ಬೆಂಗಳೂರು, ಡಿ.20– ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷ ದೊಡ್ಡ ಬೊಮಯ್ಯ ಅವರು ಇಂದು ನಿಧನರಾಗಿದ್ದಾರೆ. ಮೂಲತಃ ತುಮಕೂರು ಜಿಲ್ಲೆಯ ಪಾವಗಡ ತಾಲ್ಲೂಕಿನ ರೊಪ್ಪ ಗ್ರಾಮದ ದೊಡ್ಡಯ್ಯ ಮತ್ತು ಚಿಕ್ಕಮ ದಂಪತಿಯ ಹಿರಿಯ ಪುತ್ರರಾದ ದೊಡ್ಡಬೊಮಯ್ಯ ಅವರು ಈ ಮೊದಲು ಸಂಜೆವಾಣಿ ಮತ್ತು ಪ್ರಸ್ತುತ ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಆಕಾಶವಾಣಿ ಮತ್ತು ದೂರದರ್ಶನದಲ್ಲಿ ಅರೆಕಾಲಿಕ ಸಹಾಯಕ ಸುದ್ದಿ ಸಂಪಾದಕರಾಗಿ ಕೆಲಸ ಮಾಡಿದ್ದರು. ಸುಮಾರು 30 ವರ್ಷ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದ ಅವರು, ಅಪಾರವಾದ ಆತೀಯ ಬಳಗವನ್ನು ಗಳಿಸಿಕೊಂಡಿದ್ದರು.
ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದ ಕಾರ್ಯಕಲಾಪಗಳ ವರದಿಗಾಗಿ ತೆರಳಿದ್ದ ಅವರು ಇಂದು ಬೆಳಗ್ಗೆ ಬೆಂಗಳೂರಿಗೆ ವಾಪಸ್ಸಾಗಿದ್ದರು. ಕೆಎಸ್‌ಆರ್‌ಟಿಸಿ ಬಸ್‌ನಿಂದ ಇಳಿದು, ಬಾಗಲೂರಿನಲ್ಲಿರುವ ತಮ ಮನೆ ತಲುಪಲು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಬಿಎಂಟಿಸಿ ಬಸ್ ಹತ್ತಿ ಕುಳಿತಿದ್ದ ಸಂದರ್ಭದಲ್ಲಿ ತೀವ್ರ ಹೃದಯಾಘಾತವಾಗಿದೆ. ಸಹಪ್ರಯಾಣಿಕರು ಉಪಚರಿಸಿದ ಹೊರತಾಗಿಯೂ ಬಸ್‌ನಲ್ಲಿಯೇ ನಿಧನ ಹೊಂದಿದ್ದಾರೆ.
ಮೃತರು ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾಗಿದ್ದರು. ಪ್ರೆಸ್ ಕ್ಲಬ್ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು.ನಿಧನರಾಗಿರುವ ದೊಡ್ಡಬೊಮಯ್ಯ ಅವರ ನೇತ್ರಗಳನ್ನು ಅವರ ಕುಟುಂಬ ವರ್ಗದವರು ದಾನ ಮಾಡಿ ದುಃಖದಲ್ಲೂ ಮಾನವೀಯತೆ ಮೆರೆದಿದ್ದಾರೆ.
ದೊಡ್ಡಬೊಮಯ್ಯ ಅವರ ನಿಧನಕ್ಕೆ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್, ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಅಧ್ಯಕ್ಷ ರಮೇಶ್‌ಪಾಳ್ಯ, ಸಂಘದ ಪದಾಧಿಕಾರಿಗಳು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್‌ಕ್ಲಬ್ ಅಧ್ಯಕ್ಷ ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ವರದಿಗಾರರ ಕೂಟದ ಅಧ್ಯಕ್ಷ ಆರ್.ಟಿ.ವಿಠಲ ಮೂರ್ತಿ ಸೇರಿದಂತೆ ಹಲವು ಗಣ್ಯರು, ಹಿರಿಯ ಪತ್ರಕರ್ತರು ಶೋಕ ವ್ಯಕ್ತಪಡಿಸಿದ್ದಾರೆ.
