Homeರಾಷ್ಟ್ರೀಯಪೊಲೀಸ್‌ ಠಾಣೆಯಲ್ಲೇ ಅಪ್ರಾಪ್ತೆ ಮೇಲೆ ಇನ್‌ಸ್ಪೆಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ಪೊಲೀಸ್‌ ಠಾಣೆಯಲ್ಲೇ ಅಪ್ರಾಪ್ತೆ ಮೇಲೆ ಇನ್‌ಸ್ಪೆಕ್ಟರ್‌ನಿಂದ ಲೈಂಗಿಕ ದೌರ್ಜನ್ಯ

ಪಣಜಿ, ಅ.31 (ಪಿಟಿಐ): ಉತ್ತರ ಗೋವಾದ ಪೊಲೀಸ್‌ ಠಾಣೆಯೊಂದರಲ್ಲಿ ಮಹಿಳೆಯೊಬ್ಬಳ ಸಹಾಯದೊಂದಿಗೆ ಪೊಲೀಸ್‌ ಇನ್‌ಸ್ಪೆಕ್ಟರ್‌ ಒಬ್ಬರು ಅಪ್ರಾಪ್ತ ಬಾಲಕಿಯ ಮೇಲೆ ಹಲವು ಬಾರಿ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್‌ಸ್ಪೆಕ್ಟರ್‌ ವಿಕಾಸ್‌ ದೇಯ್ಕರ್‌ ಮತ್ತು ಈ ಕೃತ್ಯಕ್ಕೆ ಸಹಕರಿಸಿದ ಆರೋಪ ಎದುರಿಸುತ್ತಿರುವ ರಂಜಿನಿ ಪಾಲೇಕರ್‌ ಎಂಬುವರ ವಿರುದ್ಧ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (ಬಿಎನ್‌ಎಸ್‌) ಮತ್ತು ಮಕ್ಕಳ ಮೇಲಿನ ಲೈಂಗಿಕ ಅಪರಾಧಗಳ ತಡೆ ಕಾಯ್ದೆ (ಪೋಕ್ಸೊ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಈ ಕೃತ್ಯಗಳು ಜುಲೈ 25 ಮತ್ತು ಅಕ್ಟೋಬರ್‌ 27ರಂದು ಕ್ರೈಂ ಬ್ರಾಂಚ್‌ನ ರಿಬಂದರ್‌ ಪೊಲೀಸ್‌ ಠಾಣೆಯಲ್ಲಿ ನಡೆದಿವೆ ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆದರೆ, ಹೆಚ್ಚಿನ ವಿವರಗಳನ್ನು ನೀಡಿಲ್ಲ.

ಆರೋಪಿಗಳ ವಿರುದ್ಧ ಬಿಎನ್‌ಎಸ್‌ ಸೆಕ್ಷನ್‌ 75 (ಲೈಂಗಿಕ ಕಿರುಕುಳ) ಮತ್ತು 127 (ಅಕ್ರಮ ಬಂಧನ) ಹಾಗೂ ಪೋಕ್ಸೊ ಕಾಯ್ದೆಯ ಸೆಕ್ಷನ್‌ 10 ಮತ್ತು 12ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಓಲ್ಡ್‌ ಗೋವಾ ಪೊಲೀಸ್‌ ಠಾಣೆಯು ಈ ಪ್ರಕರಣದ ತನಿಖೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ

RELATED ARTICLES

Latest News