Monday, November 25, 2024
Homeರಾಜ್ಯಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಪಟಾಕಿ ದುರಂತ : ನಾಲ್ವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶ

ಬೆಂಗಳೂರು,ಅ.11- ಅತ್ತಿಬೆಲೆ ಪಟಾಕಿ ಬೆಂಕಿ ದುರಂತದ ಹಿನ್ನಲೆಯಲ್ಲಿ ಆನೇಕಲ್ ತಹಸೀಲ್ದಾರ್(ಹಿಂದಿನ) ಶಶಿಧರ ಮಾಡ್ಯಾಳ್ ಸೇರಿದಂತೆ ನಾಲ್ವರು ಅಧಿಕಾರಿ ಸಿಬ್ಬಂದಿಯನ್ನು ಸೇವೆಯಿಂದ ಅಮಾನತುಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ.

ಬೆಂಗಳೂರು ನಗರ ಜಿಲ್ಲಾಧಿಕಾರಿ ನೀಡಿರುವ ವರದಿ ಆಧರಿಸಿ ಕರ್ತವ್ಯ ನಿರ್ಲಕ್ಷ್ಯತೆ ಆರೋಪದ ಮೇಲೆ ತಹಸೀಲ್ದಾರ್ ಶಶಿಧರ ಮಾಡ್ಯಾಳ್ ಅತ್ತಿಬೆಲೆ ನಾಡಕಚೇರಿ ಉಪತಹಸೀಲ್ದಾರ್ ಶ್ರೀಧರ್.ವಿ.ಸಿ ಅತ್ತಿಬೆಲೆ ವೃತ್ತದ ರಾಜಸ್ವ ನಿರೀಕ್ಷಕ ಪುಷ್ಪರಾಜ್.ಎ ಹಾಗೂ ಗ್ರಾಮ ಆಡಳಿತಾಧಿಕಾರಿ ಭಾಗೇಶ್ ಹೊಸಮನೆ ಅವರನ್ನು ಇಲಾಖೆ ವಿಚಾರಣೆ ಕಾಯ್ದಿರಿಸಿ ಸೇವೆಯಿಂದ ಅಮಾನತು ಮಾಡಿ ಕಂದಾಯ ಇಲಾಖೆ ಆದೇಶ ಹೊರಡಿಸಿದೆ.

ಇಂದಿರಾ ಕ್ಯಾಂಟಿನ್ ರೀ ಓಪನ್‍ಗೆ ಅಡ್ಡಿಯಾಯ್ತೇ ಗ್ಯಾರಂಟಿ ಯೋಜನೆಗಳು..?

ಅಮಾನತು ಅವಧಿಯಲ್ಲಿ ನಿಯಮಾನುಸಾರ ಜೀವನ ಆಧಾರ ಭತ್ಯೆಯನ್ನು ಪಡೆಯಲು ಅರ್ಹರಾಗಿದ್ದು, ಸಕ್ಷಮ ಪ್ರಾಧಿಕಾರದ ಪೂರ್ವಾನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡುವಂತಿಲ್ಲ ಎಂದು ಆದೇಶದಲ್ಲಿ ಸೂಚಿಸಲಾಗಿದೆ.
ಹಸಿರು ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಕಾರಣರಾದ ಮತ್ತು ಅಸಮರ್ಪಕ ವರದಿ ಸಲ್ಲಿಸಲು ಕಾರಣರಾದ ಆರೋಪದ ಮೇಲೆ ಶಿಸ್ತು ಕ್ರಮ ಜರುಗಿಸಲು ತೀರ್ಮಾನಿಸಿ ಜಂಟಿ ಇಲಾಖೆ ವಿಚಾರಣೆಯನ್ನು ಬಾಕಿ ಇರಿಸಿ ಸೇವಾ ನಿಯಮಗಳ ಅನ್ವಯ ಅಮಾನತುಗೊಳಿಸಲಾಗಿದೆ.

ಅ.7ರಂದು ಆನೇಕಲ್ ತಾಲ್ಲೂಕಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ 14 ಮಂದಿ ಮೃತಪಟ್ಟಿದ್ದು, ಕೆಲವರು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ದುರಂತಕ್ಕೆ ಮೇಲಿನ ಅಧಿಕಾರಿಗಳೇ ಕಾರಣ ಎಂದು ಆದೇಶದಲ್ಲಿ ಪ್ರಸ್ತಾಪಿಸಲಾಗಿದೆ.

RELATED ARTICLES

Latest News