Homeರಾಜ್ಯಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಡಿ.2ರಿಂದ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

ಬೆಂಗಳೂರು, ನ.7- ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಡಿಸೆಂಬರ್‌ 2ರಿಂದ 9 ದಿನಗಳ ಕಾಲ ವಿಧಾನ ಮಂಡಲದ ಉಭಯ ಸದನಗಳ ಚಳಿಗಾಲದ ಅಧಿವೇಶನ ನಡೆಯಲಿದೆ. ಸುವರ್ಣ ವಿಧಾನಸೌಧದಲ್ಲಿ ಡಿ.2ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸಭೆಯ ಅಧಿವೇಶನ ಸಮಾವೇಶಗೊಳ್ಳಲು ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ ಎಂದು ವಿಧಾನಸಭೆಯ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸಾಮಾನ್ಯವಾಗಿ ಸುವರ್ಣ ವಿಧಾನಸೌಧದಲ್ಲಿ 10 ದಿನಗಳ ಕಾಲ ಅಧಿವೇಶನ ನಡೆಯುವುದು ವಾಡಿಕೆ. ಆದರೆ, ಈ ಬಾರಿಯ ಚಳಿಗಾಲದ ಅಧಿವೇಶನವನ್ನು 9 ದಿನಗಳಿಗೆ ಸೀಮಿತಗೊಳಿಸಲಾಗಿದೆ.

ಡಿ.2ರಿಂದ ಡಿ.11ರವರೆಗೆ ಅಧಿವೇಶನ ನಡೆಸಲು ಕಾರ್ಯಕ್ರಮಗಳ ಪಟ್ಟಿ ಪ್ರಕಟಿಸಲಾಗಿದೆ. ಡಿ.5ರಂದು ಶನಿವಾರ ಅಧಿವೇಶನವನ್ನು ನಡೆಸಲಾಗುತ್ತದೆ. ಸಾಮಾನ್ಯವಾಗಿ ಶಾಸಕರು ತಮ ತಮ ಕ್ಷೇತ್ರಗಳ ಕಾರ್ಯಕ್ರಮಗಳಲ್ಲಿ ಭಾಗಿಯಾಗುವ ಹಿನ್ನೆಲೆಯಲ್ಲಿ ಶನಿವಾರದಂದು ಅಧಿವೇಶನ ನಡೆಸುತ್ತಿರಲಿಲ್ಲ.

RELATED ARTICLES

Latest News