ಬೆಂಗಳೂರು,ಏ.4- ಕರ್ನಾಟಕದಲ್ಲಿ ಲೋಕಸಭಾ ಚುನಾವಣೆ ರಂಗೇರಿದ್ದು, ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳು ತಮ್ಮ ನಿಗದಿತ ಗುರಿ ಮುಟ್ಟಲು ಶಕ್ತಿ ಮೀರಿ ಪ್ರಯತ್ನಿಸುತ್ತಿವೆ. ಬಿಜೆಪಿ- ಜೆಡಿಎಸ್ ಮೈತ್ರಿ ರಾಜ್ಯದ 28 ಕ್ಷೇತ್ರಗಳನ್ನು ಗೆಲ್ಲುವ ಗುರಿ ಹೊಂದಿದ್ದರೆ, ಕಾಂಗ್ರೆಸ್ ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲುವ ಕನಸು ಕಾಣುತ್ತಿದೆ.
ಇದರ ನಡುವೆ ಇಂಡಿಯಾ ಟಿವಿ – ಸಿಎನ್‍ಎಕ್ಸ್ ಸಮೀಕ್ಷೆ ಪ್ರಕಟವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್‍ಗೆ ಸಮೀಕ್ಷೆಯ ವರದಿ ಶಾಕ್ ನೀಡಿದೆ. ಬಿಜೆಪಿ ಕಳೆದ ಬಾರಿಗಿಂತ ಕೆಲವು ಕ್ಷೇತ್ರಗಳನ್ನು ಕಾಂಗ್ರೆಸ್‍ಗೆ ಬಿಟ್ಟುಕೊಡಲಿದೆ. ಜೆಡಿಎಸ್ ಈ ಬಾರಿ ಒಂದು ಕ್ಷೇತ್ರವನ್ನು ಹೆಚ್ಚು ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ.
ಕಾಂಗ್ರೆಸ್ ಕಳೆದ ಬಾರಿಗಿಂತ ಹೆಚ್ಚಿನ ಸ್ಥಾನ ಗೆದ್ದರೂ ನಿಗದಿತ ಗುರಿ ಮುಟ್ಟಿಲ್ಲ. ಅದಲ್ಲದೇ ಕಳೆದ 20 ವರ್ಷಗಳಲ್ಲಿ ಎರಡಂಕಿ ದಾಟದ ಕಳಪೆ ಸಾಧನೆಯನ್ನು ಕಾಂಗ್ರೆಸ್ ಮುಂದುವರಿಸಲಿದೆ ಎಂದು ತಿಳಿಸಿದೆ. ಬಿಜೆಪಿ ರಾಜ್ಯದ 28 ಕ್ಷೇತ್ರಗಳ ಪೈಕಿ 25 ಕ್ಷೇತ್ರಗಳಲ್ಲಿ ಸ್ಪರ್ಧಿಸಿದೆ.
ಅದರಲ್ಲಿ 22 ಕ್ಷೇತ್ರಗಳನ್ನು ಗೆಲ್ಲಲಿದ್ದು, ಜೆಡಿಎಸ್ ಸ್ರ್ಪಧಿಸಿದ ಮೂರು ಕ್ಷೇತ್ರಗಳ ಪೈಕಿ 2 ಕ್ಷೇತ್ರಗಳಲ್ಲಿ ಗೆಲ್ಲಲಿದೆ ಎಂದು ಸಮೀಕ್ಷೆ ಹೇಳಿದೆ. ಇದರಿಂದ 28 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಗುರಿ ಇಟ್ಟುಕೊಂಡಿದ್ದ ಬಿಜೆಪಿ-ಜೆಡಿಎಸ್ ಮೈತ್ರಿ 24 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಿದೆ. ಇನ್ನು ಬಿಜೆಪಿ ಕಳೆದ ಬಾರಿ ಪಕ್ಷೇತರ ಸಂಸದೆ ಸುಮಲತಾ ಸೇರಿ 26 ಸಂಸದರನ್ನು ಹೊಂದಿತ್ತು. ಅದು ಈ ಬಾರಿ 22 ಆಗಲಿದ್ದು, 4 ಸ್ಥಾನಗಳ ನಷ್ಟ ಅನುಭವಿಸಲಿದೆ ಎಂದು ಸಮೀಕ್ಷಾ ವರದಿಯಲ್ಲಿ ಹೇಳಲಾಗಿದೆ.
