Tuesday, November 26, 2024
Homeರಾಜ್ಯಇಂದು ನಡೆಯಿತು 2ನೇ ಹಂತದ ರ್‍ಯಾಂಡಮೈಸೇಷನ್‌

ಇಂದು ನಡೆಯಿತು 2ನೇ ಹಂತದ ರ್‍ಯಾಂಡಮೈಸೇಷನ್‌

ಬೆಂಗಳೂರು,ಏ.13- ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಮತಗಟ್ಟೆ ಸಿಬ್ಬಂದಿಯ ಎರಡನೇ ಹಂತದ ರ್ಯಾಂಡಮೈಸೇಷನ್ ಅನ್ನು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿ ನಾಥ್ ಅವರು ಸಾಮಾನ್ಯ ವೀಕ್ಷಕರುಗಳ ಸಮ್ಮುಖದಲ್ಲಿ ಇಂದು ಮಲ್ಲೇಶ್ವರಂ ಐಪಿಪಿ ಕೇಂದ್ರದಲ್ಲಿ ನಡೆಸಿದರು.

ಜಿಲ್ಲಾ ಚುನಾವಣಾಧಿಕಾರಿಗಳ ವ್ಯಾಪ್ತಿಯಲ್ಲಿ ಬೆಂಗಳೂರು ಕೇಂದ್ರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಸೇರಿದಂತೆ ಮೂರು ಲೋಕಸಭಾ ಕ್ಷೇತ್ರಗಳು ಬರಲಿವೆ. ಈ ಸಂಬಂಧ ಮೂರು ಲೋಕಸಭಾ ಕ್ಷೇತ್ರಗಳಲ್ಲಿ 24 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರಕ್ಕೆ 1 ವಿಧಾನಸಭಾ ಕ್ಷೇತ್ರ ಹಾಗೂ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಕ್ಕೆ 3 ಲೋಕಸಭಾ ಕ್ಷೇತ್ರಗಳು ಬರಲಿವೆ. ಅದರಂತೆ, 28 ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟಾರೆ 43123 ಮತಗಟ್ಟೆ ಅಧಿಕಾರಿ ಮತ್ತು ಸಿಬ್ಬಂದಿಗಳನ್ನು ನಿಯೋಜನೆ ಮಾಡಿಕೊಳ್ಳಲಾಗಿದೆ.

ಲೋಕಸಭಾ ಚುನಾವಣೆಗೆ ನಿಯೋಜನೆ ಮಾಡಿಕೊಂಡಿರುವ ಮತಗಟ್ಟೆ ಅಧಿಕಾರಿಗಳಿಗೆ ಏ.17 ರಂದು ಆಯಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಿಗದಿಪಡಿಸಿರುವ ಸ್ಥಳಗಳಲ್ಲಿ ಬೆಳಗ್ಗೆ 9.30ರಿಂದ ಎರಡನೇ ಹಂತದ ತರಬೇತಿ ನೀಡಲು ನಿರ್ಧರಿಸಲಾಗಿದೆ. ಏ.24 ರಂದು ಅಂತಿಮ ಹಂತದ ರ್ಯಾಂಡಮೈಸೇಷನ್ ಅನ್ನು ನಡೆಸಲಾಗುತ್ತದೆ.

ಅದಲ್ಲದೆ, ಮತದಾನದ ದಿನ ಕಾರ್ಯನಿರ್ವಹಿಸಲು ಮೈಕ್ರೋ ಅಬ್ಸವರ್ಸ್ ನೇಮಿಸುವ ಹಾಗೂ ಅವರಿಗೆ ತರಬೇತಿ ನೀಡುವ ಕುರಿತು ಸಾಮಾನ್ಯ ವೀಕ್ಷಕರೊಂದಿಗೆ ಇದೇ ವೇಳೆ ಚರ್ಚಿಸಲಾಯಿತು.

ಈ ವೇಳೆ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಮಕ್ರಂದ್ ಪಾಂಡುರಂಗ್ , ಬೆಂಗಳೂರು ಉತ್ತದ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ಗಾಯತ್ರಿ ರಾಥೋರ್, ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕರಾದ ವಾಣಿ ಮೋಹನ್ ಹಾಗೂ ಎಂಸಿಸಿ ನೊಡಲ್ ಅಧಿಕಾರಿ ಮುನೀಶ್ ಮೌದ್ಗಿಲ್ , ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಚುನಾವಣಾಕಾರಿಗಳಾದ ಡಾ. ಹರೀಶ್ ಕುಮಾರ್, ಕೆ.ಎ ದಯಾನಂದ್, ವಿನೋತ್ ಪ್ರಿಯಾ, ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ , ಜಿಲ್ಲಾ ಮಟ್ಟದ ಮಾನವ ಸಂಪನ್ಮೂಲ ನೋಡಲ್ ಅಧಿಕಾರಿ ಡಿ.ಆರ್ ಅಶೋಕ್ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

RELATED ARTICLES

Latest News