ಧಾರವಾಡ,ಅ.9-ಇಂದು ಬೆಳ್ಳಂಬೆಳಗ್ಗೆ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನವಲಗುಂದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲ್ಲೂಕಿನ ಮಲಗಾಣ ನಿವಾಸಿ ಕಾರು ಚಾಲಕ ಅಜಿತ್(38), ಚಡಚಣ ತಾಲ್ಲೂಕಿನ ಬಾರಡೋಲಿ ಗ್ರಾಮದ ನಿವಾಸಿ ರಾಕೇಶ್(22), ಸಂದೀಪ್ (33) ಮತ್ತು ಸಿದ್ದಾಪುರದ ಶೃತಿ (28) ಎಂದು ಗುರುತಿಸಲಾಗಿದೆ.
ಜಿಲ್ಲೆಯ ಅಮರಗೋಳ ಕ್ರಾಸ್ ಬಳಿ ಇಂದು ಬೆಳಿಗ್ಗೆ 6.30 ರ ಸುಮಾರಿನಲ್ಲಿ ಈ ಅಪಘಾತ ಸಂಭವಿದ್ದು ಕಾರಿನಲ್ಲಿದ್ದ ನಾಲ್ವರು ಸ್ಥಳದಲ್ಲೇ ಮತಪಟ್ಟಿದ್ದಾರೆ. ಈ ಘಟನೆಯು ಪೊಲೀಸ್ ಠಾಣೆಯಿಂದ 15 ಕಿ.ಮೀ ದೂರದಲ್ಲಿ ನಡೆದಿದೆ.ಸುದ್ದಿ ತಿಳಿಯುತ್ತಿದ್ದಂತೆ ನವಲಗುಂದ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ನಂತರ ಮತದೇಹಗಳನ್ನು ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ.