ಇನ್ನು, ಕಾಂಗ್ರೆಸ್ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಗೆಲುವು ಸಾಧಿಸಲಿದೆ ಎಂದು ಸಮೀಕ್ಷೆ ತಿಳಿಸಿದ್ದು, ಕಳೆದ ಬಾರಿಗಿಂತ ಮೂರು ಕ್ಷೇತ್ರಗಳ ಲಾಭ ಕಾಂಗ್ರೆಸ್‍ಗೆ ಆಗಲಿದೆ. ಆದರೆ, ರಾಜ್ಯದಲ್ಲಿ ಆಡಳಿತದಲ್ಲಿರುವ ಕಾಂಗ್ರೆಸ್, ಗ್ಯಾರಂಟಿ ಯೋಜನೆಗಳ ಹೊರತಾಗಿಯೂ ಕೇವಲ ನಾಲ್ಕು ಕ್ಷೇತ್ರಗಳಿಗೆ ಸೀಮಿತವಾಗುತ್ತಿರುವುದು ಕಾಂಗ್ರೆಸ್‍ಗೆ ಶಾಕಿಂಗ್ ಸುದ್ದಿಯೇ. ಕನಿಷ್ಠ 20 ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಗುರಿಯನ್ನು ಇಟ್ಟುಕೊಂಡಿರುವ ಕಾಂಗ್ರೆಸ್‍ಗೆ ನಿರಾಸೆ ತಂದಿರುವುದಂತೂ ನಿಜ.
ಕರಾವಳಿ ಕರ್ನಾಟಕದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲ್ಲಲಿದ್ದು,ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ- ಚಿಕ್ಕಮಗಳೂರು ಕ್ಷೇತ್ರಗಳು ಬಿಜೆಪಿ ಪಾಲಾದರೆ, ಉತ್ತರ ಕರ್ನಾಟಕದ 9 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದು ಹೇಳಲಾಗಿದೆ.
ಇನ್ನು, ಜೆಡಿಎಸ್ ಮಂಡ್ಯ ಮತ್ತು ಹಾಸನದಲ್ಲಿ ಗೆಲ್ಲಬಹುದು ಎಂದು ಸಮೀಕ್ಷೆ ಹೇಳಿದೆ. ಮಧ್ಯ ಕರ್ನಾಟಕ ಹಾಗೂ ಹಳೇ ಮೈಸೂರು ಪ್ರಾಂತ್ಯದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಫೈಟ್ ಇದೆ ಎನ್ನಲಾಗಿದೆ.ಇಂಡಿಯಾ ಟಿವಿ ಸಿಎನ್‍ಎಕ್ಸ್ ಸಮೀಕ್ಷೆ, 2019ರ ಲೋಕಸಭಾ ಚುನಾವಣೆ ಫಲಿತಾಂಶ
ಪಕ್ಷ ಫಲಿತಾಂಶ ಲಾಭ – ನಷ್ಟ
ಬಿಜೆಪಿ 25ರಿಂದ 122 4 ಕ್ಷೇತ್ರಗಳ ನಷ್ಟ
ಕಾಂಗ್ರೆಸ್ 01ರಿಂದ 04 3 ಕ್ಷೇತ್ರಗಳ ಲಾಭ
ಜೆಡಿಎಸ್ 01ರಿಂದ 02 1 ಕ್ಷೇತ್ರ ಲಾಭ
.