ನಿತ್ಯ ನೀತಿ : ಇರೋದು ಇರುತ್ತದೆ, ಹೋಗೋದು ಹೋಗುತ್ತದೆ, ಯಾವುದನ್ನೂ ಹೆಚ್ಚಿಗೆ ಹಚ್ಚಿಕೊಳ್ಳದೆ ಸಮಧಾನಿಯಾಗಿರಬೇಕು. ಇದೆ ಸುಖ ಜೀವನದ ಸೂತ್ರ.
ಪಂಚಾಂಗ : ಬುಧವಾರ, 14-10-2026
ಪರಾಭವ ನಾಮ ಸಂವತ್ಸರ / ಆಯನ:ದಕ್ಷಿಣಾಯನ ಋತು: ಸೌರ ಶರದ / ಮಾಸ: ಆಶ್ವಯುಜ / ಪಕ್ಷ: ಶುಕ್ಲ / ತಿಥಿ: ಚತುರ್ಥಿ / ನಕ್ಷತ್ರ: ಅನುರಾಧಾ / ಯೋಗ: ಆಯುಷಾನ / ಕರಣ: ವಣಿಜ
ಸೂರ್ಯೋದಯ – ಬೆ.6.10
ಸೂರ್ಯಾಸ್ತ – 06.03
ರಾಹುಕಾಲ – 12.00-1.30
ಯಮಗಂಡ ಕಾಲ – 7.30-9.00
ಗುಳಿಕ ಕಾಲ – 10.30-12.00
ರಾಶಿಭವಿಷ್ಯ :
ಮೇಷ: ಅಂದುಕೊಂಡ ಕೆಲಸಗಳು ಯಾವುದೇ ಅಡೆತಡೆಗಳಿಲ್ಲದೆ ನೆರವೇರಲಿವೆ.
ವೃಷಭ: ಧ್ಯಾನ ಮಾಡುವುದರಿಂದ ಮನಸ್ಸು ನಕಾರಾತ್ಮಕ ಭಾವನೆಯಿಂದ ಹೊರಬರಲಿದೆ.
ಮಿಥುನ: ಬಹಳ ದಿನಗಳ ನಂತರ ಕಚೇರಿಯ ಕೆಲಸ-ಕಾರ್ಯಗಳಲ್ಲಿ ತೃಪ್ತಿಕರವಾಗಲಿದೆ.
ಕಟಕ: ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ವಿದೇಶ ಪ್ರಯಾಣ ಮಾಡಬೇಕಾದ ಸಂದರ್ಭ ಬರಲಿದೆ.
ಸಿಂಹ: ಸಂಗಾತಿಯೊಂದಿಗೆ ಇದ್ದ ಕೆಲವು ಭಿನ್ನಾಭಿಪ್ರಾಯಗಳು ಬಗೆಹರಿಯಬಹುದು.
ಕನ್ಯಾ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ತುಲಾ: ತಂದೆ-ತಾಯಿಯರ ಹಿತವಚನವನ್ನು ಸಹನೆ ಯಿಂದ ಕೇಳುವುದು ಒಳಿತು.
ವೃಶ್ಚಿಕ: ಆರ್ಥಿಕ ವಿಚಾರದಲ್ಲಿ ತಕ್ಕಮಟ್ಟಿನ ಸುಧಾರಣೆ ಕಂಡುಕೊಳ್ಳುವಿರಿ.
ಧನುಸ್ಸು: ವಾಹನ ಚಾಲನೆ ಹಾಗೂ ವಾಹನದಲ್ಲಿ ಪ್ರಯಾಣಿಸುವಾಗ ಹೆಚ್ಚು ಜಾಗೃತರಾಗಿರಿ.
ಮಕರ: ಅತಿಯಾದ ಆಲಸ್ಯ ನಿಮ್ಮ ಕೆಲಸಕ್ಕೆ ಅಡ್ಡಿ ಉಂಟುಮಾಡಲಿದೆ. ದೂರ ಪ್ರಯಾಣ ಬೇಡ.
ಕುಂಭ: ಆಹಾರದಲ್ಲಿನ ಬದಲಾವಣೆಯಿಂದಾಗಿ ಆರೋಗ್ಯದಲ್ಲಿ ವ್ಯತ್ಯಾಸವಾಗಲಿದೆ.
ಮೀನ: ವೃತ್ತಿ ಜೀವನದಲ್ಲಿ ಬಹಳಷ್ಟು ಬದಲಾವಣೆ ಗಳಾಗಲಿವೆ. ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವಿರಿ.
