Homeರಾಷ್ಟ್ರೀಯಭಾರಿ ವಾಗ್ವಾದಕ್ಕೆ ಕಾರಣವಾಗಿದೆ RSS ಕುರಿತು ರಾಹುಲ್‌ ಗಾಂಧಿ ವಿವಾದಾತ್ಮಕ ಹೇಳಿಕೆ

ಭಾರಿ ವಾಗ್ವಾದಕ್ಕೆ ಕಾರಣವಾಗಿದೆ RSS ಕುರಿತು ರಾಹುಲ್‌ ಗಾಂಧಿ ವಿವಾದಾತ್ಮಕ ಹೇಳಿಕೆ

ನವದೆಹಲಿ,ಅ.21- ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌‍ಎಸ್‌‍) ಮಹಿಳೆಯರನ್ನು ಪುರುಷರ ಅಧೀನದಲ್ಲಿಡುವ ಪುರುಷ ಪ್ರಧಾನ ಸಂಘಟನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಟೀಕಿಸಿದ್ದು, ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ವಾಗ್ವಾದಕ್ಕೆ ಕಾರಣವಾಗಿದೆ. ರಾಹುಲ್‌ ಗಾಂಧಿಯವರ ಆರೋಪಗಳಿಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಅವರ ಹೇಳಿಕೆಗಳು ಬಾಲಿಶವಾಗಿವೆ ಎಂದು ತಿರುಗೇಟು ನೀಡಿದ್ದಾರೆ.

ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್‌ ಮಾಡಿರುವ ರಾಹುಲ್‌ ಗಾಂಧಿ, ಆರ್‌ಎಸ್‌‍ಎಸ್‌‍ ಅನ್ನು ಸಂಪೂರ್ಣ ಪುರುಷ ಪ್ರಧಾನ ಮತ್ತು ಸಂವಿಧಾನ ವಿರೋಧಿ ಸಂಘಟನೆ ಎಂದು ಬಣ್ಣಿಸಿದ್ದಾರೆ. ಮಹಿಳೆಯರನ್ನು ಪುರುಷರ ಆಸ್ತಿಯಂತೆ ಪರಿಗಣಿಸುವ ಮನೋಭಾವ ಸಂಘಟನೆಯಲ್ಲಿದೆ ಎಂದು ಆರೋಪಿಸಿದ್ದಾರೆ. ತಾನು ಶಿವ-ಶಕ್ತಿಯಲ್ಲಿ ನಂಬಿಕೆ ಹೊಂದಿದ್ದು, ಆರ್‌ಎಸ್‌‍ಎಸ್‌‍ನ ಇಂತಹ ವಿಚಾರಧಾರೆಗಳ ವಿರುದ್ಧ ಹೋರಾಡುವುದರಲ್ಲಿ ಸಂತೋಷ ಕಾಣುತ್ತೇನೆ ಎಂದೂ ಹೇಳಿದ್ದಾರೆ. ಸಂಘಟನೆಯೊಂದಿಗೆ ಗುರುತಿಸಿಕೊಂಡಿರುವ ಅನೇಕ ಮಹಿಳೆಯರೂ ತಮ್ಮ ಪರವಾಗಿದ್ದಾರೆ ಎಂಬುದು ಸಂತೋಷದ ಸಂಗತಿ ಎಂದು ಅವರು ಪ್ರತಿಪಾದಿಸಿದ್ದಾರೆ.

ಬಿಜೆಪಿಯಿಂದ ತೀವ್ರ ಪ್ರತಿರೋಧ :
ರಾಹುಲ್‌ ಗಾಂಧಿಯವರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಮಹಾರಾಷ್ಟ್ರದ ಬಿಜೆಪಿ ಶಾಸಕ ರಾಮ್‌ ಕದಮ್‌‍, ಆರ್‌ಎಸ್‌‍ಎಸ್‌‍ ಬಗ್ಗೆ ಟೀಕೆ ಮಾಡುವ ಮೊದಲು ಅದರ ಕಾರ್ಯವೈಖರಿಯನ್ನು ಸರಿಯಾಗಿ ಅಧ್ಯಯನ ಮಾಡಬೇಕು ಎಂದು ಹೇಳಿದ್ದಾರೆ. ಸಂಘಟನೆಯಲ್ಲಿ ಮಹಿಳೆಯರಿಗಾಗಿ ಪ್ರತ್ಯೇಕ ವಿಭಾಗವಿದ್ದು, ದೇಶಾದ್ಯಂತ ಕಾರ್ಯನಿರ್ವಹಿಸುತ್ತಿದೆ. ಮಹಿಳೆಯರು ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಪ್ರತಿಪಾದಿಸಿದ್ದಾರೆ.ರಾಜಕೀಯ ಭಿನ್ನಾಭಿಪ್ರಾಯಗಳ ಹಿನ್ನೆಲೆಯಲ್ಲಿ ಟೀಕೆ ಮಾಡುವುದು ಸಹಜವಾದರೂ, ವಿರೋಧ ಪಕ್ಷದ ನಾಯಕನ ಸ್ಥಾನದಲ್ಲಿರುವವರು ಆಧಾರರಹಿತ ಅಥವಾ ಅಪೂರ್ಣ ಮಾಹಿತಿಯ ಹೇಳಿಕೆಗಳನ್ನು ನೀಡಬಾರದು ಎಂದು ಕದಮ್‌ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್‌‍ನಲ್ಲಿನ ಮಹಿಳಾ ಪ್ರಾತಿನಿಧ್ಯ ಪ್ರಶ್ನಿಸಿದ ಬಿಜೆಪಿ :
ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್‌. ರಾಮಚಂದರ್‌ ರಾವ್‌ ಅವರು ರಾಹುಲ್‌ ಗಾಂಧಿಯವರನ್ನೇ ಪ್ರಶ್ನಿಸಿದ್ದು, ಕಾಂಗ್ರೆಸ್‌‍ ಪಕ್ಷದಲ್ಲಿ ಮಹಿಳೆಯರಿಗೆ ಎಷ್ಟು ಪ್ರಮುಖ ಸ್ಥಾನಗಳನ್ನು ನೀಡಲಾಗಿದೆ ಎಂಬುದನ್ನು ಸ್ಪಷ್ಟಪಡಿಸುವಂತೆ ಸವಾಲು ಹಾಕಿದ್ದಾರೆ.ಕಾಂಗ್ರೆಸ್‌‍ ಆಡಳಿತವಿರುವ ರಾಜ್ಯಗಳಲ್ಲಿ ಎಷ್ಟು ಮಹಿಳೆಯರು ಮುಖ್ಯಮಂತ್ರಿಗಳಾಗಿದ್ದಾರೆ ಎಂಬ ಪ್ರಶ್ನೆಯನ್ನೂ ಅವರು ಎತ್ತಿದ್ದಾರೆ. ಮಹಿಳಾ ಸಬಲೀಕರಣದ ಬಗ್ಗೆ ಮಾತನಾಡುವ ಕಾಂಗ್ರೆಸ್‌‍, ತನ್ನದೇ ಪಕ್ಷದಲ್ಲಿ ಮಹಿಳೆಯರಿಗೆ ನೀಡಿರುವ ಅವಕಾಶಗಳ ಕುರಿತು ಆತಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ.

RELATED ARTICLES
spot_img

Latest News