Homeರಾಜ್ಯಮಂಡ್ಯ ಜಿಲ್ಲಾ ಎಎಸ್‌‍ಪಿ ಸಿ.ಇ ತಿಮಯ್ಯ ನಿಧನ

ಮಂಡ್ಯ ಜಿಲ್ಲಾ ಎಎಸ್‌‍ಪಿ ಸಿ.ಇ ತಿಮಯ್ಯ ನಿಧನ

ಬೆಂಗಳೂರು,ಅ.10- ಅನಾರೋಗ್ಯ ದಿಂದ ಚಿಕಿತ್ಸೆ ಪಡೆಯುತ್ತಿದ್ದ ಮಂಡ್ಯ ಜಿಲ್ಲಾ ಹೆಚ್ಚುವರಿ ಪೊಲೀಸ್‌‍ ಅಧೀಕ್ಷಕರಾದ (ಎಎಸ್‌‍ಪಿ) ಸಿ.ಇ ತಿಮಯ್ಯ (57) ಅವರು ಇಂದು ಮುಂಜಾನೆ ನಿಧನರಾದರು. ತೀವ್ರ ಅನಾರೋಗ್ಯದಿಂದಾಗಿ ಹಲವು ದಿನಗಳಿಂದ ಮಂಡ್ಯದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಮುಂಜಾನೆ 3 ಗಂಟೆ ಸುಮಾರಿನಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.ತಿಮಯ್ಯ ಅವರ ಪಾರ್ಥಿವ ಶರೀರವನ್ನು ಮಂಡ್ಯದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ಸಂಜೆ ಮೈಸೂರಿನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಲಿದೆ.

ಅಧಿಕಾರಿಯ ಅಕಾಲಿಕ ನಿಧನಕ್ಕೆ ಪೊಲೀಸ್‌‍ ಇಲಾಖೆಯ ಹಿರಿಯ ಅಧಿಕಾರಿಗಳು ಹಾಗೂ ಸಿಬ್ಬಂದಿ, ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ.ಮಂಡ್ಯ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಎಎಸ್‌‍ಪಿಯಾಗಿ ಸೇವೆ ಸಲ್ಲಿಸುತ್ತಿದ್ದ ತಿಮಯ್ಯ ಅವರು ಕರ್ತವ್ಯ ನಿಷ್ಠ ಅಧಿಕಾರಿಯಾಗಿದ್ದರು.

ಜಿಲ್ಲೆಯಲ್ಲಿ ನಡೆದ ಶ್ರೀರಂಗಪಟ್ಟಣದ ಹನುಮ ಸಂಕೀರ್ತನಾ ಯಾತ್ರೆ, ಗಣಪತಿ ಮೂರ್ತಿ ವಿಸರ್ಜನಾ ಗಲಾಟೆ, ಕೆರಗೋಡು ಧ್ವಜ ವಿವಾದ ಹಾಗೂ ಸಾರ್ವತ್ರಿಕ ಚುನಾವಣಾ ಸಂದರ್ಭದಲ್ಲಿ ಅತ್ಯಂತ ಸೂಕ ಸನ್ನಿವೇಶಗಳಲ್ಲಿ ಶಾಂತಿ ಮತ್ತು ಕಾನೂನು ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುವಲ್ಲಿ ತಿಮಯ್ಯ ಅವರು ಪ್ರಮುಖ ಪಾತ್ರ ವಹಿಸಿದ್ದರು.

RELATED ARTICLES
spot_img

Latest News