ಕೋಲ್ಕತ್ತಾ,ಅ.18- ಪಶ್ಚಿಮ ಬಂಗಾಳದ ಉತ್ತರ ಕೋಲ್ಕತ್ತಾದ ಚೋರ್ಬಗನ್ ಸರ್ಬೋಜನಿನ್ ದುರ್ಗಾ ಪೂಜಾ ಮಂಟಪದಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ ಕನಿಷ್ಠ 19 ಮಂದಿ ಮತಪಟ್ಟಿದ್ದು, ಸುಮಾರು 25 ಜನರು ಗಾಯಗೊಂಡಿದ್ದಾರೆ.
ಘಟನೆಗೆ ಸಂಬಂಧಿಸಿದಂತೆ ಪೂಜಾ ಆಯೋಜನಾ ಸಮಿತಿಯ ಸದಸ್ಯರು ಸೇರಿದಂತೆ ಏಳು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ದುರಂತದ ಹಿನ್ನೆಲೆಯಲ್ಲಿ ತನಿಖೆಗೆ ಆದೇಶಿಸಿರುವ ರಾಜ್ಯ ಸರ್ಕಾರ, ಮತರ ಕುಟುಂಬಗಳಿಗೆ ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಯ ಹೊಣೆಯನ್ನು ವಹಿಸಿಕೊಂಡಿದೆ.
ಗಿರೀಶ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯ ಶಾರದಾ ಪಾರ್ಕ್ನಲ್ಲಿರುವ ಚೋರ್ಬಗನ್ ದುರ್ಗಾ ಪೂಜಾ ಮಂಟಪದಲ್ಲಿ ಶನಿವಾರ ಸಂಜೆ ಸುಮಾರು 7.40ರ ವೇಳೆಗೆ ಈ ದುರಂತ ಸಂಭವಿಸಿದೆ. ಸಪ್ತಮಿ ಹಬ್ಬದ ಹಿನ್ನೆಲೆಯಲ್ಲಿ ಭಾರೀ ಸಂಖ್ಯೆಯಲ್ಲಿ ಭಕ್ತರು ಮಂಟಪಕ್ಕೆ ಆಗಮಿಸಿದ್ದರು. ಇದರ ನಡುವೆ ಮಳೆಯೂ ಸುರಿಯುತ್ತಿದ್ದುದರಿಂದ ನಿರ್ಗಮನ ದ್ವಾರದ ಬಳಿ ಜನದಟ್ಟಣೆ ಹೆಚ್ಚಾಗಿ ಕಾಲ್ತುಳಿತ ಉಂಟಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಪ್ರತ್ಯಕ್ಷದರ್ಶಿಗಳ ಪ್ರಕಾರ, ಮಂಟಪದ ಪ್ರವೇಶ ಮತ್ತು ನಿರ್ಗಮನ ದ್ವಾರಗಳು ಕಿರಿದಾಗಿದ್ದವು. ಅಲ್ಲದೆ, ಆವರಣದಲ್ಲಿ ಸೂಕ್ತ ಬೆಳಕಿನ ವ್ಯವಸ್ಥೆಯ ಕೊರತೆಯೂ ಇತ್ತು ಎನ್ನಲಾಗಿದೆ. ಜನರು ನೂಕುನುಗ್ಗಲಿನಲ್ಲಿ ಉಸಿರುಗಟ್ಟಿ ಕೆಲವರು ಕುಸಿದುಬಿದ್ದಿದ್ದು, ಕೆಲವರನ್ನು ತುರ್ತಾಗಿ ಮೋಟಾರ್ಸೈಕಲ್ಗಳ ಮೂಲಕ ಆಸ್ಪತ್ರೆಗೆ ಸಾಗಿಸಲಾಗಿದೆ. ಜನದಟ್ಟಣೆಯ ಒತ್ತಡದಿಂದ ತಾತ್ಕಾಲಿಕ ರಚನೆಯ ಒಂದು ಭಾಗ ಕುಸಿದಿರುವ ಸಾಧ್ಯತೆಯನ್ನೂ ವರದಿಗಳು ಉಲ್ಲೇಖಿಸಿವೆ.
ಏಳು ಮಂದಿಯ ಬಂಧನ; ತನಿಖೆ ಚುರುಕು
ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಆರಂಭದಲ್ಲಿ ಹಲವು ಮಂದಿಯನ್ನು ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದ್ದು, ಬಳಿಕ ಆಯೋಜನಾ ಸಮಿತಿಯ ಸದಸ್ಯರು ಸೇರಿದಂತೆ ಏಳು ಮಂದಿಯನ್ನು ಬಂಧಿಸಲಾಗಿದೆ. ದುರಂತಕ್ಕೆ ನಿಖರ ಕಾರಣವೇನು, ಜನಸಂದಣಿ ನಿಯಂತ್ರಣದಲ್ಲಿ ಲೋಪವಾಗಿದೆಯೇ ಮತ್ತು ಸುರಕ್ಷತಾ ಕ್ರಮಗಳನ್ನು ಸಮರ್ಪಕವಾಗಿ ಕೈಗೊಳ್ಳಲಾಗಿತ್ತೇ ಎಂಬುದರ ಕುರಿತು ತನಿಖೆ ನಡೆಯುತ್ತಿದೆ.
