Homeರಾಜಕೀಯಮಂಗನ ಕೈಗೆ ಸಿಲುಕಿದ ಮಾಣಿಕ್ಯದಂತಾಗಿದೆ ಗೃಹ ಇಲಾಖೆ ಸ್ಥಿತಿ : ಹೆಚ್ಡಿಕೆ

ಮಂಗನ ಕೈಗೆ ಸಿಲುಕಿದ ಮಾಣಿಕ್ಯದಂತಾಗಿದೆ ಗೃಹ ಇಲಾಖೆ ಸ್ಥಿತಿ : ಹೆಚ್ಡಿಕೆ

ಬೆಂಗಳೂರು,ಅ.30- ಮಂಗನ ಕೈಗೆ ಮಾಣಿಕ್ಯ ಸಿಕ್ಕಿದರೆ ಏನಾಗುತ್ತದೆ? ಗೃಹ ಇಲಾಖೆ ದುಸ್ಥಿತಿ ಹಂಗಾಗಿದೆ. ತುಘಲಕ್‌ ಕೈಗೆ ಸಿಕ್ಕಿ ಪೊಲೀಸರು ಹೈರಾಣ ಆಗಿದ್ದಾರೆ ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಸಂಬಂಧ ತಮ ಎಕ್ಸ್ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಮಿಸ್ಟರ್‌ ತುಘಲಕ್‌. ವಿಷಯಾಂತರ ಕಿಡಿಗೇಡಿಗಳ ಲಕ್ಷಣ. ವಿಷಯ ಬಿಟ್ಟು ಮಿಕ್ಕಿದ್ದೆಲ್ಲಾ ಏಕೆ? ನೇರವಾಗಿ ಯುದ್ಧ ಮಾಡಿ. ಪಲಾಯನ ಏಕೆ? ಪಡಿಪಾಟಲು ಯಾಕೆ? ಎಂದು ಪ್ರಶ್ನಿಸಿದ್ದಾರೆ.

ಸುಳ್ಳು ಸುದ್ದಿ ಶೂರ. ನೀವು ಏನೇನು ಮಾಡುತ್ತಿದ್ದೀರಿ? ಪ್ರಕರಣದ ದಿಕ್ಕು ತಪ್ಪಿಸಲು ಎಷ್ಟೊಂದು ಬಸ್ಕಿ ಹೊಡೆಯುತ್ತಿದ್ದೀರಿ? ನೀವು, ನಿಮಪ್ಪ, ನಿಮ ಸಿಎಂ ಹೊಸೆದ ಕುತಂತ್ರಕ್ಕೆ ಬಲಿಯಾದವರಿಗೇ ಕ್ಲೀನ್‌ ಚಿಟ್‌‍. ಕ್ಲೀನ್‌ ಚಿಟ್‌ ನಿಮ ಪಾಪಕ್ಕೆ ಪ್ರಾಯಶ್ಚಿತ್ತವಲ್ಲ. ಅರೆರೆ. ಎಂಥಾ ಐನಾತಿ ಐಡಿಯಾ? ಅತಿಜಾಣ ಗ್ರಹಣ ಮಂತ್ರಿ ಎಂದು ಅವರು ವ್ಯಂಗ್ಯವಾಡಿದ್ದಾರೆ.

ನನ್ನ ಅನುಮಾನ ಏನೆಂದರೆ, ನಿಮ ತನಿಖೆಯೇ ಸ್ಟಿಂಗ್‌ ಆಗುತ್ತಿದೆ. ಲೀಕ್‌ ಆಗುತ್ತಿರುವ ಸುದ್ದಿಗಳು ಅದಕ್ಕೆ ರೇಖಿ ಹಿಡಿಯುತ್ತಿವೆ. ರೀ ತುಘಲಕ್‌. ನೀವು ಆರಂಭ ಮಾಡಿದ್ದೀರಿ, ನಾನು ಮುಗಿಸುತ್ತೇನೆ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

RELATED ARTICLES

Latest News