ನವದೆಹಲಿ,ಅ.11- ನಿಷೇಧಿತ ಪಿಎಫ್‍ಐ ಸಂಘಟನೆಯ ಮುಖಂಡರ ಮೇಲೆ ದೇಶದ ವಿವಿಧೆಡೆ ರಾಷ್ಟ್ರೀಯ ತನಿಖಾ ದಳ (ಎನ್‍ಐಎ) ದೇಶದ ವಿವಿಧೆಡೆ ದಾಳಿ ನಡೆಸಿದ್ದಾರೆ. ಕೆಲ ದಿನಗಳ ಹಿಂದೆ ಚೆನ್ನೈ, ಆಂಧ್ರಪ್ರದೇಶ, ತೆಲಂಗಾಣ ಸೇರಿದಂತೆ ಮತ್ತಿತರ ಕಡೆ ಎನ್‍ಐಎ ದಾಳಿ ನಡೆಸಿತ್ತು. ಇದರ ಬೆನ್ನಲೇ ಇಂದು ಹಲವಾರು ರಾಜ್ಯಗಳಲ್ಲಿ ದಾಳಿ ನಡೆಸಿ ಕೆಲವರನ್ನು ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಮಿಳುನಾಡಿನ ಮಧುರೈ ಜಿಲ್ಲೆಯ ಹಲವು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಇಲ್ಲಿನ ಕಜಿಮಾರ್ ಸ್ಟ್ರೀಟ್‍ನಲ್ಲೂ ಅಧಿಕಾರಿಗಳು ಕಾರ್ಯಾಚರಣೆ ನಡೆಸಿದ್ದಾರೆ. ಜಮಾತ್ ಹಿಂದ್ ಮೂವ್‍ಮೆಂಟ್ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ತಾಜುದ್ದೀನ್ ಮನೆ ಮೇಲೆ ದಾಳಿ ನಡೆಸಿರುವ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈ ಸಂಘಟನೆ ಹಲವರು ಸರ್ಕಾರದ ವಿರುದ್ಧ ಕಾನೂನು ಬಾಹಿರ ಚಟುವಟಿಕೆ ನಡೆಸುತ್ತಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಡ್ರಗ್ಸ್ ಕಳ್ಳಸಾಗಣಿಕೆದಾರನಿಂದ 4.94 ಕೋಟಿ ರೂ.ನಗದು ಸೀಜ್
ಮಹಾರಾಷ್ಟ್ರದ ಮುಂಬೈ ಸೇರಿದಂತೆ ಹಲವು ಕಡೆಗಳಲ್ಲಿ ಎನ್‍ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. 2006ರ ಮುಂಬೈ ರೈಲ್ ಬಾಂಬ್ ಸ್ಪೋಟ ಪ್ರಕರಣದ ಪ್ರಮುಖ ಆರೋಪಿ ವಾಹಿದ್ ಶೇಖ್‍ನ ಮನೆ ಮೇಲೆ ದಾಳಿ ನಡೆಸಿದೆ. ವಿಖ್ರೋಲಿಯಲ್ಲಿರುವ ಆರೋಪಿಯ ಮನೆಯಲ್ಲಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದಾರೆ.