Homeರಾಷ್ಟ್ರೀಯಬಿಹಾರ : ಕಾಲುವೆಗೆ ಕಾರು ಬಿದ್ದು 6 ಜನರ ದುರ್ಮರಣ

ಬಿಹಾರ : ಕಾಲುವೆಗೆ ಕಾರು ಬಿದ್ದು 6 ಜನರ ದುರ್ಮರಣ

ಅರಾರಿಯಾ, ನ. 19 (ಪಿಟಿಐ): ಬಿಹಾರದ ಅರಾರಿಯಾ ಜಿಲ್ಲೆಯಲ್ಲಿ ಕಾರೊಂದು ಕಾಲುವೆಗೆ ಬಿದ್ದ ಪರಿಣಾಮ ಆರು ಮಂದಿ ಮೃತಪಟ್ಟಿದ್ದು, ಒಬ್ಬರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.ತಾರಾಬಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಬಿಡಿ ಸೇತುವೆಯ ಮೇಲೆ ರಾತ್ರಿ ಈ ಅಪಘಾತ ಸಂಭವಿಸಿದೆ.

ಚಾಲಕನ ನಿಯಂತ್ರಣ ತಪ್ಪಿದ ಕಾರು ಕಾಲುವೆಗೆ ಬಿದ್ದಿದೆ ಎಂದು ಅರಾರಿಯಾ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಪಿ) ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ತಿಳಿಸಲಾಗಿದೆ.

ಮದುವೆಗೆ ಮುನ್ನ ನಡೆಯುವ ತಿಲಕ್ ಸಮಾರಂಭದಿಂದ ಹಿಂತಿರುಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಧಾವಿಸಿದ ಪೊಲೀಸರು, ಕಾರಿನಲ್ಲಿದ್ದ ಏಳು ಮಂದಿಯನ್ನು ಅರಾರಿಯಾ ಸದರ್ ಆಸ್ಪತ್ರೆಗೆ ಕರೆದೊಯ್ದರು. ಅಲ್ಲಿ ಆರು ಮಂದಿ ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿದರು ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಒಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಕುಟುಂಬ ಸದಸ್ಯರು ಅಲ್ಲಿಗೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ. ಪ್ರಸ್ತುತ ಆ ಪ್ರದೇಶದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಸಹಜ ಸ್ಥಿತಿಯಲ್ಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

RELATED ARTICLES

Latest News