Homeರಾಜ್ಯಹಾಸ್ಟೆಲ್‌ನಲ್ಲಿ ಬಿ.ಟೆಕ್‌ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಹಾಸ್ಟೆಲ್‌ನಲ್ಲಿ ಬಿ.ಟೆಕ್‌ ವಿದ್ಯಾರ್ಥಿ ಅನುಮಾನಾಸ್ಪದ ಸಾವು

ಹಾರೋಹಳ್ಳಿ,ಅ.8- ಬೆಂಗಳೂರು ರಸ್ತೆ ಬಳಿಯ ದಯಾನಂದ ಸಾಗರ ವಿಶ್ವವಿದ್ಯಾಲಯದ ಎಂಜಿನಿಯರಿಂಗ್‌ ಕಾಲೇಜಿನ ಬಿ.ಟೆಕ್‌ (ಎಐ) ವಿದ್ಯಾರ್ಥಿಯೊಬ್ಬರು ಹಾಸ್ಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಮತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.ತಮಿಳುನಾಡಿನ ತಿರುವಣ್ಣಾಮಲೈ ಜಿಲ್ಲೆಯ ಚೆಂಗಂ ತಾಲೂಕಿನ ಮೇಲ್‌ ಕರಿಯಮಂಗಲಂ ಗ್ರಾಮದ ಜೈಶಂಕರ್‌ ಅವರ ಪುತ್ರ ಜೆ. ಕಲಂಜಿಯನ್‌ (19) ಮತ ವಿದ್ಯಾರ್ಥಿ.

ದಯಾನಂದ ಸಾಗರ ವಿಶ್ವವಿದ್ಯಾಲಯದಲ್ಲಿ ಕಲಂಜಿಯನ್‌ ಹಾಸ್ಟೆಲ್‌ನಲ್ಲಿ ವಾಸವಿದ್ದುಕ್ಕೊಂಡು ವ್ಯಾಸಂಗ ಮಾಡುತ್ತಿದ್ದರು. ಸೆ.30ರಂದು ಸಂಜೆ ಸುಮಾರು 5.30ಕ್ಕೆ ಕಾಲೇಜು ಹಾಸ್ಟೆಲ್‌ನಿಂದ ಕರೆ ಮಾಡಿ ಕಲಂಜಿಯನ್‌ ತೀವ್ರ ನಿಗಾ ಘಟಕದಲ್ಲಿ (ಐಸಿಯು) ಚಿಕಿತ್ಸೆ ಪಡೆಯುತ್ತಿರುವುದಾಗಿ ಈತನ ತಂದೆಗೆ ಕಾಲೇಜು ಆಡಳಿತ ಮಂಡಳಿ ತಿಳಿಸಿದೆ. ಬಳಿಕ ಸಂಜೆ 6 ಗಂಟೆಗೆ ಮತ್ತೊಮೆ ಕರೆ ಮಾಡಿ ನಿಮ ಪುತ್ರ ಮತಪಟ್ಟಿರುವುದಾಗಿ ಮಾಹಿತಿ ನೀಡಿದ್ದಾರೆ.

ದಯಾನಂದ್‌ ಸಾಗರ್‌ ಕಾಲೇಜಿನ ಆಡಳಿತ ಮಂಡಳಿಯ ನಿರ್ಲಕ್ಷವೇ ವಿದ್ಯಾರ್ಥಿಯ ಸಾವಿಗೆ ಕಾರಣ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ. ಕಳೆದ ಎರಡು ತಿಂಗಳ ಹಿಂದೆ ಅಂಕಿತ ಎಂಬ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಸಾವನ್ನಪ್ಪಿದ್ದರು.

ಸೆ.29ರಂದು ರಾತ್ರಿ ಕಲಂಜಿಯನ್‌ ತನ್ನ ಸ್ನೇಹಿತರೊಂದಿಗೆ ಕ್ಯಾಂಪಸ್‌‍ನಿಂದ ಸ್ವಲ್ಪ ದೂರದಲ್ಲಿರುವ ಬಾರ್‌ಗೆ ತೆರಳಿ ರಾತ್ರಿ ಸುಮಾರು 10 ಗಂಟೆಗೆ ಹಾಸ್ಟೆಲ್‌ಗೆ ವಾಪಸ್‌‍ ಬಂದಿದ್ದ. ಬಳಿಕ ಕೊಠಡಿಗೆ ತೆರಳಿ ಮಲಗಿದ್ದ ಎನ್ನಲಾಗಿದೆ. ಮರುದಿನ ಹಾಸ್ಟೆಲ್‌ ಕೊಠಡಿಯಲ್ಲಿ ಮತಪಟ್ಟ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಅಂದು ರಾತ್ರಿಯೇ ಮತಪಟ್ಟಿದ್ದರೆ, ಮರುದಿನ ಸಂಜೆವರೆಗೂ ಈ ಬಗ್ಗೆ ಮಾಹಿತಿ ನೀಡದಿರುವುದು ಸೇರಿದಂತೆ ಹಲವು ಅನುಮಾನ ವ್ಯಕ್ತವಾಗಿದೆ. ಪುತ್ರನ ಸಾವಿನ ನಿಖರ ಕಾರಣ ತಿಳಿಯಲು ಸಮಗ್ರ ತನಿಖೆ ನಡೆಸಿ ನ್ಯಾಯ ಒದಗಿಸಬೇಕು ಎಂದು ತಂದೆ ಜೈಶಂಕರ್‌ ಪೊಲೀಸರಿಗೆ ದೂರು ನೀಡಿ ಮನವಿ ಮಾಡಿದ್ದಾರೆ.

ಇದೇ ವೇಳೆ, ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳಿಗೆ ಮದ್ಯ ಹಾಗೂ ಗಾಂಜಾ ಸೇವನೆಗೆ ಅವಕಾಶ ನೀಡಲಾಗುತ್ತಿದೆ ಹಾಗೂ ಆಡಳಿತ ಮಂಡಳಿಯ ನಿರ್ಲಕ್ಷ್ಯವೇ ವಿದ್ಯಾರ್ಥಿಯ ಸಾವಿಗೆ ಕಾರಣವಾಗಿರಬಹುದು ಎಂದು ಕೆಲ ಗ್ರಾಮಸ್ಥರು ಆರೋಪಿಸಿದ್ದಾರೆ.

ಈ ಆರೋಪಗಳ ಬಗ್ಗೆಯೂ ಪೊಲೀಸರು ತನಿಖೆ ನಡೆಸಿ ಸತ್ಯಾಸತ್ಯತೆ ಬಹಿರಂಗಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.ಹಾರೋಹಳ್ಳಿ ಸರ್ಕಲ್‌ ಇನ್‌ಸ್ಪೆಕ್ಟರ್‌ ಕೆ. ಮಲ್ಲೇಶ್‌ ಸ್ಥಳ ಪರಿಶೀಲನೆ ನಡೆಸಿದ್ದು, ಯುಡಿಆರ್‌ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

RELATED ARTICLES
spot_img

Latest News