Homeರಾಷ್ಟ್ರೀಯವಿಯೆಟ್ನಾಂಗೆ ಹಾರಿದ ರಾಹುಲ್‌ ಗಾಂಧಿ

ವಿಯೆಟ್ನಾಂಗೆ ಹಾರಿದ ರಾಹುಲ್‌ ಗಾಂಧಿ

ನವದೆಹಲಿ, ಅ. 19- ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌‍ಐಆರ್‌) ಪ್ರಕ್ರಿಯೆ ವಿರೋಧಿಸಿ ಕಾಂಗ್ರೆಸ್‌‍ ಪ್ರತಿಭಟನೆ ನಡೆಸುತ್ತಿರುವ ನಡುವೆಯೇ ಲೋಕಸಭೆ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಮತ್ತೊಮೆ ವಿದೇಶಕ್ಕೆ ಹಾರಿದ್ದಾರೆ.

ಇಂತಹ ಪ್ರಮುಖ ಬೆಳವಣಿಗೆಗಳ ನಡುವೆಯೂ ರಾಹುಲ್‌ ಗಾಂಧಿ ವಿಯೆಟ್ನಾಂಗೆ ತೆರಳಿದ್ದಾರೆ ಎಂದು ಮೂಲಗಳು ತಿಳಿಸಿವೆ.ನಿನ್ನೆ ಮಧ್ಯಾಹ್ನ 1.35ರ ಸುಮಾರಿಗೆ ದೆಹಲಿಯ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹನೋಯಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ಮೂಲಗಳನ್ನು ಆಧರಿಸಿ ಮಾಧ್ಯಮಗಳು ವರದಿ ಮಾಡಿವೆ.

ಉತ್ತರ ಪ್ರದೇಶದ ರಾಯ್‌ ಬರೇಲಿ ಲೋಕಸಭಾ ಕ್ಷೇತ್ರದ ಸದಸ್ಯರಾಗಿರುವ ರಾಹುಲ್‌ ಗಾಂಧಿ, ವೈಯಕ್ತಿಕ ಭೇಟಿಗಾಗಿ ಹನೋಯಿಗೆ ತೆರಳಿದ್ದಾರೆಯೇ ಅಥವಾ ಅಲ್ಲಿ ನಡೆಯುವ ಯಾವುದಾದರೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆಯೇ? ಎಂಬುದು ಇನ್ನೂ ಸ್ಪಷ್ಟವಾಗಿಲ್ಲ. ಈ ಕುರಿತು ಕಾಂಗ್ರೆಸ್‌‍ ಪಕ್ಷದಿಂದ ಯಾವುದೇ ಅಧಿಕೃತ ಹೇಳಿಕೆಯೂ ಬಂದಿಲ್ಲ.
ರಾಹುಲ್‌ ಗಾಂಧಿ ಅವರ ವಿದೇಶ ಪ್ರವಾಸಗಳು ಆಗಾಗ್ಗೆ ಚರ್ಚೆಗೆ ಗ್ರಾಸವಾಗುತ್ತಲೇ ಬಂದಿವೆ.

ಬಿಜೆಪಿ ಇದೇ ವಿಷಯವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್‌‍ ನಾಯಕನನ್ನ ಟೀಕಿಸುತ್ತಾ ಬರುತ್ತಿದೆ.
ವಿದೇಶಿ ಕಾರ್ಯಕ್ರಮಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರವನ್ನು ಟೀಕಿಸುವ ಮೂಲಕ ರಾಹುಲ್‌ ಗಾಂಧಿ ಭಾರತದ ವರ್ಚಸ್ಸಿಗೆ ಧಕ್ಕೆ ತರುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸುತ್ತಲೇ ಇದೆ.

ಈ ವರ್ಷದ ಜನವರಿಯಲ್ಲಿಯೂ ರಾಹುಲ್‌ ಗಾಂಧಿ ವಿಯೆಟ್ನಾಂಗೆ ಭೇಟಿ ನೀಡಿದ್ದರು. ಆಗ, ಅವರನ್ನು ವಿದೇಶಿ ಕಾರ್ಯಕ್ರಮಗಳಿಗೆ ಆಹ್ವಾನಿಸುವವರು ಯಾರೆಂಬುದನ್ನು ಕಾಂಗ್ರೆಸ್‌‍ ಬಹಿರಂಗಪಡಿಸಬೇಕು ಎಂದು ಬಿಜೆಪಿ ಆಗ್ರಹಿಸಿತ್ತು.

RELATED ARTICLES
spot_img

Latest News