ಬೆಂಗಳೂರು,ನ.14- ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಅವಹೇಳನ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸಾರಕ ನಿಧಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ಮಾಡಿದೆ.
ಈ ಸಂಬಂಧ ಗಾಂಧಿ ಸಾರಕ ನಿಧಿಯ ಅಧ್ಯಕ್ಷ ಡಾ.ವೂಡೇ ಪಿ.ಕೃಷ್ಣ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದು, ಗಾಂಧಿಜಿಯವರು ಸತ್ಯ, ಅಹಿಂಸೆ, ಶಾಂತಿ, ಸೌಹಾರ್ದತೆ ಹಾಗೂ ಮಾನವೀಯ ಮೌಲ್ಯಗಳ ಮೂಲಕ ಇಡೀ ಜಗತ್ತಿಗೆ ಮಾದರಿಯಾದ ಮಹಾನ್ ವ್ಯಕ್ತಿಯಾಗಿದ್ದಾರೆ. ಇಂತಹ ವ್ಯಕ್ತಿಯ ವ್ಯಕ್ತಿತ್ವಕ್ಕೆ ಧಕ್ಕೆ ತರುವ ರೀತಿಯಲ್ಲಿ ಕೆಲ ವ್ಯಕ್ತಿಗಳು ಅವಹೇಳನಕಾರಿ ಹೇಳಿಕೆ ನೀಡುತ್ತಿರುವುದನ್ನು ಗಾಂಧಿ ಸಾರಕ ನಿಧಿಯು ತೀವ್ರವಾಗಿ ಖಂಡಿಸುತ್ತದೆ ಎಂದಿದ್ದಾರೆ.
ಗಾಂಧಿ ಸಾರಕ ನಿಧಿಯು ನ.12 ರಂದು ನಡೆದ ಸರ್ವಸದಸ್ಯರ ಸಭೆಯಲ್ಲಿ ಮಹಾತ ಗಾಂಧೀಜಿಯವರ ವ್ಯಕ್ತಿತ್ವ ಹಾಗೂ ಗೌರವಕ್ಕೆ ಧಕ್ಕೆ ತರುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಸರ್ಕಾರವನ್ನು ಒತ್ತಾಯಿಸಲು ನಿರ್ಣಯಿಸಲಾಯಿತು ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಗಾಂಧೀಜಿಯವರ ವಿಚಾರಧಾರೆಗಳು ಸಮಾಜಕ್ಕೆ ಅತ್ಯಂತ ಪ್ರಸ್ತುತವಾಗಿದ್ದು, ಯುವಜನರು ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಅವರ ಆದರ್ಶಗಳನ್ನು ಪರಿಚಯಿಸುವುದು ನಮೆಲ್ಲರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಗಾಂಧಿ ಸಾರಕ ನಿಧಿಯು ಗಾಂಧೀಜಿಯವರ ಸತ್ಯ, ಅಹಿಂಸೆ, ಸರಳತೆ, ಸಮಾನತೆ ಹಾಗೂ ಸರ್ವ ಧರ್ಮ ಸಮಭಾವದ ವಿಚಾರಗಳನ್ನು ಜನಮನಕ್ಕೆ ತಲುಪಿಸಲು ವಿವಿಧ ಕಾರ್ಯಕ್ರಮಗಳನ್ನು ರೂಪಿಸಿದೆ.
ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಅವಹೇಳನ ಮಾಡುವವರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳುವುದರ ಜೊತೆಗೆ ಗಾಂಧೀಜಿಯವರ ಆದರ್ಶ ಮತ್ತು ವಿಚಾರಧಾರೆಗಳ ಪ್ರಚಾರ ಹಾಗೂ ಪ್ರಸಾರಕ್ಕೆ ಸರ್ಕಾರ ಅಗತ್ಯ ಸಹಕಾರ ನೀಡಬೇಕೆಂದು ಮನವಿ ಪತ್ರದಲ್ಲಿ ಅವರು ಕೋರಿದ್ದಾರೆ.
