ನವದೆಹಲಿ, ನ.16- (ಪಿಟಿಐ) ಬೆಲಾರಸ್ ವಿದೇಶಾಂಗ ಸಚಿವ ಮ್ಯಾಕ್ಸಿಮ್ ರೈಜೆಂಕೋವ್ ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸಿದ್ದಾರೆ. ತಮ್ಮ ಭೇಟಿಯ ಸಂದರ್ಭದಲ್ಲಿ ಅವರು ಭಾರತ-ಬೆಲಾರಸ್ ಅಂತರಸರ್ಕಾರಿ ಆಯೋಗದ ಸಹ-ಅಧ್ಯಕ್ಷರಾಗಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (ಎಂಇಎ) ತಿಳಿಸಿದೆ.
ವಿದೇಶಾಂಗ ವ್ಯವಹಾರಗಳ ವಕ್ತಾರ ರಣಧೀರ್ ಜೈಸ್ವಾಲ್ ಅವರು ಭಾನುವಾರ ತಡರಾತ್ರಿ ಎಕ್ಸ್ ಪೋಸ್ಟ್ನಲ್ಲಿ ಈ ಮಾಹಿತಿಯನ್ನು ಹಂಚಿಕೊಂಡಿದ್ದಾರೆ.ಬೆಲಾರಸ್ ಗಣರಾಜ್ಯದ ವಿದೇಶಾಂಗ ವ್ಯವಹಾರಗಳ ಸಚಿವ ಮ್ಯಾಕ್ಸಿಮ್ ರೈಜೆಂಕೋವ್ ಅಧಿಕೃತ ಭೇಟಿಗಾಗಿ ನವದೆಹಲಿಗೆ ಆಗಮಿಸಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಭೇಟಿಯ ಸಂದರ್ಭದಲ್ಲಿ ರೈಜೆಂಕೋವ್ ಅವರು ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ಅವರೊಂದಿಗೆ ಆಯೋಗದ ಸಹ-ಅಧ್ಯಕ್ಷರಾಗಲಿದ್ದಾರೆ. ಅಲ್ಲದೆ, ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ಅವರೊಂದಿಗೆ ಮಾತುಕತೆ ನಡೆಸಲಿದ್ದಾರೆ ಎಂದು ಜೈಸ್ವಾಲ್ ತಿಳಿಸಿದ್ದಾರೆ.
