಕುಸಿತ

ಕಳೆದೆರಡು ತಿಂಗಳಿನಿಂದ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಕುಸಿತ

ಬೆಂಗಳೂರು,ಅ.5- ಕಳೆದ ಎರಡು ತಿಂಗಳಿನಿಂದ ರಾಜ್ಯದ ವಾಣಿಜ್ಯ ತೆರಿಗೆಗಳ ಸಂಗ್ರಹದಲ್ಲಿ ಇಳಿಕೆಯಾಗುತ್ತಿರುವುದು ಕಂಡುಬರುತ್ತಿದೆ. ವಾಣಿಜ್ಯ ತೆರಿಗೆಗಳ ಮಾಹಿತಿ ಇಲಾಖೆ ಪ್ರಕಾರ, ಸೆಪ್ಟೆಂಬರ್‌ ತಿಂಗಳಿನಲ್ಲಿ 10,018.19 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದೆ. ಇದರಲ್ಲಿ 7377.70 ಕೋಟಿ ರೂ. ಸರಕು ಸೇವಾ ತೆರಿಗೆ 2528.98 ಕೋಟಿ ರೂ. ಕರ್ನಾಟಕ ಮಾರಾಟ ತೆರಿಗೆ ಹಾಗೂ 112.01 ಕೋಟಿ ರೂ. ವೃತ್ತಿ ತೆರಿಗೆ ಸೇರಿದೆ.

ಕಳೆದ ಏಪ್ರಿಲ್‌ನಿಂದ ಸೆಪ್ಟೆಂಬರ್‌ವರೆಗಿನ ಆರು ತಿಂಗಳ ಅವಧಿಯಲ್ಲಿ 45,708.33 ಕೋಟಿ ರೂ. ಸರಕು ಸೇವಾ ತೆರಿಗೆ 15,256.22 ಕೋಟಿ ರೂ. ಮಾರಾಟ ತೆರಿಗೆ ಹಾಗೂ 863.1 ಕೋಟಿ ರೂ. ವೃತ್ತಿ ತೆರಿಗೆ ಸೇರಿದಂತೆ ಒಟ್ಟು 61,827.56 ಕೋಟಿ ರೂ. ಸಂಗ್ರಹವಾಗಿದೆ.

ಕಳೆದ ವರ್ಷದ ಆರ್ಥಿಕ ಸಾಲಿನಲ್ಲಿ ಒಟ್ಟು 1,10,813.30 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿತ್ತು. ಈ ವರ್ಷ ಅದಕ್ಕಿಂತಲೂ ಹೆಚ್ಚು ತೆರಿಗೆ ಸಂಗ್ರಹವಾಗುವ ನಿರೀಕ್ಷೆಯಿದೆ.
ಆದರೆ ಜುಲೈನಲ್ಲಿ 11,002.56 ಕೋಟಿ ರೂ. ವಾಣಿಜ್ಯ ತೆರಿಗೆಗಳ ಸಂಗ್ರಹವಾಗಿದ್ದರೆ ಆಗಸ್ಟ್‌ನಲ್ಲಿ ಅದು 10,888.01 ಕೋಟಿ ರೂ.ಗೆ ಇಳಿದಿತ್ತು.

ಸೆಪ್ಟೆಂಬರ್‌ನಲ್ಲೂ 10,018.69 ಕೋಟಿ ರೂ. ಮಾತ್ರ ಸಂಗ್ರಹವಾಗಿದೆ. ಆಗಸ್ಟ್‌ ತಿಂಗಳಿಗೆ ಹೋಲಿಸಿದರೆ ಸೆಪ್ಟೆಂಬರ್‌ ತಿಂಗಳಿನಲ್ಲಿ ಸುಮಾರು 870 ಕೋಟಿ ರೂ. ನಷ್ಟು ಕಡಿಮೆ ತೆರಿಗೆ ಸಂಗ್ರಹವಾಗಿದೆ.ಏಪ್ರಿಲ್‌ ತಿಂಗಳಿನಲ್ಲಿ 11,426.31 ಕೋಟಿ ರೂ.ನಷ್ಟು ಅತೀ ಹೆಚ್ಚು ತೆರಿಗೆ ಸಂಗ್ರಹವಾಗಿತ್ತು. ತಿಂಗಳಿನಿಂದ ತಿಂಗಳಿಗೆ ತೆರಿಗೆ ಸಂಗ್ರಹದ ಪ್ರಮಾಣ ಇಳಿಕೆಯಾಗಿರುವುದು ಕಂಡುಬಂದಿದೆ.

RELATED ARTICLES
spot_img

Latest News