Homeಬೆಂಗಳೂರುಬೆಂಗಳೂರಿನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಮೂವರ ದುರ್ಮರಣ

ಬೆಂಗಳೂರಿನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ಅಪಘಾತಗಳಲ್ಲಿ ಮೂವರ ದುರ್ಮರಣ

ಬೆಂಗಳೂರು,ನ.18- ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಂಭವಿಸಿದ ಮೂರು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ ಮೂವರು ಮೃತಪಟ್ಟಿರುವ ಘಟನೆ ನಡೆದಿದೆ.

ವೈಟ್‌ಫೀಲ್ಡ್‌‍:
ಸಿದ್ದಾಪುರ ರಸ್ತೆಯಲ್ಲಿರುವ ಶೆಲ್‌ ಪೆಟ್ರೋಲ್‌ ಬಂಕ್‌ ಬಳಿ ಮೋಟಾರ್‌ ಸೈಕಲ್‌ ಮತ್ತು ಗ್ಸೂ್‌‍ ವಾಹನದ ನಡುವೆ ಅಪಘಾತ ಸಂಭವಿಸಿ ಪಶ್ಚಿಮ ಬಂಗಾಳ ಮೂಲದ ಪಂಚಾನಂದ್‌ ದಾಸ್‌‍ (21) ಎಂಬ ಯುವಕ ಮೃತಪಟ್ಟಿದ್ದಾನೆ. ಸೆಕ್ಯೂರಿಟಿ ಕೆಲಸ ಮಾಡುತ್ತಿದ್ದ ದಾಸ್‌‍ ಅವರು ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದೆ. ಈ ಸಂಬಂಧ ವೈಟ್‌ಫೀಲ್ಡ್‌‍ ಸಂಚಾರಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೆ.ಆರ್‌.ಪುರಂ :
ಐಟಿಐ ಮತ್ತು ಸರ್ಕಾರಿ ಆಸ್ಪತ್ರೆ ನಡುವಿನ ರಸ್ತೆಯಲ್ಲಿ ಆರ್‌ಎಂಸಿ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಪ್ರಭುಲಿಂಗಯ್ಯ(25) ಎಂಬುವವರು ಮೃತಪಟ್ಟಿದ್ದಾರೆ.

ಖಾಸಗಿ ಕಂಪನಿಯ ಉದ್ಯೋಗಿಯಾಗಿದ್ದ ಇವರು ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದಾಗ ಅಪಘಾತಕ್ಕೀಡಾ ಗಿದ್ದಾರೆ. ಈ ಕುರಿತು ಕೆ.ಆರ್‌.ಪುರಂ ಸಂಚಾರಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಸಂಚಾರಿ ಪೊಲೀಸ್‌‍ ಇನ್‌್ಸಪೆಕ್ಟರ್‌ ತಿಳಿಸಿದ್ದಾರೆ.

ಕೆ.ಜಿ.ಹಳ್ಳಿ:
ಹೆಣ್ಣೂರು ರಸ್ತೆಯ ಆಯಿಲ್‌ ಮಿಲ್‌ ಬಳಿ ನಿನ್ನೆ ಮಧ್ಯಾಹ್ನ ಮತ್ತೊಂದು ಅಪಘಾತ ಸಂಭವಿ ಸಿದೆ. ಅತಿವೇಗವಾಗಿ ದ್ವಿಚಕ್ರ ವಾಹನ ಚಲಾಯಿಸಿಕೊಂಡು ಹೋಗುತ್ತಿದ್ದ ಸವಾರ ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಪರಿಣಾಮ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾರೆ.
ಮೃತರನ್ನು ಕಾಚಕಾರನಹಳ್ಳಿ ನಿವಾಸಿ ಡೆನ್ವಾರ್‌ (46) ಎಂದು ಗುರುತಿಸಲಾಗಿದೆ.
ಈ ಸಂಬಂಧ ಕೆ.ಜಿ.ಹಳ್ಳಿ ಸಂಚಾರಿ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

RELATED ARTICLES

Latest News