Homeರಾಜ್ಯಭದ್ರಾ ಪೈಪ್‌ಲೈನ್‌ ಒಡೆದು ಅಪಾರ ಪ್ರಮಾಣದ ನೀರು ಪೋಲು

ಭದ್ರಾ ಪೈಪ್‌ಲೈನ್‌ ಒಡೆದು ಅಪಾರ ಪ್ರಮಾಣದ ನೀರು ಪೋಲು

ಚಿತ್ರದುರ್ಗ, ಅ.5- ಭದ್ರಾ ಪೈಪ್‌ಲೈನ್‌‍ ಒಡೆದು ಅಪಾರ ಪ್ರಮಾಣದ ನೀರು ಪೋಲಾದ ಘಟನೆ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಕುಡಿನೀರುಕಟ್ಟೆ ಗ್ರಾಮದ ಬಳಿ ನಡೆದಿದೆ. ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸಲು ಅಳವಡಿಸಲಾಗಿರುವ ಪೈಪ್‌ಲೈನ್‌‍ ಹಾನಿಗೊಂಡ ಪರಿಣಾಮ ಹೆಚ್ಚಿನ ಒತ್ತಡದಲ್ಲಿ ನೀರು ಚಿಮಿ ರಸ್ತೆಯತ್ತ ಹರಿದಿದೆ.

ಪೈಪ್‌ಲೈನ್‌‍ ಒಡೆದ ಕೆಲವೇ ಕ್ಷಣಗಳಲ್ಲಿ ನೀರು ರಭಸವಾಗಿ ಹೊರಚಿಮ್ಮಿದ್ದರಿಂದ ಸುತ್ತಮುತ್ತಲ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು.ರಭಸವಾಗಿ ಚಿಮುತ್ತಿದ್ದ ನೀರು ರಸ್ತೆಯಲ್ಲಿ ಹರಿದ ಪರಿಣಾಮ ಕೆಲಕಾಲ ವಾಹನ ಸಂಚಾರಕ್ಕೂ ಅಡಚಣೆ ಉಂಟಾಯಿತು.

ವಾಹನ ಸವಾರರು ನಿಧಾನವಾಗಿ ಸಂಚರಿಸುವಂತಾಯಿತು.ಪೈಪ್‌ಲೈನ್‌‍ ಹಾನಿಗೊಳಗಾದ ಮಾಹಿತಿ ತಿಳಿಯುತ್ತಿದ್ದಂತೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಹೆಚ್ಚಿನ ಪ್ರಮಾಣದಲ್ಲಿ ನೀರು ಪೋಲಾಗುವುದನ್ನು ತಡೆಯುವ ಉದ್ದೇಶದಿಂದ ತಾತ್ಕಾಲಿಕವಾಗಿ ನೀರು ಸರಬರಾಜು ಸ್ಥಗಿತಗೊಳಿಸಲಾಯಿತು.

ನಂತರ ಪೈಪ್‌ಲೈನ್‌‍ ದುರಸ್ತಿ ಕಾರ್ಯ ಕೈಗೊಂಡು, ಹಾನಿಗೊಂಡ ಭಾಗವನ್ನು ಸರಿಪಡಿಸುವ ಕ್ರಮ ಕೈಗೊಳ್ಳಲಾಯಿತು. ದುರಸ್ತಿ ಪೂರ್ಣಗೊಂಡ ಬಳಿಕ ನೀರು ಸರಬರಾಜು ಪುನರಾರಂಭಿಸುವ ನಿರೀಕ್ಷೆಯಿದೆ.ಕೆರೆಗಳಿಗೆ ಪ್ರಾಯೋಗಿಕವಾಗಿ ನೀರು ಹರಿಸುವ ಸಂದರ್ಭದಲ್ಲಿ ಪೈಪ್‌ಲೈನ್‌‍ ಒಡೆದಿರುವುದರಿಂದ ಘಟನೆಗೆ ನಿಖರ ಕಾರಣವೇನು ಎಂಬುದರ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಪೈಪ್‌ಲೈನ್‌ನ ಸ್ಥಿತಿ ಹಾಗೂ ತಾಂತ್ರಿಕ ದೋಷದ ಬಗ್ಗೆಯೂ ಪರಿಶೀಲನೆ ನಡೆಯುತ್ತಿದೆ.

RELATED ARTICLES
spot_img

Latest News