ಕಣ್ಣೂರು, ಏ. 23 (ಪಿಟಿಐ) : ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳುವ ಮೂಲಕ ಚುನಾವಣಾ ಆಯೋಗವು ಪಕ್ಷಾತೀತವಾಗಿ ವರ್ತಿಸದಿರುವುದು ದುರದೃಷ್ಟಕರ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಹೇಳಿದ್ದಾರೆ.
ಇತ್ತೀಚೆಗಷ್ಟೇ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿದ ಹೇಳಿಕೆಗಳ ಹಿನ್ನೆಲೆಯಲ್ಲಿ ಚುನಾವಣಾ ಆಯೋಗ ಅವರ ವಿರುದ್ಧ ಕ್ರಮ ಕೈಗೊಳ್ಳದಿರುವುದು ದುರದುಷ್ಟಕರ ಎಂದಿದ್ದಾರೆ. ಚುನಾವಣಾ ಆಯೋಗವು ಅದನ್ನು ಪಕ್ಷಾತೀತವಾಗಿ ತೋರಿಸಬೇಕಿತ್ತು. ಅದು ತಕ್ಷಣವೇ ಕಾರ್ಯನಿರ್ವಹಿಸಬೇಕಿತ್ತು ಎಂದು ಮಾಕ್ರ್ಸ್‍ವಾದಿ ಅನುಭವಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ಇದು ಸುಪ್ರೀಂ ಕೋರ್ಟ್‍ನಲ್ಲಿ ಪ್ರಸ್ತಾಪವಾಗಬೇಕಾದ ವಿಷಯವಾಗಿದೆ ಎಂದು ವಿಜಯನ್ ಹೇಳಿದರು.ಅದೇ ಸಮಯದಲ್ಲಿ, ಪ್ರಧಾನಿಯವರ ಇಂತಹ ಹೇಳಿಕೆಗಳಿಂದಾಗಿ ರಾಷ್ಟ್ರದಲ್ಲಿ ಬಿಜೆಪಿ ವಿರೋಧಿ ಭಾವನೆ ಬಲಗೊಳ್ಳುತ್ತಿದೆ ಮತ್ತು ಕೇಸರಿ ಪಕ್ಷವು ಮತ್ತಷ್ಟು ಪ್ರತ್ಯೇಕಗೊಳ್ಳುತ್ತದೆ ಎಂದು ಅವರು ಹೇಳಿದ್ದಾರೆ.
ಭಾನುವಾರ ರಾಜಸ್ಥಾನದ ಬನ್ಸ್ವಾರಾದಲ್ಲಿ ಚುನಾವಣಾ ರ್ಯಾಲಿಯಲ್ಲಿ ಮಾತನಾಡಿದ ಮೋದಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜನರ ಸಂಪತ್ತನ್ನು ಮುಸ್ಲಿಮರಿಗೆ ಮರುಹಂಚಿಕೆ ಮಾಡುವುದಾಗಿ ಹೇಳಿದ್ದರು.
ಜನರು ಕಷ್ಟಪಟ್ಟು ಸಂಪಾದಿಸಿದ ಹಣ ಮತ್ತು ಬೆಲೆಬಾಳುವ ವಸ್ತುಗಳನ್ನು ನುಸುಳುಕೋರರಿಗೆ ಮತ್ತು ಹೆಚ್ಚು ಮಕ್ಕಳನ್ನು ಹೊಂದಿರುವವರಿಗೆ ನೀಡಲು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಅವರು ಆರೋಪಿಸಿದ್ದರು.
ಅವರ ಈ ಹೇಳಿಕೆಯನ್ನು ಟೀಕಸಿದ ವಿಜಯನ್ ಜನರಲ್ಲಿ ಮುಸ್ಲಿಂ ವಿರೋಧಿ ದ್ವೇಷವನ್ನು ಹುಟ್ಟುಹಾಕಲು ಕಾಲ್ಪನಿಕ ಕಥೆಗಳನ್ನು ನಿರ್ಮಿಸುವ ಮೂಲಕ ಪ್ರಧಾನಿಯವರು ಕೋಮು ಪ್ರಚಾರವನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.