Friday, November 22, 2024
Homeರಾಜ್ಯನಾಮಪತ್ರ ಸಲ್ಲಿಕೆ ಆರಂಭ : ಶಾಂತಿ-ಸುವ್ಯವಸ್ಥೆ ಕಾಪಾಡಲು ಏ.8ರವರೆಗೆ ನಿಷೇಧಾಜ್ಞೆ

ನಾಮಪತ್ರ ಸಲ್ಲಿಕೆ ಆರಂಭ : ಶಾಂತಿ-ಸುವ್ಯವಸ್ಥೆ ಕಾಪಾಡಲು ಏ.8ರವರೆಗೆ ನಿಷೇಧಾಜ್ಞೆ

ಬೆಂಗಳೂರು, ಮಾ.28- ಲೋಕಸಭಾ ಚುನಾವಣೆ ಹಿನ್ನೆಲೆ ಯಲ್ಲಿ ಇಂದಿನಿಂದ ನಾಮಪತ್ರಗಳ ಸಲ್ಲಿಕೆ ಆರಂಭವಾಗಿದ್ದು, ಈ ದಿಸೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಇಂದಿನಿಂದ ಏ.8ರ ವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಇಂದು ಬೆಳಗ್ಗೆ 10 ಗಂಟೆಯಿಂದ ಏ.8ರ ಸಂಜೆ 6 ಗಂಟೆ ವರೆಗೆ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿರುವ ನಾಮಪತ್ರ ಸ್ವೀಕರಿಸುವ ಎಲ್ಲಾ ಚುನಾವಣಾಧಿಕಾರಿಗಳ ಕಚೇರಿಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ನಿಬಂಧನೆಗಳಿಗೆ ಒಳಪಡುವಂತೆ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ನಗರ ಪೊಲೀಸ್ ಆಯುಕ್ತರು ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಾದ ಬಿ. ದಯಾನಂದ ಆದೇಶ ಹೊರಡಿಸಿದ್ದಾರೆ.

ಲೋಕಸಭಾ ಚುನಾವಣೆಗೆ ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು, ಪಕ್ಷೇತರರು ಕ್ಷೇತ್ರಗಳ ವ್ಯಾಪ್ತಿಯಲ್ಲಿರುವ ಚುನಾವಣಾಕಾರಿಗಳ ಕಚೇರಿಗಳಲ್ಲಿ ನಾಮಪತ್ರ ಸಲ್ಲಿಕೆ ಹಾಗೂ ನಾಮಪತ್ರ ಹಿಂಪಡೆಯುವ ಪ್ರಕ್ರಿಯೆ ನಡೆಯಲಿದ್ದು, ಇಂತಹ ಸಂದರ್ಭಗಳಲ್ಲಿ ಅಭ್ಯರ್ಥಿಗಳ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಚೇರಿಯ ಬಳಿ ಗುಂಪು ಸೇರುವ ಸಾಧ್ಯತೆಗಳು ಇರುತ್ತವೆ.

ರಸ್ತೆ ತಡೆ, ಮೆರವಣಿಗೆ, ಪ್ರತಿಭಟನೆ ಮೊದಲಾದ ಚಟುವಟಿಕೆಗಳು ನಡೆಯುವ ಸಂಭವವಿರುವುದರಿಂದ ವಾಹನ ಸಂಚಾರದಲ್ಲಿ ವ್ಯತ್ಯಯ ಹಾಗೂ ಕಾನೂನು ಸುವ್ಯವಸ್ಥೆಗೆ ಭಂಗ ಉಂಟಾಗಿ ಸರ್ಕಾರಿ ಕಚೇರಿಯ ಕಾರ್ಯಕಲಾಪಗಳಿಗೆ ಅಡಚಣೆ ಉಂಟಾಗುವ ಸಾಧ್ಯತೆ ಇರುತ್ತದೆ.

ಕೆಲ ದುಷ್ಕರ್ಮಿಗಳು ಮತ್ತು ಸಮಾಜಘಾತುಕ ವ್ಯಕ್ತಿಗಳು ಈ ಸಮಯವನ್ನು ಉಪಯೋಗಿಸಿಕೊಂಡು ಸಾರ್ವಜನಿಕ ಇಲ್ಲವೇ ಸರ್ಕಾರಿ ಆಸ್ತಿ ಪಾಸ್ತಿಗಳಿಗೆ ಹಾನಿವುಂಟು ಮಾಡುವ, ವಾಹನ ಸಂಚಾರ, ಸಾರ್ವಜನಿಕರ ಸಂಚಾರಕ್ಕೆ ತೊಂದರೆಯುಂಟು ಮಾಡುವ ಹಾಗೂ ಕಾನೂನು ಸುವ್ಯವಸ್ಥೆಗ ಭಂಗ ಉಂಟು ಮಾಡುವ ಸಾಧ್ಯತೆಗಳು ಇರುವುದು ತಿಳಿದು ಬಂದಿದೆ.ಈ ಹಿನ್ನೆಲೆಯಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ನಿಟ್ಟಿನಲ್ಲಿ 144 ಸೆಕ್ಷನ್ ಜಾರಿಗೊಳಿಸಿ ಆಯುಕ್ತರು ಪ್ರತಿಬಂಧಕಾಜ್ಞೆಯನ್ನು ವಿಧಿಸಿರುತ್ತಾರೆ.

ನಿಬಂಧನೆಗಳು
*ಐದು ಅಥವಾ ಅದಕ್ಕಿಂತ ಹೆಚ್ಚು ಜನರು ಗುಂಪು ಸೇರಬಾರದು.
*ಮೆರವಣಿಗೆ, ಸಭೆಗಳನ್ನು ನಡೆಸುವುದು ಮತ್ತು ಧ್ವನಿವರ್ದಕಗಳನ್ನು ಬಳಸುವಂತಿಲ್ಲ.
*ಶಸಾಸ್ತ್ರಗಳು, ದೊಣ್ಣೆ, ಕತ್ತಿ, ಈಟಿ, ಗದೆ, ಕಲ್ಲು, ಇಟ್ಟಿಗೆ, ಚಾಕು ಇನ್ನಿತರೆ ಮಾರಕಾಸಗಳನ್ನು ಅಥವಾ ದೈಹಿಕ ಹಿಂಸೆಯನ್ನು ಉಂಟುಮಾಡುವ ಯಾವುದೇ ವಸ್ತುಗಳನ್ನು ಒಯ್ಯು ವಂತಿಲ್ಲ.
*ಯಾವುದೇ ಸಂರಕ್ಷಾರ್ಹ ಪದಾರ್ಧ ಅಥವಾ ಸೋಟಕ ವಸ್ತುಗಳನ್ನು ಸಿಡಿಸುವುದು, ಕಲ್ಲುಗಳನ್ನು, ಕ್ಷಿಪಣಿ ಗಳನ್ನು ಎಸೆಯುವ ಸಾಧನಗಳ ಅಥವಾ ಉಪಕರಣಗಳ ಒಯ್ಯುವಿಕೆ
ಮತ್ತು ಶೇಖರಿಸುವುದನ್ನು ನಿಷೇಸಲಾಗಿದೆ.
*ವ್ಯಕ್ತಿಗಳ ಅಥವಾ ಅವರ ಶವಗಳ ಪ್ರತಿಕೃತಿಗಳ ಪ್ರದರ್ಶನ ಮಾಡುವುದನ್ನು, ಪ್ರಚೋದಿಸಬಹುದಾದ ಬಹಿರಂಗ ಘೋಷಣೆಗಳನ್ನು ಕೂಗುವುದು, ಸಂಜ್ಞೆ ಮಾಡುವುದು, ಹಾಡುವುದು, ಭಿತ್ತಿ ಪತ್ರ ಅಥವಾ ಯಾವುದೇ ವಸ್ತು ಇಲ್ಲವೇ ಪದಾರ್ಥಗಳನ್ನು ಪ್ರದರ್ಶಿಸುವುದನ್ನು ನಿಷೇಸಲಾಗಿದೆ.

RELATED ARTICLES

Latest News