Homeರಾಜ್ಯಹಾಸನಾಂಬ ದರ್ಶನ 4ನೇ ದಿನ : ಸಾವಿರಾರು ಭಕ್ತರಿಂದ ದೇವಿ ದರ್ಶನ

ಹಾಸನಾಂಬ ದರ್ಶನ 4ನೇ ದಿನ : ಸಾವಿರಾರು ಭಕ್ತರಿಂದ ದೇವಿ ದರ್ಶನ

ಹಾಸನ,ನ.2- ವರ್ಷಕ್ಕೊಮೆ ದರ್ಶನ ಭಾಗ್ಯ ನೀಡುವ ಶಕ್ತಿದೇವತೆ ಹಾಸನಾಂಬ ದೇವಿಯ ದರ್ಶನಕ್ಕೆ ನಾಲ್ಕನೇ ದಿನವಾದ ಇಂದೂ ಕೂಡಾ ಭಕ್ತರ ದಂಡೇ ಹರಿದುಬಂದಿತ್ತು. ಸಾರ್ವಜನಿಕ ದರ್ಶನ ಪ್ರಾರಂಭವಾಗಿ ನಾಲ್ಕನೇ ದಿನವೂ ಕೂಡಾ ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಸರತಿ ಸಾಲಿನಲ್ಲಿ ನಿಂತು ದರ್ಶನ ಮಾಡಿ ಪುನೀತರಾಗುತ್ತಿದ್ದಾರೆ.

ರಾಜ್ಯದ ಮೂಲೆಮೂಲೆಗಳಿಂದ ದಿನದಿಂದ ದಿನಕ್ಕೆ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಿದ್ದು, ಧರ್ಮದರ್ಶನದ 1000 ರೂ. ಹಾಗೂ 300 ರೂ.ಗಳ ವಿಶೇಷ ದರ್ಶನದ ಸಾಲಿನಲ್ಲಿ ಜನರು ಕಿಕ್ಕಿರಿದು ತುಂಬಿದ್ದಾರೆ.

ದೇವಿಯ ದರ್ಶನಕ್ಕಾಗಿ ಕೆಲ ಘಂಟೆಗಳ ಕಾಲ ಕಾಯುವುದು ಸಾಮಾನ್ಯವಾಗಿದೆ. ಈ ಬಾರಿ ನಿರೀಕ್ಷೆಗೂ ಮೀರಿ ಭಕ್ತರು ಆಗಮಿಸುತ್ತಿದ್ದು, ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಸಿದ್ಧತೆಗಳನ್ನೂ ಮಾಡಿಕೊಂಡಿದ್ದು, ಸುಗಮ ದರ್ಶನಕ್ಕಾಗಿ ವ್ಯವಸ್ಥೆ ಮಾಡಿದೆ. ವಾರಾಂತ್ಯದ ಹಿನ್ನೆಲೆಯಲ್ಲಿ ಜನಸಾಗರವೇ ಹರಿದುಬಂದಿದ್ದು, ನಿನ್ನೆ 2 ಲಕ್ಷಕ್ಕೂ ಅಧಿಕ ಭಕ್ತರು ದರ್ಶನ ಪಡೆದಿದ್ದಾರೆ.

RELATED ARTICLES

Latest News