Friday, November 22, 2024
Homeರಾಷ್ಟ್ರೀಯ | Nationalಕೇಜ್ರಿವಾಲ್ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಳ, ಇನ್ಸುಲಿನ್ ನೀಡಿದ ಜೈಲಿನ ಅಧಿಕಾರಿಗಳು

ಕೇಜ್ರಿವಾಲ್ ರಕ್ತದಲ್ಲಿನ ಸಕ್ಕರೆ ಪ್ರಮಾಣ ಹೆಚ್ಚಳ, ಇನ್ಸುಲಿನ್ ನೀಡಿದ ಜೈಲಿನ ಅಧಿಕಾರಿಗಳು

ನವದೆಹಲಿ, ಏ. 23 (ಪಿಟಿಐ) : ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಮಟ್ಟವು ಹೆಚ್ಚಿದ ನಂತರ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ಅನ್ನು ನೀಡಲಾಯಿತು ಎಂದು ತಿಹಾರ್ ಜೈಲಿನ ಅಧಿಕಾರಿಗಳು ತಿಳಿಸಿದ್ದಾರೆ. ಏಮ್ಸ್ ವೈದ್ಯರ ಸಲಹೆಯ ಮೇರೆಗೆ ನಿನ್ನೆ ಸಂಜೆ ಕೇಜ್ರಿವಾಲ್ ಅವರಿಗೆ ಕಡಿಮೆ ಪ್ರಮಾಣದ ಇನ್ಸುಲಿನ್ ಎರಡು ಘಟಕಗಳನ್ನು ನೀಡಲಾಗಿದೆ ಎಂದು ತಿಹಾರ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ರಾತ್ರಿ 7 ಗಂಟೆ ಸುಮಾರಿಗೆ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 217 ರಷ್ಟಿದ್ದು, ತಿಹಾರ್‍ನ ವೈದ್ಯರು ಅವರಿಗೆ ಇನ್ಸುಲಿನ್ ನೀಡಲು ನಿರ್ಧರಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.ಏಪ್ರಿಲ್ 20 ರಂದು ಮುಖ್ಯಮಂತ್ರಿಯವರೊಂದಿಗೆ ವಿಡಿಯೋ ಕಾನರೆನ್ಸ್ ನಡೆಸಿದ ಏಮ್ಸ ತಜ್ಞರು ತಿಹಾರ್ ವೈದ್ಯರಿಗೆ ಸಕ್ಕರೆಯ ಮಟ್ಟವು ಒಂದು ನಿರ್ದಿಷ್ಟ ಮಟ್ಟವನ್ನು ದಾಟಿದರೆ ಅವರಿಗೆ ಇನ್ಸುಲಿನ್ ನೀಡಬಹುದು ಎಂದು ಸಲಹೆ ನೀಡಿದ್ದರು ಎಂದು ಅವರು ಹೇಳಿದರು.

ಏತನ್ಮಧ್ಯೆ, ತಿಹಾರ್‍ನಲ್ಲಿ ಕೇಜ್ರಿವಾಲ್ ಅವರ ರಕ್ತದಲ್ಲಿನ ಸಕ್ಕರೆ ಪ್ರಮಾಣ 320 ದಾಟಿದೆ ಎಂದು ಎಎಪಿ ಮೂಲಗಳು ತಿಳಿಸಿವೆ. ಕೆಲ ದಿನಗಳಿಂದ ಶುಗರ್ ಲೆವೆಲ್ ಹೆಚ್ಚಾಗುತ್ತಿದ್ದರೂ ಜೈಲಿನಲ್ಲಿ ಅವರಿಗೆ ಇನ್ಸುಲಿನ್ ನೀಡುತ್ತಿರುವುದು ಇದೇ ಮೊದಲು ಎಂದು ಹೇಳಿದ್ದಾರೆ.

ದೆಹಲಿ ಸರ್ಕಾರವು ಈಗ ರದ್ದುಗೊಳಿಸಿರುವ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿಯನ್ನು ಮಾರ್ಚ್ 21 ರಂದು ಜಾರಿ ನಿರ್ದೇಶನಾಲಯ (ಇಡಿ) ಬಂಧಿಸಿತ್ತು. ಅವರು ಏಪ್ರಿಲ್ 1 ರಿಂದ ತಿಹಾರ್ ಜೈಲಿನಲ್ಲಿದ್ದಾರೆ.

RELATED ARTICLES

Latest News