Homeಮನರಂಜನೆರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಲು ಪ್ರಸ್ತಾವನೆ ಸಲ್ಲಿಕೆ

ರೆಬೆಲ್‌ ಸ್ಟಾರ್‌ ಅಂಬರೀಶ್‌ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ನೀಡಲು ಪ್ರಸ್ತಾವನೆ ಸಲ್ಲಿಕೆ

ಬೆಂಗಳೂರು, ಅ.6- ಚಿತ್ರರಂಗದ ಜನಪ್ರಿಯ ನಟ, ರೆಬೆಲ್‌ ಸ್ಟಾರ್‌ ಎಂದೇ ಖ್ಯಾತರಾಗಿದ್ದ ಡಾ. ಅಂಬರೀಶ್‌ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಪ್ರಸ್ತಾವನೆ ಸಲ್ಲಿಸಿರುವುದಾಗಿ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.

ಡಾ.ಎಂ.ಹೆಚ್‌.ಅಂಬರೀಶ್‌ ಅವರು ಕನ್ನಡ ನಾಡು, ನುಡಿ, ಕಲೆ ಹಾಗೂ ರಾಜಕೀಯ ಕ್ಷೇತ್ರಕ್ಕೆ ನೀಡಿರುವ ಕೊಡುಗೆ ಅಪಾರವಾಗಿದೆ. ಅವರ ಜನಪ್ರಿಯತೆ ಹಾಗೂ ಅಭಿಮಾನಿಗಳ ಆಶಯವನ್ನು ಪರಿಗಣಿಸಿ, ಮುಂಬರುವ ರಾಜ್ಯೋತ್ಸವದ ಸಂದರ್ಭದಲ್ಲಿ ಅವರಿಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ ನೀಡಿ ಗೌರವಿಸುವಂತೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ರಾಮಲಿಂಗಾರೆಡ್ಡಿ ಹೇಳಿದ್ದಾರೆ.

ಕನ್ನಡ ಚಿತ್ರರಂಗದಲ್ಲಿ ತಮದೇ ಆದ ಛಾಪು ಮೂಡಿಸಿದ್ದ ಅಂಬರೀಶ್‌ ಅವರು ಜನರೊಂದಿಗೆ ನಿಕಟವಾಗಿ ಬೆರೆತು, ಅವರ ಕಷ್ಟಗಳಿಗೆ ಸ್ಪಂದಿಸುತ್ತಿದ್ದ ಅಚ್ಚುಮೆಚ್ಚಿನ ವ್ಯಕ್ತಿಯಾಗಿದ್ದರು. ಚಿತ್ರರಂಗದ ಜೊತೆಗೆ ರಾಜಕೀಯ ಕ್ಷೇತ್ರದಲ್ಲಿಯೂ ಸೇವೆ ಸಲ್ಲಿಸಿರುವ ಅವರು ನಾಡಿನ ಜನರ ಮನಸ್ಸಿನಲ್ಲಿ ಶಾಶ್ವತ ಸ್ಥಾನ ಪಡೆದಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.

ಅಂಬರೀಶ್‌ ಅವರಿಗೆ ಸಲ್ಲಬೇಕಾದ ಈ ಗೌರವವು ಅವರೊಬ್ಬರ ಗೌರವ ಮಾತ್ರವಲ್ಲ, ನಾಡಿನ ಪ್ರತಿಯೊಬ್ಬ ಕನ್ನಡಿಗನ ಗೌರವವಾಗಿದೆ ಎಂದು ರಾಮಲಿಂಗಾರೆಡ್ಡಿ ಅಭಿಪ್ರಾಯಪಟ್ಟಿದ್ದಾರೆ. ಈ ಕುರಿತು ಸಚಿವ ರಾಮಲಿಂಗಾರೆಡ್ಡಿ ಅವರು ಇಂದು ಸರ್ಕಾರಕ್ಕೆ ಅಧಿಕೃತ ಪ್ರಸ್ತಾವನೆ ಸಲ್ಲಿಸಿದ್ದು, ಮುಂಬರುವ ರಾಜ್ಯೋತ್ಸವದ ವೇಳೆಗೆ ಅಂಬರೀಶ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುವಂತೆ ಮನವಿ ಮಾಡಿದ್ದಾರೆ.

RELATED ARTICLES
spot_img

Latest News