ಬೆಂಗಳೂರು,ನ.17- ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲ್ಲೂಕಿನ ಛತ್ರದ ಬಳಿ ರಾತ್ರಿ ಬಸ್ಸೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ 25 ಮಂದಿ ಗಾಯಗೊಂಡಿದ್ದು, ನಾಲ್ವರ ಸ್ಥಿತಿ ಗಂಭೀರವಾಗಿದೆ.
ಛತ್ರದ ಬಳಿಯ ರಾಷ್ಟ್ರೀಯ ಹೆದ್ದಾರಿ-48ರ ಬದಿ ಲಾರಿಯೊಂದು ನಿಂತಿತ್ತು. ರಾತ್ರಿ ಸುಮಾರು 12.30ರ ಸಮಯದಲ್ಲಿ ಅದೇ ಮಾರ್ಗವಾಗಿ ಬಂದ ಪ್ರವಾಸಿ ಬಸ್ಸೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಪಘಾತ ಸಂಭವಿಸಿದೆ.
ಗಂಭೀರ ಗಾಯಗೊಂಡಿರುವ ನಾಲ್ವರನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಉಳಿದವರು ಬ್ಯಾಡಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ತಿಳಿದ ಬ್ಯಾಡಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ
