Saturday, November 23, 2024
Homeರಾಜ್ಯನಮ್ಮ ರಾಷ್ಟ್ರ ಮುನ್ನಡೆಸಲು ತಪ್ಪದೆ ಮತ ಚಲಾಯಿಸೋಣ : ರಮೇಶ್ ಅರವಿಂದ್

ನಮ್ಮ ರಾಷ್ಟ್ರ ಮುನ್ನಡೆಸಲು ತಪ್ಪದೆ ಮತ ಚಲಾಯಿಸೋಣ : ರಮೇಶ್ ಅರವಿಂದ್

ಬೆಂಗಳೂರು, ಏ.8- ನಮ್ಮ ರಾಷ್ಟ್ರವನ್ನು ಮುನ್ನೆಡಸಲು ಎಲ್ಲರೂ ಒಂದಾಗಿ ತಪ್ಪದೆ ಮತ ಚಲಾಯಿಸೋಣ ಎಂದು ಚುನಾವಣಾ ರಾಯಭಾರಿ ಹಾಗೂ ಚಿತ್ರನಟ ರಮೇಶ್ ಅರವಿಂದ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿಂದು ಬಸವನಗುಡಿಯ ಬಿಎಂಎಸ್ ಮಹಿಳಾ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ನಾವೆಲ್ಲರೂ ಒಟ್ಟಾಗಿ ಪ್ರಜಾಪ್ರಭುತ್ವಕ್ಕೆ ಹಲೋ ಎಂದಾಗ ಮಾತ್ರ ನಾವು ಪ್ರಜಾಪ್ರಭುತ್ವಕ್ಕೆ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.

ಶೇ.20 ರಷ್ಟು ಮಂದಿ ಒಂದಾಗಿ ಕೂಗಿದಾಗ ಹೆಚ್ಚು ಶಬ್ದ ಬರಲು ಸಾಧ್ಯವಿಲ್ಲ. ಅದೇ ಶೇ. 100ರಷ್ಟು ಮಂದಿ ಒಟ್ಟಾಗಿ ಕೂಗಿದಾಗ ಶಬ್ದ ಜೋರಾಗಿ ಬರಲಿದೆ. ಅದೇ ರೀತಿ ಚುನಾವಣೆಯಲ್ಲಿಯೂ ಶೇ. 20 ರಷ್ಟು ಮತದಾನ ಮಾಡಿದರೆ ಯಾವುದೇ ಪ್ರಯೋಜನವಿಲ್ಲ. ಎಲ್ಲರೂ ಒಟ್ಟಾಗಿ ಶೇ.100ರಷ್ಟು ಮತ ಚಲಾಯಿಸಿದಾಗ ಮಾತ್ರ ನಾವು ಉತ್ತಮ ಪ್ರಜಾಪ್ರಭುತ್ವವನ್ನು ಕಟ್ಟಲು ಸಾಧ್ಯ ಎಂದು ಹೇಳಿದರು.

ಗೂಗಲ್ನಲ್ಲಿ ನಿಮ್ಮ ಕ್ಷೇತ್ರದ ಆಭ್ಯರ್ಥಿ ಯಾರು, ಏನೇನು ಕೆಲಸ ಮಾಡಿದ್ದಾರೆ, ಅವರ ಹಿನ್ನೆಲೆ ಏನು, ಅವರ ನೀಡಿದ್ದ ಪ್ರಣಾಳಿಕೆಯಲ್ಲಿ ಕಳೆದ 5 ವರ್ಷಗಳಲ್ಲಿ ಏನೆಲ್ಲಾ ಈಡೇರಿಸಿದ್ದಾರೆ ಎಂಬುದನ್ನು ಪರಿಶೀಲಿಸಿ. ಯಾವುದಾದರೂ ಅಭ್ಯರ್ಥಿಗೆ ಮತದಾನ ಮಾಡಿದರೆ ಅವರು ನಮಗೆ ಏನು ಮಾಡುತ್ತಾರೆ ಎಂಬುದನ್ನು ಕೂಲಂಕುಶವಾಗಿ ಆಲೋಚಿಸಿ ಮತದಾನ ಮಾಡಿ. ಯಾರೋ ಹೇಳಿದ ಮಾತು ಕೇಳಿ ಮತದಾನ ಮಾಡಬೇಡಿ ಎಂದು ಕಿವಿಮಾತು ಹೇಳಿದರು.

ಜಿಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ ಕಾಂತರಾಜು ಮಾತನಾಡಿ, ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಯುವ ಮತದಾರರು ಏ.26ರಂದು ಬೆಳಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಮತದಾನ ಮಾಡುವ ಅವಕಾಶವಿದ್ದು, ಎಲ್ಲರೂ ತಪ್ಪದೆ ಮತ ಚಲಾಯಿಸಲು ತಿಳಿಸಿದರು.

ಪ್ರತಿಜ್ಞಾ ವಿಧಿ ಸ್ವೀಕಾರ:
ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಬಿಎಂಎಸ್ ಕಾಲೇಜಿನ ಎಲ್ಲಾ ವಿದ್ಯಾರ್ಥಿಗಳು ಮತದಾನ ಪ್ರತಿಜ್ಞಾ ವಿಧಿ ಸ್ವೀಕರಿಸಿ ಎಲ್ಲರೂ ತಪ್ಪದೆ ಮತದಾನ ಮಾಡುವುದಾಗಿ ತಿಳಿಸಿದರು. ಈ ವೇಳೆ ಜಿಲ್ಲಾ ಸ್ವೀಪ್ ನೋಡಲ್ ಅಧಿಕಾರಿ ಪ್ರತಿಭಾ, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸ್ವೀಪ್ ನೋಡಲ್ ಅಧಿಕಾರಿ ರಮಾಮಣಿ, ಬಿಎಂಎಸ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ವಸುಂದರಾ ಸೇರಿದಂತೆ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

RELATED ARTICLES

Latest News