ವಾರ್ತಾ ಇಲಾಖೆಯ ಆಯುಕ್ತರಿಂದ ಸಂತಾಪ :
ಹಿರಿಯ ಪತ್ರಕರ್ತ ದೊಡ್ಡಬೊಮಯ್ಯ ನಿಧನಕ್ಕೆ ವಾರ್ತಾ ಇಲಾಖೆಯ ಆಯುಕ್ತರಿಂದ ಸಂತಾಪ
ಬೆಂಗಳೂರು,ಡಿ.20- ಹಿರಿಯ ಪತ್ರಕರ್ತರು ಹಾಗೂ ಕರ್ನಾಟಕ ಪತ್ರಕರ್ತರ ಸಹಕಾರ ಸಂಘದ ಉಪಾಧ್ಯಕ್ಷರಾದ ದೊಡ್ಡಬೊಮ್ಮಯ್ಯ ಅವರು ತೀವ್ರ ಹೃದಯಾಘಾತದಿಂದ ನಿಧನರಾಗಿರುವುದು ಅತ್ಯಂತ ದುಃಖಕರ ಸಂಗತಿಯಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರು ತಮ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಇಂದು ಸಂಜೆ ಪತ್ರಿಕೆಯಲ್ಲಿ ವರದಿಗಾರರಾಗಿ ಕಾರ್ಯ ನಿರ್ವಹಿಸುತ್ತಿದ್ದ ದೊಡ್ಡಬೊಮಯ್ಯ ಅವರು ದೂರದರ್ಶನ, ಆಕಾಶವಾಣಿ, ಸಂಜೆವಾಣಿ ಸೇರಿದಂತೆ ವಿವಿಧ ಮಾಧ್ಯಮಗಳಲ್ಲಿ ಸತತ 30 ವರ್ಷಗಳಿಗೂ ಹೆಚ್ಚು ಕಾಲ ಪತ್ರಿಕೋದ್ಯಮದಲ್ಲಿ ಸೇವೆ ಸಲ್ಲಿಸಿದ್ದರು.
ಪತ್ರಿಕೋದ್ಯಮದ ಮೂಲಕ ಜನಪರ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದ ಅವರ ಸೇವೆ ಹಾಗೂ ಕಾರ್ಯವೈಖರಿ ಸದಾ ಸರಣೀಯವಾಗಿದೆ. ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನದ ವರದಿಗಾಗಿ ಆಗಮಿಸಿದ್ದ ಅವರು, ಅಧಿವೇಶನ ಮುಗಿಸಿಕೊಂಡು ಡಿ.19ರಂದು ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದರು. ಬೆಂಗಳೂರಿಗೆ ಆಗಮಿಸಿದ ಬಳಿಕ, ಇಂದು ಮುಂಜಾನೆ ಕೆಂಪೇಗೌಡ ಬಸ್ ನಿಲ್ದಾಣದಿಂದ ಮನೆಗೆ ತೆರಳಲು ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ತೀವ್ರ ಹೃದಯಾಘಾತದಿಂದ ಅವರು ನಿಧನರಾಗಿರುವುದು ಅತ್ಯಂತ ದುಃಖಕರವಾಗಿದೆ.
ಶ್ರೀಯುತರ ಅಗಲಿಕೆಯಿಂದ ಪತ್ರಿಕೋದ್ಯಮ ಕ್ಷೇತ್ರವು ಒಬ್ಬ ಹಿರಿಯ ಹಾಗೂ ಅನುಭವಿ ಪತ್ರಕರ್ತರನ್ನು ಕಳೆದುಕೊಂಡಿದ್ದು, ಇದು ತುಂಬಲಾರದ ನಷ್ಟವಾಗಿದೆ. ಅವರ ಆತಕ್ಕೆ ಶಾಂತಿ ಸಿಗಲಿ. ಹಠಾತ್ ನಿಧನದಿಂದ ದುಃಖದಲ್ಲಿರುವ ಕುಟುಂಬ ಸದಸ್ಯರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು ದೇವರು ನೀಡಲಿ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರು ಪ್ರಾರ್ಥಿಸಿದ್ದಾರೆ.
