ಹೈದರಾಬಾದ್, ನ.2- ಕೌಟುಂಬಿಕ ಜಗಳದಲ್ಲಿ ಪತ್ನಿಯೇ ಪತಿಯ ಎದೆಗೆ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಹೈದರಾಬಾದ್ನಲ್ಲಿ ನಡೆದಿದೆ.ದಂಪತಿ ನಡುವೆ ಉಂಟಾದ ಕೌಟುಂಬಿಕ ಜಗಳವು ತೀವ್ರಗೊಂಡು, ಕೊಲೆಯಲ್ಲಿ ಅಂತ್ಯಗೊಂಡಿದೆ. ಬಾಡಿಗೆ ಅಪಾರ್ಟ್ಮೆಂಟ್ ಒಂದರಲ್ಲಿ ವಾಸವಾಗಿದ್ದ ಮಹಿಳೆಯೊಬ್ಬರು ತಮ್ಮ ಪತಿಯನ್ನು ಚಾಕುವಿನಿಂದ ಇರಿದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ.
ಮೃತ ವ್ಯಕ್ತಿಯನ್ನು 55 ವರ್ಷದ ಕೋಟಂ ಪ್ರಭಾಕರ್ ಎಂದು ಗುರುತಿಸಲಾಗಿದೆ. ಅವರು ಭದ್ರತಾ ಸಿಬ್ಬಂದಿಯಾಗಿ (ಸೆಕ್ಯೂರಿಟಿ) ಕೆಲಸ ಮಾಡುತ್ತಿದ್ದರು ಮತ್ತು ತಮ್ಮ ಪತ್ನಿ ರಾಜಿತಾ (45) ಹಾಗೂ ಇಬ್ಬರು ಹೆಣ್ಣುಮಕ್ಕಳೊಂದಿಗೆ ವಾಸಿಸುತ್ತಿದ್ದರು.
ಕೊತ್ತಪೇಟ್ನಲ್ಲಿರುವ ತಮ್ಮ ಅಪಾರ್ಟ್ಮೆಂಟ್ನಲ್ಲಿ, ಕೌಟುಂಬಿಕ ವಿಷಯಗಳಿಗೆ ಸಂಬಂಧಿಸಿದಂತೆ ಪ್ರಭಾಕರ್ ಮತ್ತು ರಾಜಿತಾ ನಡುವೆ ಜಗಳ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ವೇಳೆ ನಡೆದ ತೀವ್ರ ವಾಗ್ವಾದದ ನಡುವೆ, ರಾಜಿತಾ ಅಡುಗೆಮನೆಯಲ್ಲಿದ್ದ ಚಾಕುವನ್ನು ತೆಗೆದುಕೊಂಡು ಪತಿಯ ಎದೆಗೆ ಇರಿದಿದ್ದಾರೆ ಎಂದು ಆರೋಪಿಸಲಾಗಿದೆ.
ಗಂಭೀರವಾಗಿ ಗಾಯಗೊಂಡ ಪ್ರಭಾಕರ್ ಅವರನ್ನು ಅವರ ಹೆಣ್ಣುಮಕ್ಕಳು ಆಂಬ್ಯುಲೆನ್ಸ್ ಗೆ ಕರೆ ಮಾಡಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆದರೆ, ಆಸ್ಪತ್ರೆಗೆ ತಲುಪಿದಾಗ ವೈದ್ಯರು ಅವರು ಈಗಾಗಲೇ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
ಪ್ರಭಾಕರ್ ಅವರಿಗೆ ವಿಪರೀತ ರಕ್ತಸ್ರಾವವಾಗಿ, ಅವರು ಸ್ಥಳದಲ್ಲೇ ಕುಸಿದು ಬಿದ್ದರು. ಅವರ ಹೆಣ್ಣುಮಕ್ಕಳು ತಕ್ಷಣವೇ 108ಕ್ಕೆ ಕರೆ ಮಾಡಿ ಆಂಬ್ಯುಲೆನ್್ಸ ಮೂಲಕ ಅವರನ್ನು ಕೊತ್ತಪೇಟ್ನ ಓಮ್ನಿ ಆಸ್ಪತ್ರೆಗೆ ಕರೆದೊಯ್ದರು. ಆದರೆ, ಆಸ್ಪತ್ರೆಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದರು ಎಂದು ವೈದ್ಯರು ತಿಳಿಸಿದರು.