ಘಟನೆಯ ಬಳಿಕ ಚೋರ್ಬಗನ್ ದುರ್ಗಾ ಪೂಜಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಂತ ಬ್ಯಾನರ್ಜಿ ತಮ ಹ್ದುೆಗೆ ರಾಜೀನಾಮೆ ನೀಡಿದ್ದಾರೆ. ಸಮಿತಿಯ ಇತರ ಪದಾಧಿಕಾರಿಗಳೂ ರಾಜೀನಾಮೆ ನೀಡಿರುವುದಾಗಿ ವರದಿಯಾಗಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಪೂಜಾ ಮಂಟಪವನ್ನು ಸಾರ್ವಜನಿಕರ ಪ್ರವೇಶಕ್ಕೆ ಮುಚ್ಚಲಾಗಿದೆ.
ಸರ್ಕಾರದಿಂದ ಪರಿಹಾರ ಘೋಷಣೆ:
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಹಾಗೂ ಮುಖ್ಯ ಕಾರ್ಯದರ್ಶಿ ಮನೋಜ್ ಅಗರ್ವಾಲ್ ಅವರು ಕಲ್ಕತ್ತಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯದ ಕುರಿತು ಮಾಹಿತಿ ಪಡೆದಿದ್ದಾರೆ. ಆರೋಗ್ಯ ಸಚಿವರೂ ಗಾಯಾಳುಗಳನ್ನು ಭೇಟಿ ಮಾಡಿದ್ದಾರೆ.
ದುರಂತದ ಕುರಿತು ನ್ಯಾಯಸಮತ ತನಿಖೆ ನಡೆಸಲು ಹಾಲಿ ಹೈಕೋರ್ಟ್ ನ್ಯಾಯಾಧೀಶರ ನೇತತ್ವದಲ್ಲಿ ಸತ್ಯಶೋಧನಾ ಸಮಿತಿ ರಚಿಸುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದಾರೆ.
- ಮತರ ಕುಟುಂಬಗಳಿಗೆ ತಲಾ 25 ಲಕ್ಷ ರೂ. ಪರಿಹಾರ ಹಾಗೂ ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗ ನೀಡುವುದಾಗಿ ರಾಜ್ಯ ಸರ್ಕಾರ ಘೋಷಿಸಿದೆ.
- ಗಾಯಾಳುಗಳ ಸಂಪೂರ್ಣ ವೈದ್ಯಕೀಯ ಚಿಕಿತ್ಸೆಯ ವೆಚ್ಚವನ್ನು ಸರ್ಕಾರವೇ ಭರಿಸಲಿದ್ದು, ಪ್ರತಿಯೊಬ್ಬ ಗಾಯಾಳುವಿಗೂ 5 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ.- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮತರ ಕುಟುಂಬದವರಿಗೆ ತಲಾ 2 ಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ಪರಿಹಾರ ಘೋಷಿಸಿದ್ದಾರೆ.- ಸಂತ್ರಸ್ತರಿಗೆ ನೆರವು ಒದಗಿಸಲು ರಾಜ್ಯ ಸರ್ಕಾರ 18003455678 ಉಚಿತ ಸಹಾಯವಾಣಿಯನ್ನು ಆರಂಭಿಸಿದೆ.
ರಾಜಕೀಯ ನಾಯಕರ ಸಂತಾಪ; ಕಾರ್ಯಕ್ರಮಗಳು ರದ್ದು
ದುರಂತದ ಹಿನ್ನೆಲೆಯಲ್ಲಿ ಕೇಂದ್ರ ಗಹ ಸಚಿವ ಅಮಿತ್ ಶಾ ಅವರು ಸಂತಾಪ ಸೂಚಿಸಿದ್ದು, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಅವರೊಂದಿಗೆ ಮಾತನಾಡಿದ್ದಾರೆ. ಗಾಯಾಳುಗಳನ್ನು ಭೇಟಿ ಮಾಡುವ ಉದ್ದೇಶದಿಂದ ಪಶ್ಚಿಮ ಬಂಗಾಳದಲ್ಲಿ ಭಾನುವಾರ ನಿಗದಿಯಾಗಿದ್ದ ತಮ ಕಾರ್ಯಕ್ರಮಗಳನ್ನು ಮುಂದೂಡಿದ್ದಾರೆ. ರಾಜ್ಯ ಸರ್ಕಾರವೂ ಭಾನುವಾರದ ಹಲವು ಕಾರ್ಯಕ್ರಮಗಳನ್ನು ರದ್ದುಗೊಳಿಸಿದೆ ಎಂದು ವರದಿಯಾಗಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ರಾಜ್ಯಪಾಲ ಆರ್.ಎನ್. ರವಿ ಸೇರಿದಂತೆ ಹಲವು ನಾಯಕರು ಜೀವಹಾನಿಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡಬೇಕು ಮತ್ತು ಘಟನೆಯ ಕುರಿತು ಪಾರದರ್ಶಕ ತನಿಖೆ ನಡೆಸಬೇಕು ಎಂದು ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ.
ಇದೇ ವೇಳೆ, ದುರಂತ ಸಂಭವಿಸಿದ ಸ್ಥಳದಲ್ಲಿ ಪೊಲೀಸ್ ಸಿಬ್ಬಂದಿ, ನಾಗರಿಕ ಸ್ವಯಂಸೇವಕರು, ಆಂಬ್ಯುಲೆನ್್ಸಗಳು ಹಾಗೂ ಜನಸಂದಣಿ ನಿಯಂತ್ರಣದ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ತಣಮೂಲ ಕಾಂಗ್ರೆಸ್ ಆರೋಪಿಸಿದೆ. ಘಟನೆಗೆ ಸಂಬಂಧಿಸಿದಂತೆ ಆಡಳಿತದ ಹೊಣೆಗಾರಿಕೆಯನ್ನು ನಿಗದಿಪಡಿಸಬೇಕು ಎಂದು ಪಕ್ಷ ಒತ್ತಾಯಿಸಿದೆ.
