ಬೆಂಗಳೂರು,ನ.17- ಪೆಟ್ರೋಲ್‌ನಲ್ಲಿ ಶೇ.30ಕ್ಕೂ ಅಧಿಕ ಪ್ರಮಾಣದಲ್ಲಿ ಎಥೆನಾಲ್ ಮಿಶ್ರಣ ಮಾಡಲಾಗುತ್ತಿದೆ ಎಂಬ ಸಚಿವ ರಿಜ್ವಾನ್ ಅರ್ಷದ್ ಆರೋಪ ಸತ್ಯಕ್ಕೆ ದೂರವಾಗಿದ್ದು, ಇದು ರಾಜಕೀಯ ಪ್ರೇರಿತ ಆರೋಪವಾಗಿದೆ ಎಂದು ಮಾಜಿ ಸಚಿವ ಹಾಗೂ ಬಿಜೆಪಿ ರಾಜ್ಯ ಉಪಾಧ್ಯಕ್ಷ ಮುರುಗೇಶ್ ನಿರಾಣಿ ತಿರುಗೇಟು ನೀಡಿದ್ದಾರೆ.
ಸಹಕಾರದಲ್ಲಿ ತಮ ಒಡೆತನದ ವಿಜಯ(ಎಂಆರ್‌ಎನ್ ಸೌಹಾರ್ದ ಕ್ರೆಡಿಟ್ ಸಹಕಾರಿ ಸಂಘದ ಶಾಖೆಯನ್ನು ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಎಥೆನಾಲ್ ಮಿಶ್ರಣದ ವಿಚಾರದಲ್ಲಿ ರಿಜ್ವಾನ್ ಅರ್ಷದ್ ಅವರು ಅಗತ್ಯ ಪ್ರಕ್ರಿಯೆಗಳನ್ನು ಅನುಸರಿಸದೆ ಆರೋಪ ಮಾಡಿದ್ದಾರೆ ಎಂದು ಆಕ್ಷೇಪಿಸಿ ದರು.
ದೇಶದಲ್ಲಿ ಎಥೆನಾಲ್ ಉತ್ಪಾದನೆ ಮಾಡುವವರಿಗೆ ನೇರವಾಗಿ ಪೆಟ್ರೋಲ್ ಪಂಪ್‌ಗಳಿಗೆ ಅಥವಾ ಇತರ ಕಡೆಗಳಲ್ಲಿ ಪೆಟ್ರೋಲ್ ಮಾರಾಟ ಮಾಡುವ ಅವಕಾಶವಿಲ್ಲ. ಎಥೆನಾಲ್ ಉತ್ಪಾದಕರು ಬಹುರಾಷ್ಟ್ರೀಯ ಕಂಪನಿಗಳಿಗೆ ಮಾತ್ರ ಮಾರಾಟ ಮಾಡುತ್ತಾರೆ. ತೈಲ ಉತ್ಪಾದನಾ ಕಂಪನಿಗಳು ಎಥೆನಾಲ್ ಖರೀದಿಸಿ, ನಿಗದಿತ ಪ್ರಮಾಣದಲ್ಲಿ ಮಿಶ್ರಣ ಮಾಡಿ ವಿವಿಧೆಡೆ ಪೂರೈಕೆ ಮಾಡುತ್ತವೆ. ಸಾಮಾನ್ಯವಾಗಿ ಶೇ.20ರಷ್ಟು ಬ್ಲೆಂಡಿಂಗ್ ಪ್ರಕ್ರಿಯೆ ನಡೆಯು ತ್ತದೆ ಎಂದು ಸಮರ್ಥನೆ ಮಾಡಿಕೊಂಡರು.
ಪೆಟ್ರೋಲ್‌ನಲ್ಲಿ ಎಥೆನಾಲ್ ಪ್ರಮಾಣ ಹೆಚ್ಚಾಗಿದೆ ಎಂಬುದಕ್ಕೆ ಯಾವ ಪೆಟ್ರೋಲ್ ಬಂಕ್‌ನಲ್ಲಿ ಪರೀಕ್ಷೆ ನಡೆಸಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಬೇಕು. ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ, ತಜ್ಞರು ಹಾಗೂ ಆರೋಪ ಮಾಡಿರುವ ವ್ಯಕ್ತಿಯನ್ನು ಒಳಗೊಂಡ ಸಮಿತಿಯನ್ನು ರಚಿಸಲಿ. ಆ ಸಮಿತಿಯ ಸಮುಖದಲ್ಲೇ ಪೆಟ್ರೋಲ್ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆ ನಡೆಸಲಿ ಎಂದು ಸವಾಲು ಹಾಕಿದರು.
ವರಿಷ್ಠರ ತೀರ್ಮಾನವೇ ಅಂತಿಮ:
ಬಿಜೆಪಿ ರಾಜ್ಯಾಧ್ಯಕ್ಷರ ಬದಲಾವಣೆ ಕುರಿತು ಪ್ರತಿಕ್ರಿಯಿಸಿದ ಅವರು, ಬಿ.ವೈ.ವಿಜಯೇಂದ್ರ ಉತ್ತಮ ವಾಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ಮೂರು ವರ್ಷಗಳಿಂದ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರವಾಸ ಮಾಡಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸುಮಾರು 20 ವರ್ಷಗಳ ಹಿಂದೆ ಕೇವಲ 15 ಲಕ್ಷ ರೂ. ಷೇರು ಬಂಡವಾಳದೊಂದಿಗೆ ಸಂಘವನ್ನು ಆರಂಭಿಸಲಾಗಿದೆ. ಕಳೆದ ಎರಡು ದಶಕಗಳಲ್ಲಿ ಯಶಸ್ವಿಯಾಗಿ 76 ಶಾಖೆಗಳನ್ನು ಸ್ಥಾಪಿಸಲಾಗಿದೆ. ಕಳೆದ ವರ್ಷ ಸಂಘವು 60 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಶಾಸಕರು ಹಾಗೂ ಮಾಜಿ ಶಾಸಕರ ಸಲಹೆಯಂತೆ ಬೆಂಗಳೂರಿನಲ್ಲಿ ಒಟ್ಟು 10 ಶಾಖೆಗಳನ್ನು ತೆರೆಯಲು ನಿರ್ಧರಿಸಲಾಗಿದೆ. ಇದಕ್ಕೆ ಸರ್ಕಾರದಿಂದ ಅನುಮತಿಯೂ ದೊರೆತಿದೆ ಎಂದು ಅವರು ಹೇಳಿದರು.
