ಗೌರಿಬಿದನೂರು,ಡಿ.20-ಬುಲೋರೋ ಮತ್ತು ಸಿಮೆಂಟ್ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಎರಡೂ ವಾಹನಗಳ ಚಾಲಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಪೊತೇನಹಳ್ಳಿ ಬಳಿ ಜರುಗಿದೆ.
ತಾಲೂಕಿನ ಜಕ್ಕೇನಹಳ್ಳಿ ಗ್ರಾಮದ ನಿವಾಸಿ ಆಶೋಕ್(25) ಹಾಗೂ ಆಂಧ್ರ ಪ್ರದೇಶದ ಸಂಜೀವರಾಯನಪಲ್ಲಿ ನಿವಾಸಿ ನಾಗರಾಜಪ್ಪ(45) ಸ್ಥಳದಲ್ಲೇ ಮೃತಪಟ್ಟಿರುವ ಚಾಲಕರು ಎಂದು ಗುರುತಿಸಲಾಗಿದೆ.
ಹಿಂದೂಪುರದ ಕಡೆಯಿಂದ ತೊಂಡೇಬಾವಿ ಗ್ರಾಮದ ಎಸಿಸಿ ಸಿಮೆಂಟ್ ಕಾರ್ಖಾನೆಗೆ ತೆರಳುತ್ತಿದ್ದ ಸಿಮೆಂಟ್ ಲಾರಿ ಹಾಗೂ ಬೆಂಗಳೂರು ಕಡೆಯಿಂದ ಗೌರಿಬಿದನೂರು ಕಡೆಗೆ ಬರುತ್ತಿದ್ದ ಬುಲೇರೋ ವಾಹನ ನಡುವೆ ಮುಖಾಮುಖಿ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.
ಈ ಸಂಬಂಧ ಮಂಚೇನಹಳ್ಳಿ ಪೊಲೀಸ್ ಠಾಣೆಯ ಎಸ್ಸೈ ಎಂ.ಪುನೀತ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಇಬ್ಬರ ಮೃತದೇಹಗಳನ್ನು ವಾಹನಗಳಿಂದ ಹೊರ ತೆಗೆದು ಆಸ್ಪತ್ರೆಗೆ ರವಾನಿಸಿದ್ದಾರೆ.ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.
