Homeರಾಜ್ಯರಂಗೇರಿದ ಪರಿಷತ್‌ ಚುನಾವಣೆ

ರಂಗೇರಿದ ಪರಿಷತ್‌ ಚುನಾವಣೆ

ಬೆಂಗಳೂರು,ಅ.12- ವಿಧಾನಪರಿಷತ್‌ನ ದ್ವೈ ವಾರ್ಷಿಕ ಚುನಾವಣೆಯಲ್ಲಿ ಶಿಕ್ಷಕ ಮತ್ತು ಪದವೀಧರ ಕ್ಷೇತ್ರಗಳಿಂದ ಒಟ್ಟು 43 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಇದ್ದಾರೆ.ಅ.23 ರಂದು ಮತದಾನ ನಡೆಯಲಿರುವ 2 ಪದವೀಧರ ಹಾಗೂ 2 ಶಿಕ್ಷಕರ ಕ್ಷೇತ್ರದ ಚುನಾವಣೆ ಕಾವು ದಿನದಿಂದ ದಿನಕ್ಕೆ ಏರತೊಡಗಿದೆ.

ಬೆಂಗಳೂರು ಶಿಕ್ಷಕ ಕ್ಷೇತ್ರದಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಅಭ್ಯರ್ಥಿ ಪುಟ್ಟಣ್ಣ, ಜೆಡಿಎಸ್‌‍ ಅಭ್ಯರ್ಥಿ ಎ.ಪಿ.ರಂಗನಾಥ ಸೇರಿದಂತೆ ಆರು ಮಂದಿ ಚುನಾವಣಾ ಸ್ಪರ್ಧೆಯಲ್ಲಿದ್ದಾರೆ.ಪಶ್ಚಿಮ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ನ ಮೋಹನ್‌ ಲಿಂಬಿಕಾಯಿ, ಬಿಜೆಪಿಯ ಎಸ್‌‍.ವಿ.ಸಂಕನೂರ ಸೇರಿದಂತೆ 14 ಮಂದಿ ಅಭ್ಯರ್ಥಿಗಳು ಚುನಾವಣಾ ಕಣದಲ್ಲಿದ್ದಾರೆ.

ಆಗ್ನೇಯ ಪದವೀಧರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಶಶಿ, ಹುಲಿಕುಂಟೇಮಠ್‌, ಬಿಜೆಪಿ ಅಭ್ಯರ್ಥಿ ಕೆ.ಎಂ.ಸುರೇಶ ಸೇರಿದಂತೆ 10 ಅಭ್ಯರ್ಥಿಗಳು ಸ್ಪರ್ಧೆಯಲ್ಲಿದ್ದಾರೆ.ಈಶಾನ್ಯ ಶಿಕ್ಷಕರ ಕ್ಷೇತ್ರದಲ್ಲಿ ಕಾಂಗ್ರೆಸ್‌‍ ಅಭ್ಯರ್ಥಿ ಶರಣಪ್ಪ ಮಟ್ಟೂರು, ಬಿಜೆಪಿ ಅಭ್ಯರ್ಥಿ ಶಶಿಲ್‌ ಜಿ ನಮೋಶಿ ಸೇರಿದಂತೆ ಒಟ್ಟು 13 ಅಭ್ಯರ್ಥಿಗಳು ಮೇಲನೆ ಚುನಾವಣೆ ಸ್ಪರ್ಧೆಯಲ್ಲಿದ್ದಾರೆ.

ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಈ ಚುನಾವಣೆ ಪ್ರತಿಷ್ಠೆಯಾಗಿದ್ದು, ಶಿಕ್ಷಕರ ಮತ್ತು ಪದವೀಧರ ಮತದಾರರ ಮನ ಗೆಲ್ಲಲು ಮೂರೂ ಪಕ್ಷಗಳು ಹರಸಾಹಸ ಮಾಡುತ್ತಿದ್ದು, ನಿರಂತರ ಚುನಾವಣಾ ಪ್ರಚಾರದಲ್ಲಿ ತೊಡಗಿವೆ.

ಪ್ರತಿನಿತ್ಯ ಒಂದಲ್ಲಾ ಒಂದು ಸಭೆ, ಸಮಾವೇಶಗಳನ್ನು ನಡೆಸಿ ಮತದಾರರ ಮನವೊಲಿಸುವ ಪ್ರಯತ್ನವನ್ನು ರಾಜಕೀಯ ಪಕ್ಷಗಳ ನಾಯಕರು, ಮುಖಂಡರು, ಕಾರ್ಯಕರ್ತರು ಮಾಡುತ್ತಿದ್ದಾರೆ. ಅ.27 ರಂದು ಮತ ಎಣಿಕೆ ನಡೆಯಲಿದ್ದು, ಬಹುತೇಕ ಅಂದು ಸಂಜೆ ವೇಳೆಗೆ ಫಲಿತಾಂಶ ದೊರೆಯುವ ಸಾಧ್ಯತೆಯಿದೆ. ಪ್ರಾಶಸ್ತ್ಯದ ಮತದಾನವಾಗಿರುವುದರಿಂದ ಫಲಿತಾಂಶ ವಿಳಂಬವಾದರೂ ಆಗಬಹುದು.

ವಿಧಾನಪರಿಷತ್‌ ಸದಸ್ಯತ್ವದಿಂದ ಚಿದಾನಂದ ಎಂ.ಗೌಡ, ಎಸ್‌‍.ವಿ.ಸಂಕನೂರ, ಶಶಿಲ್‌ ಜಿ ನಮೋಶಿ ಹಾಗೂ ಪುಟ್ಟಣ್ಣ ಅವರು ನ.11 ರಂದು ನಿವೃತ್ತಿ ಹೊಂದಲಿದ್ದಾರೆ.ಇವರ ನಿವೃತ್ತಿಯಿಂದ ತೆರವಾಗುವ ವಿಧಾನಪರಿಷತ್‌ ಸದಸ್ಯ ಸ್ಥಾನಗಳಿಗೆ ಚುನಾವಣಾ ಆಯೋಗ ಚುನಾವಣೆ ಪ್ರಕ್ರಿಯೆಯನ್ನು ಆರಂಭಿಸಿದೆ.

ಎನ್‌ಡಿಎ ಮಿತ್ರಪಕ್ಷಗಳನ್ನು ಬಿಜೆಪಿ ಮತ್ತು ಜೆಡಿಎಸ್‌‍ ಹೊಂದಾಣಿಕೆ ಮಾಡಿಕೊಂಡಿದ್ದು, ಮೂರು ಕ್ಷೇತ್ರಗಳಲ್ಲಿ ಬಿಜೆಪಿ, ಒಂದು ಕ್ಷೇತ್ರದಲ್ಲಿ ಜೆಡಿಎಸ್‌‍ ಸ್ಪರ್ಧಿಸಿದೆ. ಆಡಳಿತಾರೂಢ ಕಾಂಗ್ರೆಸ್‌‍ ನಾಲ್ಕು ಕ್ಷೇತ್ರಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದೆ.

RELATED ARTICLES
spot_img

Latest News