ಬೆಂಗಳೂರು, ನ.1- ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ, ನಗರ ಪಾಲಿಕೆಗಳ ವ್ಯಾಪ್ತಿಯ ಮಕ್ಕಳಿಗೆ ಗ್ರಾಮ ವ್ಯಾಸ್ತವ್ಯ, ಖಾಸಗಿ ವಲಯದ ಹೂಡಿಕೆಗಳ ಜೊತೆ 5 ಲಕ್ಷ ಉದ್ಯೋಗ ಸೃಷ್ಟಿ, ಗ್ರಾಮೀಣ ಭಾಗದ ಸರ್ಕಾರಿ ಶಾಲೆಯ ಮಕ್ಕಳಿಗೆ ಮೀಸಲಾತಿ ಸೇರಿದಂತೆ ಹಲವಾರು ಮಹತ್ವದ ವಿಚಾರಗಳನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರಸ್ತಾಪಿಸಿದ್ದಾರೆ.
ನಗರದ ಕಂಠೀರವ ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತುಸಾಕ್ಷರತಾ ಇಲಾಖೆ ವತಿಯಿಂದ ಆಯೋಜಿಸಿದ್ದ 71ನೇ ಕನ್ನಡ ರಾಜ್ಯೋತ್ಸವದ ಸಮಾರಂಭದಲ್ಲಿ ರಾಷ್ಟ್ರ ಧ್ವಜ ಮತ್ತು ನಾಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾಡಿನ ಧ್ವಜಕ್ಕಾಗಿ ಈ ಮೊದಲು ಕಳುಹಿಸಿದ್ದ ಪ್ರಸ್ತಾವನೆಯನ್ನು ಕೇಂದ್ರ ಸರ್ಕಾರ ಮಾನ್ಯಮಾಡಿಲ್ಲ. ತಮ ಸರ್ಕಾರ ನಾಡ ಧ್ವಜಕ್ಕೆ ಅಧಿಕೃತವಾದ ಸ್ಥಾನಮಾನ ಕೊಡಿಸಲು ಬದ್ಧವಾಗಿದೆ. ಸಚಿವ ಸಂಪುಟಸಭೆಯಲ್ಲಿ ಚರ್ಚಿಸಿ ಮುಂದಿನ ಬೆಳಗಾವಿ ಅಧಿವೇಶನದಲ್ಲಿ ಈ ಕುರಿತ ನಿರ್ಣಯವನ್ನು ಮಂಡಿಸಲಾಗುವುದು. ಅದಕ್ಕೂ ಮುನ್ನ ಸಾರ್ವಜನಿಕರ ಅಭಿಪ್ರಾಯಗಳಿಗೂ ಅವಕಾಶ ನೀಡಲಾಗುವುದು. ವಿಧಾನಸಭೆ ನಿರ್ಣಯ ಬಳಿಕ ಕೇಂದ್ರ ಸರ್ಕಾರಕ್ಕೆ ಮತ್ತೆ ಪ್ರಸ್ತಾವನೆ ಸಲ್ಲಿಸುವುದಾಗಿ ಹೇಳಿದರು.
ಕನ್ನಡ ನಾಡಿಗೆ ತಮದೇ ಆದ ಧ್ವಜ ಅಗತ್ಯ ಎಂಬುದಕ್ಕೆ ಸರ್ಕಾರ ಬದ್ಧವಾಗಿದೆ. ಈ ನಿಟ್ಟಿನಲ್ಲಿ ಅಧಿಕೃತವಾದ ನಿರ್ಣಯ ಕೈಗೊಳ್ಳುತ್ತೇವೆ ಎಂದರು.
ಗ್ರಾಮೀಣಾ ಭಾಗದ ಸರ್ಕಾರಿ ಶಾಲೆಗಳಲ್ಲಿದ್ದ ವಿದ್ಯಾರ್ಥಿಗಳಿಗೆ ಮೀಸಲಾತಿ ಕಲ್ಪಿಸಲು ಚಿಂತನೆ ನಡೆಸಲಾಗಿದೆ. ಎಂಜಿನಿಯರಿಂಗ್ ಹಾಗೂ ವೈದ್ಯಕೀಯ ಶಿಕ್ಷಣದಲ್ಲಿ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಅವಕಾಶ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದರು.ಉದ್ಯೋಗ ಸೃಷ್ಟಿಗೆ ತಮ ಸರ್ಕಾರ ಹೆಚ್ಚಿನ ಆದ್ಯತೆ ನೀಡಿದೆ. ಶಿಕ್ಷಣ ಮತ್ತು ಕೈಗಾರಿಕೆಗಳ ನಡುವೆ ಸಮನ್ವಯತೆಗಾಗಿ ವಿನಿಮಯ ಕೇಂದ್ರವನ್ನು ಆರಂಭಿಸಲಾಗಿದೆ. 100 ಐಟಿಐ ಸಂಸ್ಥೆಗಳನ್ನು ಕೈಗಾರಿಕೆಗಳ ಜೊತೆ ಕೈ ಜೋಡಿಸಲಾಗಿದೆ ಎಂದರು.
