Friday, November 22, 2024
Homeರಾಜ್ಯಲೋಕಸಭೆ ಚುನಾವಣೆ : ರಾಜ್ಯದಲ್ಲಿ ಈವರೆಗೆ 59 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಲೋಕಸಭೆ ಚುನಾವಣೆ : ರಾಜ್ಯದಲ್ಲಿ ಈವರೆಗೆ 59 ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ

ಬೆಂಗಳೂರು, .ಏ.1: ಲೋಕಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಭರಾಟೆ ಜೋರಾಗಿದೆ. ಮೊದಲ ಹಂತದಲ್ಲಿ ಏ.26ರಂದು ನಡೆಯಲಿರುವ 14 ಲೋಕಸಭಾ ಕ್ಷೇತ್ರಗಳ ಚುನಾವಣೆಗೆ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಮೈತ್ರಿ ಪಕ್ಷದ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಈವರೆಗೆ 59 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.

ಇಂದು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಪಿಸಿ ಮೋಹನ್ ಅವರು ಭರ್ಜರಿ ಮೆರವಣಿಗೆ ಮೂಲಕ ಶಕ್ತಿ ಪ್ರದರ್ಶನದೊಂದಿಗೆ ಉಮೇದುವಾರಿಗೆ ಸಲ್ಲಿಸಿದರು. ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್. ಯಡಿಯೂರಪ್ಪ, ಬಸವರಾಜ್ ಬೊಮ್ಮಾಯಿ, ಡಿ.ವಿ. ಸದಾನಂದ ಗೌಡ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್ ಆಶೋಕ್ ಸೇರಿದಂತೆ ಆನೇಕ ಮುಖಂಡರು ನಾಮಪತ್ರ ಸಲ್ಲಿಕೆ ಸಂದರ್ಭದಲ್ಲಿ ಭಾಗವಹಿಸಿದರು.

ಬೆಂಗಳೂರು-ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸೌಮ್ಯ ರೆಡ್ಡಿ ಅವರು ಇಂದು ನಾಮಪತ್ರ ಸಲ್ಲಿಸಿದರು. ಸಚಿವ ರಾಮಲಿಂಗಾರೆಡ್ಡಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಸಾಥ್ ನೀಡಿದರು.

ಶಾಸಕರು ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಶಾಸಕರು ಮಾಜಿ ಶಾಸಕರು ಸ್ಥಳೀಯ ಮುಖಂಡರು ಪಾಲ್ಗೊಂಡಿದ್ದರು. ಹೈ-ಹೋಲ್ಟೇಜ್ ಕ್ಷೇತ್ರವಾಗಿರುವ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವೆಂಕಟ ರಮಣೆಗೌಡ (ಸ್ಟಾರ್ ಚಂದ್ರು) ಅವರು ಇಂದು ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಮಂಡ್ಯದ ಕಾಳಿಕಾಂಬದೇವಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಭಾರಿ ಮೆರಣಿಗೆ ಮೂಲಕ ಆಗಮಿಸಿ ಜಿಲ್ಲಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಜಿಲ್ಲಾ ಉಸ್ತುವಾರಿ ಸಚಿವರಾದ ಚೆಲುವರಾಯ ಸ್ವಾಮಿ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್‍ಜಾನ್ ಶಾಸಕರಾದ ಗಣಿಗ ರವಿ, ರಮೇಶ ಬಂಡಿ ಸಿದ್ದೇಗೌಡ, ದಿನೇಶ್ ಗೂಳಿಗೌಡ, ಮರಿ ತಿಬ್ಬೇಗೌಡ ಸೇರಿದಂತೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು, ಮುಖಂಡರು ಪಾಲ್ಗೊಂಡಿದ್ದರು.

ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್ ಪಟೇಲ್ ನಾಮಪತ್ರ ಸಲ್ಲಿಸಿದ್ದು, ಉಸ್ತುವಾರಿ ಸಚಿವ ರಾಜಣ್ಣ, ಎಐಸಿಸಿ ಕಾರ್ಯದರ್ಶಿ ರೋಜಿ ಎಮ್‍ಜಾನ್ ಶಾಸಕರಾದ ಶಿವಲಿಂಗೇಗೌಡ, ಎಂ . ಆನಂದ್ , ಮಾಜಿ ಸಚಿವರು, ಶಾಸಕರು ಮುಖಂಡರು ಪಾಲ್ಗೊಂಡಿದ್ದರು. ಈಗಾಗಲೇ ಬೆಂ.ಗ್ರಾ. ಲೋಕಸಭಾ ಕ್ಷೇತ್ರದಿಂದ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಡಿಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ.

ಹಾಸನದಲ್ಲಿ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅಬ್ಬರ ಅರ್ಭಟವಿಲ್ಲದೆ ಸರಳವಾಗಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನುಳಿದಂತೆ ನಾಳೆ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ನಾಮಪತ್ರ ಸಲ್ಲಿಸಲಿದ್ದಾರೆ. ಏ.3ರಂದು ಬೆಂ. ಕೇಂದ್ರ ಲೋಕಸಭಾ ಕ್ಷೇತ್ರದ ಕೈ ಅಭ್ಯರ್ಥಿ ಮನ್ಸೂರ್ ಅಲಿಖಾನ್ ಮತ್ತು ಬೆಂ.ಉತ್ತರ ಕ್ಷೇತ್ರದ ಅಭ್ಯರ್ಥಿ ಪ್ರೊ. ರಾಜುಗೌಡ ನಾಮಪತ್ರ ಸಲ್ಲಿಸಲಿದ್ದಾರೆ.

ಮೈಸೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಯದುವೀರ್ ಕೃಷ್ಣದತ್ತ ಒಡೆಯರ್, ಚಾಮರಾಜ ನಗರದ ಬಿಜೆಪಿ ಅಭ್ಯರ್ಥಿ ಬಾ¯ರಾಜ್, ಉಡುಪಿ-ಚಿಕ್ಕಮಗಳೂರು ಕ್ಷೇತ್ರದ ಕೋಟಾ ಶ್ರೀನಿವಾಸ ಪೂಜಾರಿ, ತುಮಕೂರಿನ ವಿ ಸೋಮಣ್ಣ, ಏ.3 ರಂದು ನಾಮಪತ್ರ ಸಲ್ಲಿಸಲಿದ್ದು, ಮಾಜಿ ಮುಖ್ಯಮಂತ್ರಿಗಳಾದ ಯಡಿಯೂರಪ್ಪ ಡಿ.ವಿ. ಸದಾನಂದ ಗೌಡ, ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ವಿಪಕ್ಷ ನಾಯಕ ಆರ್ ಅಶೋಕ್ ಪಾಲ್ಗೊಳ್ಳಲಿದ್ದಾರೆ.

ಏ.4 ರಂದು ತುಮಕೂರು ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಎಸ್.ಪಿ. ಮುದ್ದು ಹನುಮೇಗೌಡ, ಮಂಡ್ಯ ಜೆಡಿಎಸ್ ಬಿಜೆಪಿ ಮೈತ್ರಿ ಅಭ್ಯರ್ಥಿಯಾಗಿರುವ ಮಾಜಿ ಮುಖ್ಯಮುಂತ್ರಿ ಎಚ್.ಡಿ. ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ.

RELATED ARTICLES

Latest News