Saturday, April 12, 2025
Homeರಾಷ್ಟ್ರೀಯ | Nationalಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವು

ಶಾಲಾ ಬಸ್ ಪಲ್ಟಿಯಾಗಿ 6 ಮಕ್ಕಳು ಸಾವು

ಚಂಡಿಗಢ,ಏ.11- ಶಾಲಾ ಬಸ್ ಪಲ್ಟಿಯಾಗಿ ಆರು ಮಕ್ಕಳು ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ಹರಿಯಾಣದ ನರ್ನಾಲ್ನ ಹಳ್ಳಿಯೊಂದರ ಬಳಿ ಶಾಲಾ ಬಸ್ ಪಲ್ಟಿಯಾದ ಪರಿಣಾಮ ಆರು ಮಕ್ಕಳು ಸಾವನ್ನಪ್ಪಿದ್ದಾರೆ ಮತ್ತು ಇನ್ನಿತರ ಹಲವಾರು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈದ್-ಉಲ-ಫಿತರ್ ರಜೆಯ ಹೊರತಾಗಿಯೂ ಶಾಲೆಯು ಕಾರ್ಯನಿರ್ವಹಿಸುತ್ತಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಎಲ್ ಪಬ್ಲಿಕ್ ಸ್ಕೂಲ್ ಗೆ ಸೇರಿದ ಬಸ್ ಕನಿನಾದ ಉನ್ಹಾನಿ ಗ್ರಾಮದ ಬಳಿ ಪಲ್ಟಿಯಾಗಿದೆ.

ಪ್ರಾಥಮಿಕ ತನಿಖೆಯ ನಂತರ ಬಸ್ ಚಾಲಕ ಕುಡಿದು ವಾಹನವನ್ನು ಮರಕ್ಕೆ ಡಿಕ್ಕಿ ಮಾಡಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ ಎಂದು ಜಿಲ್ಲಾ ಶಿಕ್ಷಣಾಧಿಕಾರಿ ತಿಳಿಸಿದ್ದಾರೆ. ಆರು ವರ್ಷಗಳ ಹಿಂದೆ 2018 ರಲ್ಲಿ ಬಸ್ನ ಫಿಟ್ನೆಸ್ ಪ್ರಮಾಣಪತ್ರದ ಅವಧಿ ಮುಗಿದಿದೆ ಎಂದು ಅಧಿಕೃತ ದಾಖಲೆಗಳು ತೋರಿಸುತ್ತವೆ.

RELATED ARTICLES

Latest News