ಹಾಸನ,ಅ.15- ಈ ಬಾರಿ ಹಾಸನಾಂಬ ದೇವಿ ದರ್ಶನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಲಿರುವ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ವತಿಯಿಂದ ವಿಶೇಷ ರೈಲುಗಳ ವ್ಯವಸ್ಥೆ ಮಾಡಿದೆ.
ಬೆಂಗಳೂರು-ಹಾಸನ, ಬೆಂಗಳೂರು-ಅರಸೀಕೆರೆ, ಹಾಸನ-ಅರಸೀಕೆರೆ ಮಾರ್ಗವಾಗಿ 2 ವಿಶೇಷ ರೈಲುಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿದೆ. ಬೆಂಗಳೂರು-ಹಾಸನ-ಬೆಂಗಳೂರು ಎಕ್್ಸಪ್ರೆಸ್ ವಿಶೇಷ ರೈಲು ಇದೇ 29 ರಿಂದ ನ.11 ರವರೆಗೆ ಪ್ರತೀದಿನ ಸಂಚರಿಸಲಿದೆ.
ರೈಲು ಬೆಳಿಗ್ಗೆ 7.30ಕ್ಕೆ ಬೆಂಗಳೂರಿನಿಂದ ಹೊರಟು 11.30ಕ್ಕೆ ಹಾಸನ ತಲುಪಿಲಿದೆ. ಮಧ್ಯಾಹ್ನ 3.15ಕ್ಕೆ ಹಾಸನ ಬಿಟ್ಟು ರಾತ್ರಿ 7 ಗಂಟೆಗೆ ಬೆಂಗಳೂರು ತಲುಪಲಿದೆ. ಈ ರೈಲು ಯಶವಂತಪುರ, ನೆಲಮಂಗಲ, ಕುಣಿಗಲ್, ಯಡಿಯೂರು ಮತ್ತಿತರ ನಿಲ್ದಾಣಗಳಲ್ಲಿ ನಿಲ್ಲಿಸಲಾಗುವುದು ಎಂದು ರೈಲ್ವೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