ಗ್ರಾಮೀಣ ಭಾಗದಲ್ಲಿ ಪಂಚಾಯಿತಿಗೊಂದರಂತೆ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಅಭಿವೃದ್ಧಿಪಡಿಸಲಾಗುತ್ತಿದೆ. ಇವುಗಳ ಮೂಲಕ ಶಿಕ್ಷಣ ವ್ಯವಸ್ಥೆಯ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುವುದು. ಇದೇ 4 ರಂದು ಕೈಗಾರಿಕೋಧ್ಯಮಿಗಳ ಜೊತೆ ಚರ್ಚೆಗೆ ಸಮಯ ನಿಗದಿ ಪಡಿಸಲಾಗಿದೆ ಎಂದು ಹೇಳಿದರು.
ಕ್ರೀಡಾಪಟುಗಳಿಗೆ ಸರ್ಕಾರಿ ಹುದ್ದೆಗಳಲ್ಲಿ ಶೇ.2ರಷ್ಟು ಮೀಸಲಾತಿ ನೀಡಲಾಗಿದೆ. ಅರಣ್ಯ ಹಾಗೂ ಪೊಲೀಸ್ ಇಲಾಖೆಯಲ್ಲಿ ಶೇ.3 ರಷ್ಟು ಉದ್ಯೋಗ ಮೀಸಲಾತಿ ನೀಡಲಾಗುತ್ತಿದೆ ಎಂದರು.
ಒಲಂಪಿಕ್್ಸ, ಪ್ಯಾರಲಿಂಪಿಕ್್ಸ, ಏಷ್ಯನ್ ಗೇಮ್ಸೌ, ಪ್ಯಾರ ಏಷ್ಯನ್ ಗೇಮ್ಸೌಗಳಲ್ಲಿ ಭಾಗವಹಿಸಿದ್ದ ಮತ್ತು ಪದಕ ವಿಜೇತರಿಗೆ ಹೆಚ್ಚಿನ ಪ್ರೋತ್ಸಾಹ ಧನ ನೀಡಲಾಗುತ್ತಿದೆ ಎಂದು ಹೇಳಿದರು.ನಗರ ಪ್ರದೇಶದ ಮಕ್ಕಳಿಗೆ ಗ್ರಾಮೀಣ ಜನ ಜೀವನದ ಪರಿಚಯ ಮಾಡಿಸುವ ಅಗತ್ಯ ಇದೆ. ಇದಕ್ಕಾಗಿ ವಿದ್ಯಾರ್ಥಿಗಳ ಗ್ರಾಮ ವಾಸ್ತವ್ಯ ಎಂಬ ವಿನೂತನ ಯೋಜನೆಯನ್ನು ರೂಪಿಸಲಾಗಿದೆ. ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿನ ಮಕ್ಕಳನ್ನು ಸರ್ಕಾರಿ ಶಾಲೆಗಳು ತಮದೇ ಖರ್ಚಿನಲ್ಲಿ 2, 3 ದಿನಗಳ ಗ್ರಾಮ ವಾಸ್ತವ್ಯಕ್ಕೆ ಕರೆದುಕೊಂಡು ಹೋಗುವಂತೆ ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿಯವರು ಹೇಳಿದರು.
ಖಾಸಗಿ ಹೂಡಿಕೆ ಹಾಗೂ ಕೈಗಾರಿಕೆಗಳ ಸಹಯೋಗದೊಂದಿಗೆ 5 ಲಕ್ಷ ಉದ್ಯೋಗಗಳನ್ನು ಕಲ್ಪಿಸಲು ತಮ ಸರ್ಕಾರ ಮುಂದಾಗಿದೆ. ಜೊತೆಗೆ ಸರ್ಕಾರದಲ್ಲಿ 72 ಸಾವಿರ ಉದ್ಯೋಗಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದು ಹೇಳಿದರು.
ತಮ ವಿದ್ಯಾರ್ಥಿ ಜೀವನವನ್ನು ನೆನಪಿಸಿಕೊಂಡ ಮುಖ್ಯಮಂತ್ರಿಯವರು, ಪ್ರಜಾ ಸೇವಕನಾಗಿ ಕನ್ನಡದ ಕನ್ನಡಭಾಷೆಯ ಬೆಳವಣಿಗೆಗೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತೇನೆ. ವಿದ್ಯಾರ್ಥಿಗಳು ಕೂಡ ನಾಯಕರಾಗಿ ಬೆಳೆದು ಉನ್ನತ ಹುದ್ದೆಗೇರಬೇಕೆಂದು ಸಲಹೆ ನೀಡಿದರು.
ಕನ್ನಡ ಭಾಷೆ ತಾಯಿ ಇದ್ದಂತೆ. ಭಾಷಾ ಸೇವೆ ಮಾತೃ ಸೇವೆ. ತಾಯಿ ಮಗುವನ್ನು ಪ್ರೀತಿಸುವಂತೆ ಪ್ರತಿಯೊಬ್ಬರು ಬಾಷೆಯನ್ನು ಪ್ರೀತಿಸಬೇಕು, ಬೆಳಸಬೇಕು ಎಂದು ಮುಖ್ಯಮಂತ್ರಿ ಕರೆ ನೀಡಿದರು.
ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವ ಮಧುಬಂಗಾರಪ್ಪ, ವಿಧಾನ ಪರಿಷತ್ ಸದಸ್ಯರಾದ ಕೆ. ಗೋವಿಂದರಾಜು, ಎ.ಪಿ.ರಂಗನಾಥ್ ಸೇರಿದಂತೆ ಮತ್ತಿತರರು ಇದೇ ಸಂದರ್ಭದಲ್ಲಿ ಉಪಸ್ಥಿತರಿದ್ದರು.
