Monday, November 25, 2024
Homeರಾಜ್ಯಅಲ್ಪಸಂಖ್ಯಾತ ಮಕ್ಕಳ ವೈದ್ಯಕೀಯ ವ್ಯಾಸಂಗಕ್ಕೆ ಸಾಲದ ಮೊತ್ತ ಹೆಚ್ಚಳ : ಸಿಎಂ

ಅಲ್ಪಸಂಖ್ಯಾತ ಮಕ್ಕಳ ವೈದ್ಯಕೀಯ ವ್ಯಾಸಂಗಕ್ಕೆ ಸಾಲದ ಮೊತ್ತ ಹೆಚ್ಚಳ : ಸಿಎಂ

ಬೆಂಗಳೂರು, ಅ. 10- ಅಲ್ಪಸಂಖ್ಯಾತ ಸಮುದಾಯಗಳ ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡುವಂತೆ ಸಲಹೆ ನೀಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅರಿವು ಸಾಲ ಯೋಜನೆಯಡಿ ವೈದ್ಯಕೀಯ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೀಡುವ ಸಾಲದ ಮೊತ್ತ ಹೆಚ್ಚಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು. ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ವಸತಿ, ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು.

ಮೊರಾರ್ಜಿ ದೇಸಾಯಿ ವಸತಿ ಶಾಲೆಗಳ ಸಂಖ್ಯೆ ಹೆಚ್ಚಳ ಹಾಗೂ ವಿದ್ಯಾರ್ಥಿಗಳ ಪ್ರವೇಶಾತಿ ಪ್ರಮಾಣ ಹೆಚ್ಚಳ ಮಾಡಿರುವುದಕ್ಕೆ ಅನುಗುಣವಾಗಿ ಹೆಚ್ಚುವರಿ ಹುದ್ದೆಗಳ ಮಂಜೂರಾತಿಗೆ ಪ್ರಸ್ತಾವನೆ ಸಲ್ಲಿಸುವಂತೆ ತಿಳಿಸಿದರು. ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ನಿಗದಿತ ಗುರಿಗೆ ಎದುರಾಗಿ ನಿರೀಕ್ಷೆಗೂ ಮೀರಿ ಅರ್ಜಿಗಳು ಸ್ವೀಕೃತವಾಗಿರುವುದರಿಂದ ಅರ್ಹ ಫಲಾನುಭವಿಗಳ ಜ್ಯೇಷ್ಠತಾ ಪಟ್ಟಿ ಸಿದ್ಧಪಡಿಸಿ, ಅನುದಾನ ಲಭ್ಯತೆಗೆ ಅನುಸಾರವಾಗಿ ಸೌಲಭ್ಯ ವಿತರಿಸುವಂತೆ ಸೂಚಿಸಿದರು.

ಸೈಬರ್ ಕ್ರೈಂ ಪ್ರಕರಣಗಳ ಕಾಲಮಿತಿ ತನಿಖೆಗೆ ಕಟ್ಟುನಿಟ್ಟಿನ ಕ್ರಮ : ದಯಾನಂದ

ಮುಖ್ಯಮಂತ್ರಿಗಳ ವಿಶೇಷ ಅಭಿವೃದ್ಧಿ ಯೋಜನೆಯಡಿ ಅಲ್ಪಸಂಖ್ಯಾತರ ಕಾಲೋನಿಗಳ ಅಭಿವೃದ್ಧಿಗೆ 1,000 ಕೋಟಿ ರೂ. ಮೊತ್ತದ ಕ್ರಿಯಾ ಯೋಜನೆ ರೂಪಿಸಿ, ಕಾಮಗಾರಿಗಳ ಆದ್ಯತಾ ಪಟ್ಟಿಯನ್ವಯ ಕೆಲಸ ಕೈಗೆತ್ತಿಕೊಳ್ಳುವಂತೆ ಸಲಹೆ ನೀಡಿದರು.ಅಲ್ಪಸಂಖ್ಯಾತರ ಇಲಾಖೆಯಡಿ ಆಯವ್ಯಯ ದಲ್ಲಿ ಘೋಷಿಸಲಾದ 19 ಘೋಷಣೆಗಳ ಪೈಕಿ 16 ಘೋಷಣೆಗಳಿಗೆ ಸಂಬಂಧಿಸಿದಂತೆ ಸರ್ಕಾರಿ ಆದೇಶ ಹೊರಡಿಸಲಾಗಿದೆ ಎಂದು ಅಕಾರಿಗಳು ಮಾಹಿತಿ ನೀಡಿದರು.

ಪ್ರಧಾನಮಂತ್ರಿ ಆವಾಸ್ ಯೋಜನೆ ಪ್ರಗತಿ ಕುಂಠೀತವಾಗಿರುವುದರಿಂದ ಸಂಪನ್ಮೂಲ ಕ್ರೂಢೀಕರಣ ಕುರಿತಂತೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಯಿತು. ಈ ಯೋಜನೆಯಡಿ ಫಲಾನುಭವಿ ವಂತಿಗೆ ಪ್ರಮಾಣ ಹೆಚ್ಚಾಗಿರುವುದ ರಿಂದ ಹಾಗೂ ಫಲಾನುಭವಿಗಳ ವಂತಿಗೆ ಪಾವತಿ ಹಿನ್ನಡೆಯಾಗಿದೆ. ಈ ಹಿನ್ನೆಲೆಯಲ್ಲಿ ಸಂಪನ್ಮೂಲ ಕ್ರೂಢೀಕರಣಕ್ಕೆ ನೀತಿ ರೂಪಿಸಲು ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಬಿಗ್‍ಬಾಸ್‍ನಿಂದ ಹೊರಬಂದು ಪ್ರದೀಪ್ ಈಶ್ವರ್ ಹೇಳಿದ್ದೇನು..?

ಒಂದು ಲಕ್ಷ ವಸತಿ ಯೋಜನೆಯಡಿ ನಿರ್ಮಾಣಗೊಂಡ ಮನೆಗಳಿಗೆ ಅಗತ್ಯ ಮೂಲಸೌಕರ್ಯವನ್ನು ಆದ್ಯತೆಯ ಮೇರೆಗೆ ಕಲ್ಪಿಸುವಂತೆ ಸೂಚಿಸಿದರು. ಸಭೆಯಲ್ಲಿ ವಸತಿ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್ ಖಾನ್, ಪೌರಾಡಳಿತ ಮತ್ತು ಹಜ್ ಸಚಿವ ರಹೀಂ ಖಾನ್, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ, ಗೋವಿಂದರಾಜು ನಸೀರ್ ಅಹ್ಮದ್, ಆರ್ಥಿಕ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಎಲï.ಕೆ. ಅತೀಕ್ ಮತ್ತು ಸರ್ಕಾರದ ಇತರ ಹಿರಿಯ ಅಕಾರಿಗಳು ಉಪಸ್ಥಿತರಿದ್ದರು.

RELATED ARTICLES

Latest News