Friday, November 22, 2024
Homeರಾಷ್ಟ್ರೀಯ | Nationalತಮಿಳುನಾಡಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮಶ್ರೀ ಪುರಸ್ಕೃತ

ತಮಿಳುನಾಡಿನಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕಿಳಿದ ಪದ್ಮಶ್ರೀ ಪುರಸ್ಕೃತ

ತಿರುಚಿರಾಪಳ್ಳಿ, ಏ.12- ತಮಿಳುನಾಡಿನ ತಿರುಚಿರಾಪಳ್ಳಿ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಪದ್ಮಶ್ರೀ ಪ್ರಶಸ್ತಿ ಪುರಸ್ಕøತ ವ್ಯಕ್ತಿಯೊಬ್ಬರು ಸ್ಪರ್ಧಿಸಿದ್ದಾರೆ. ತಿರುಚಿರಾಪಳ್ಳಿ ಮೂಲದ ಎಸ್ ದಾಮೋದರನ್ (62) ಅವರು ಈ ಬಾರಿಯ ಚುನಾವಣೆಯಲ್ಲಿ ಗ್ಯಾಸ್ ಸ್ಟೌವ್ ಚಿಹ್ನೆಯಡಿ ಸ್ಪರ್ಧಿಸುತ್ತಿದ್ದು, ನಗರದ ಗಾಂಧಿ ಮಾರುಕಟ್ಟೆಯಲ್ಲಿ ಜನರು ಮತ್ತು ತರಕಾರಿ ಮಾರಾಟಗಾರರಿಂದ ಮತ ಯಾಚಿಸಿದರು.

ನಾನು ತಿರುಚ್ಚಿ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿ. ನಾನು ಮಣ್ಣಿನ ಮಗ. ನಾನು ತಿರುಚ್ಚಿ ನಗರಕ್ಕೆ ಸೇರಿದವನು. ನಾನು ನೈರ್ಮಲ್ಯ ಕೇಂದ್ರದಲ್ಲಿ ಸಹಾಯಕ ಸೇವಾ ಸ್ವಯಂಸೇವಕನಾಗಿ 40 ವರ್ಷಗಳಿಗೂ ಹೆಚ್ಚು ಕಾಲ ಕೆಲಸ ಮಾಡುತ್ತಿದ್ದೇನೆ. ನಾನು ನನ್ನ ವೃತ್ತಿಜೀವನವನ್ನು ನನ್ನ 21ವಯಸ್ಸಿನಲ್ಲಿ ಪ್ರಾರಂಭಿಸಿದೆ.

ಈಗ ನನಗೆ 62 ವರ್ಷ. 60 ನೇ ವಯಸ್ಸಿನಲ್ಲಿ ನೈರ್ಮಲ್ಯ ಕ್ಷೇತ್ರದಲ್ಲಿ ನನ್ನ ಕೆಲಸಕ್ಕಾಗಿ ನಾನು ಅಂದಿನ ಭಾರತದ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರಿಂದ ಪದ್ಮಶ್ರೀ ಪ್ರಶಸ್ತಿಯನ್ನು ಪಡೆದಿದ್ದೇನೆ ಎಂದು ದಾಮೋದರನ್ ತಮ್ಮ ವೃತ್ತಿಜೀವನದ ಬಗ್ಗೆ ಹೇಳಿಕೊಂಡಿದ್ದಾರೆ.

ದಾಮೋದರನ್ ಅವರು ತಮ್ಮ 21 ನೇ ವಯಸ್ಸಿನಲ್ಲಿ ತಮ್ಮ ಸಮಾಜ ಸೇವೆಯನ್ನು ಪ್ರಾರಂಭಿಸಿದರು ಮತ್ತು ತಮ್ಮ ಜೀವಿತಾವಧಿಯಲ್ಲಿ ಒಂಬತ್ತು ಪ್ರಧಾನ ಮಂತ್ರಿಗಳ ಅಧಿಕಾರಾವಧಿಯಲ್ಲಿ ಸೇವೆ ಸಲ್ಲಿಸಿದ್ದೇನೆ ಎಂದು ತಿಳಿಸಿದ್ದಾರೆ.

ನಾನು 21 ನೇ ವಯಸ್ಸಿನಲ್ಲಿ ರಾಜೀವ್ ಗಾಂಧಿ ಭಾರತದ ಪ್ರಧಾನಿಯಾಗಿದ್ದಾಗ ನನ್ನ ಸಮಾಜ ಸೇವೆಯನ್ನು ಪ್ರಾರಂಭಿಸಿದೆ, ನನ್ನ ಜೀವನದಲ್ಲಿ ನಾನು ಒಂಬತ್ತು ಪ್ರಧಾನಿಗಳನ್ನು ಕಂಡಿದ್ದೇನೆ. ನಾನು ಎಲ್ಲಾ ಕೇಂದ್ರ ಪ್ರಾಯೋಜಿತ ಗ್ರಾಮೀಣ ನೈರ್ಮಲ್ಯ ಕಾರ್ಯಕ್ರಮಗಳ ಅಡಿಯಲ್ಲಿ ಕೆಲಸ ಮಾಡಿದ್ದೇನೆ ಮತ್ತು ಪ್ರತಿ ಗ್ರಾಮವನ್ನು ಮಾದರಿ ಗ್ರಾಮವನ್ನಾಗಿ ಮಾಡಿದ್ದೇನೆ. ಈ ಬಾರಿ ನನ್ನನ್ನು ಗೆಲ್ಲಿಸುವ ಮೂಲಕ ಮತ್ತಷ್ಟು ಸಮಾಜ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಡಬೇಕು ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

RELATED ARTICLES

Latest News