Homeರಾಜ್ಯ16 ನೂತನ ಇಂದಿರಾ ಕ್ಯಾಂಟೀನ್‌ಗಳಿಗೆ ಸಿಎಂ ಡಿಕೆಶಿ ಚಾಲನೆ

16 ನೂತನ ಇಂದಿರಾ ಕ್ಯಾಂಟೀನ್‌ಗಳಿಗೆ ಸಿಎಂ ಡಿಕೆಶಿ ಚಾಲನೆ

ಬೆಂಗಳೂರು, ನ.19- ರಾಜ್ಯದ ನಗರಗಳ ಸಮಗ್ರ ಅಭಿವೃದ್ಧಿ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ರಸ್ತೆಗಳಿಗೆ ಹೊಸ ಗ್ರಿಡ್‌ ವ್ಯವಸ್ಥೆ ರೂಪಿಸಲಾಗುವುದು. ಈ ಗ್ರಿಡ್‌ಗಾಗಿ ಮೀಸಲಿಡುವ ಜಾಗವನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ಮಾತ್ರ ಕಟ್ಟಡ ನಿರ್ಮಾಣ ಸೇರಿದಂತೆ ಇತರ ಕಾಮಗಾರಿಗಳನ್ನು ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸೂಚಿಸಿದರು.

ಭಾರತದ ಉಕ್ಕಿನ ಮಹಿಳೆ, ದೇಶದ ಮೂರನೇ ಪ್ರಧಾನಮಂತ್ರಿ ಇಂದಿರಾ ಗಾಂಧಿ ಅವರ ಜನದಿನಾಚರಣೆ ಅಂಗವಾಗಿ ರಾಜ್ಯದ ವಿವಿಧ ನಗರಗಳಲ್ಲಿ ನಿರ್ಮಿಸಿರುವ 16 ನೂತನ ಇಂದಿರಾ ಕ್ಯಾಂಟೀನ್‌ಗಳ ಉದ್ಘಾಟನೆ ಹಾಗೂ ಉತ್ತಮ ಸ್ವಚ್ಛತೆ ಮತ್ತು ನಿರ್ವಹಣೆ ಮಾಡಿದ ಕ್ಯಾಂಟೀನ್‌ಗಳಿಗೆ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ನಗರ ಯೋಜನೆ ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದು, ರಾಜ್ಯದ ನಗರಗಳ ಸಮಗ್ರ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡಲಾಗುತ್ತಿದೆ ಎಂದರು.

ಇಂದಿರಾ ಗಾಂಧಿ ಅವರ ಕುಟುಂಬಕ್ಕೂ ತಮಗೂ ಅವಿನಾಭಾವ ಸಂಬಂಧವಿದೆ. ಇಂದಿರಾ ಎಂಬ ಹೆಸರೇ ಹಸಿವು ಮತ್ತು ಬಡತನ ನಿವಾರಣೆಯ ಸಂಕೇತವಾಗಿದೆ. ರಾಜೀವ್‌ ಗಾಂಧಿ ಅವರ ಸಾರಕವಿರುವ ತಮಿಳುನಾಡಿನ ಶ್ರೀಪೆರಂಬದೂರಿಗೆ ಕಳೆದ 15 ವರ್ಷಗಳಿಂದ ನಿರಂತರವಾಗಿ ಭೇಟಿ ನೀಡುತ್ತಿದ್ದೇನೆ. ಅಲ್ಲಿ ಕನಕಪುರದ ಕಲ್ಲನ್ನು ಸಾರಕ ನಿರ್ಮಾಣಕ್ಕೆ ನೀಡಲಾಗಿದೆ. ತಮಿಳುನಾಡಿನಲ್ಲಿ ಅಮ ಕ್ಯಾಂಟೀನ್‌ಗಳನ್ನು ನೋಡಿದಾಗ ಆಶ್ಚರ್ಯವಾಗಿತ್ತು. ಅಲ್ಲಿಂದ ಹಿಂದಿರುಗಿ ಆಗಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಮಾದರಿಯ ಬಗ್ಗೆ ತಿಳಿಸಿದ್ದೆ. ಬಡವರಿಗೆ ಕಡಿಮೆ ದರದಲ್ಲಿ ಆಹಾರ ಒದಗಿಸುವ ಉದ್ದೇಶದಿಂದ ಇಂದಿರಾ ಕ್ಯಾಂಟೀನ್‌ ಯೋಜನೆ ಜಾರಿಗೆ ತರಲಾಯಿತು ಎಂದರು.

ಇಂದಿರಾ ಕ್ಯಾಂಟೀನ್‌ಗಳಲ್ಲಿ ಆಹಾರದ ಗುಣಮಟ್ಟ ಕಾಪಾಡುವುದು ಅತ್ಯಂತ ಮುಖ್ಯ. ಪೌರಾಡಳಿತ ಮತ್ತು ನಗರಾಭಿವೃದ್ಧಿ ಅಧಿಕಾರಿಗಳು ಹಾಗೂ ಶಾಸಕರು ಪ್ರತಿ 15 ದಿನಗಳಿಗೊಮೆ ಕ್ಯಾಂಟೀನ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಯಾರು ಯಾವ ದಿನ ಭೇಟಿ ನೀಡಬೇಕು ಎಂಬ ವೇಳಾ ಪಟ್ಟಿ ಸಿದ್ಧ ಪಡಿಸಬೇಕು. ಅದರಂತೆ ಅಧಿಕಾರಿಗಳು ಹೋಗಿ, ಕ್ಯಾಂಟೀನ್‌ನ ರಿಜಿಸ್ಟರ್‌ ನಲ್ಲಿ ಸಹಿ ಹಾಕಿ ಬರಬೇಕು ಎಂದು ಹೇಳಿದರು.

ಕ್ಯಾಂಟೀನ್‌ಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಅವುಗಳ ನೇರ ಪ್ರಸಾರ ವ್ಯವಸ್ಥೆಗೆ ಸಂಪರ್ಕಿಸುವ ಚಿಂತನೆಯಿದೆ. ಇದರಿಂದ ಎಷ್ಟು ಜನರು ಊಟಕ್ಕೆ ಬರುತ್ತಿದ್ದಾರೆ, ಆಹಾರದ ಗುಣಮಟ್ಟ ಹೇಗಿದೆ ಎಂಬುದನ್ನು ಗಮನಿಸಲು ಸಾಧ್ಯವಾಗುತ್ತದೆ. ಗುತ್ತಿಗೆದಾರರು ಮತ್ತು ನಿರ್ವಹಣೆಯ ಜವಾಬ್ದಾರಿ ಹೊತ್ತವರು ತಮ ಕರ್ತವ್ಯವನ್ನು ಸರಿಯಾಗಿ ನಿರ್ವಹಿಸುವಂತಾಗಬೇಕು. ಕೆಲಸ ಮಾಡುವವರಲ್ಲಿ ಭಯ ಅಥವಾ ಭಕ್ತಿ ಇರಬೇಕು ಎಂದು ಹೇಳಿದರು.

ರಾಜ್ಯವನ್ನು ಹಸಿವು ಮುಕ್ತಗೊಳಿಸುವುದು ಸರ್ಕಾರದ ಗುರಿಯಾಗಿದೆ. ಬಡವನ ತಟ್ಟೆಯಲ್ಲಿ ಅನ್ನವಿದ್ದಾಗ ಮಾತ್ರ ಅಭಿವೃದ್ಧಿಗೆ ನಿಜವಾದ ಅರ್ಥ ಬರುತ್ತದೆ. ದುಡಿಯುವ ಜನರ ಮುಖದಲ್ಲಿ ನಗು ಇರಬೇಕು. ಹಸಿವಿಗೆ ಯಾವುದೇ ಜಾತಿ, ಧರ್ಮದ ಬೇಧವಿಲ್ಲ. ಕಾಂಗ್ರೆಸ್‌‍ ಸರ್ಕಾರ ಐದು ಗ್ಯಾರಂಟಿ ಯೋಜನೆಗಳೂ ಸೇರಿದಂತೆ ಬಡವರ ಜೀವನಮಟ್ಟ ಸುಧಾರಿಸಲು ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಇಂದಿರಾ ಕ್ಯಾಂಟೀನ್‌ಗಳ ಸಂಖ್ಯೆಯನ್ನು ರಾಜ್ಯಾದ್ಯಂತ 383ಕ್ಕೆ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು. ಬಿಜೆಪಿ ಮತ್ತು ಜೆಡಿಎಸ್‌‍ ಶಾಸಕರಿರುವ ಕೆಲವು ಕ್ಷೇತ್ರಗಳಲ್ಲಿ ಇಂದಿರಾ ಕ್ಯಾಂಟೀನ್‌ಗಳನ್ನು ಮುಚ್ಚಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಡವರಿಗೆ ಅನುಕೂಲವಾಗುವ ಇಂತಹ ಯೋಜನೆಗಳನ್ನು ರಾಜಕೀಯ ಕಾರಣಗಳಿಗಾಗಿ ಸ್ಥಗಿತಗೊಳಿಸಬಾರದು ಎಂದರು.

ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಆಸ್ತಿ ದಾಖಲೆಗಳ ನಿರ್ವಹಣೆ, ಸ್ವಚ್ಛತೆ ಮತ್ತು ತ್ಯಾಜ್ಯ ವಿಲೇವಾರಿ ಸೇರಿದಂತೆ ಹಲವು ಸವಾಲುಗಳಿವೆ. ತ್ಯಾಜ್ಯ ನಿರ್ವಹಣೆ ಅತ್ಯಂತ ಕಷ್ಟದ ಕೆಲಸವಾಗಿದ್ದು, ಈ ಕ್ಷೇತ್ರದಲ್ಲಿ ಗಲಾಟೆ, ಬ್ಲ್ಯಾಕ್‌ಮೇಲ್‌ನಂತಹ ಸಮಸ್ಯೆಗಳು ನಡೆಯುತ್ತಿವೆ. ದೊಡ್ಡ ಕಳ್ಳರಿದ್ದಾರೆ. ಪೌರಕಾರ್ಮಿಕರು ಶ್ರಮಪಟ್ಟು ಸ್ವಚ್ಛತಾ ಕಾರ್ಯ ಮಾಡುತ್ತಿದ್ದರೂ ತ್ಯಾಜ್ಯ ವಿಲೇವಾರಿಯಲ್ಲಿ ಅಡಚಣೆಗಳು ಎದುರಾಗುತ್ತಿವೆ. ಹೀಗಾಗಿ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಂಡು ವೈಜ್ಞಾನಿಕವಾಗಿ ತ್ಯಾಜ್ಯ ವಿಲೇವಾರಿ ಮಾಡಬೇಕು ಎಂದು ತಿಳಿಸಿದರು.

ರಾಜ್ಯಾದ್ಯಂತ ಐದು ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಪ್ರಸ್ತಾವನೆಯನ್ನು ಸಚಿವ ಸಂಪುಟದ ಮುಂದೆ ಮಂಡಿಸಲಾಗುತ್ತಿದೆ. ಪೌರಕಾರ್ಮಿಕರಿಗೂ ನಿವೇಶನ ಹಾಗೂ ವಸತಿ ಸೌಲಭ್ಯ ಕಲ್ಪಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಿದೆ ಎಂದರು.

ಕಳೆದ ಮೂರು ವರ್ಷಗಳಿಂದ ಪೌರಾಡಳಿತ ಇಲಾಖೆಗೆ ನಿರೀಕ್ಷಿತ ಪ್ರಮಾಣದಲ್ಲಿ ಅನುದಾನ ನೀಡಲು ಸಾಧ್ಯವಾಗಿರಲಿಲ್ಲ. ಗ್ಯಾರಂಟಿ ಯೋಜನೆಗಳ ಕಾರಣದಿಂದ ಹಣಕಾಸಿನ ಹಂಚಿಕೆಯಲ್ಲಿ ಕೆಲವು ಮಿತಿಗಳಿದ್ದವು. ಈ ವರ್ಷ ಇಲಾಖೆಗೆ ಅಗತ್ಯ ಅನುದಾನ ನೀಡಲಾಗುವುದು ಎಂದರು.

ತಮ ಅಧಿಕಾರಾವಧಿಯಲ್ಲಿ ಉತ್ತಮ ಕೆಲಸ ಮಾಡಬೇಕೆಂಬ ಮಹತ್ವಾಕಾಂಕ್ಷೆ ಹೊಂದಿದ್ದೇನೆ. ಇಲಾಖೆಯಲ್ಲಿ ಪ್ರತಿಯೊಂದು ವೆಚ್ಚಕ್ಕೂ ಲೆಕ್ಕವಿರಬೇಕು. ಯಾವುದೇ ಅವ್ಯವಹಾರ ಅಥವಾ ಅಕ್ರಮಗಳಿಗೆ ಅವಕಾಶ ನೀಡುವುದಿಲ್ಲ. ಪಾರದರ್ಶಕ ಆಡಳಿತಕ್ಕೆ ಎಲ್ಲರೂ ಬದ್ಧರಾಗಿರಬೇಕು. ಇಲ್ಲವಾದರೆ ಬಡಿದು ಹಾಕಿ ಬಿಡುತ್ತೇನೆ ಎಂದು ಎಚ್ಚರಿಕೆ ನೀಡಿದರು.

ಪೌರಾಡಳಿತ ಸಚಿವ ಎಚ್‌.ಸಿ. ಬಾಲಕೃಷ್ಣ ಮಾತನಾಡಿ, ಇನ್ನು ಮುಂದೆ ಪ್ರತಿವರ್ಷ ಪೌರಾಡಳಿತ ಇಲಾಖೆಯಿಂದ ಇಂದಿರಾ ಗಾಂಧಿ ಅವರ ಜನದಿನಾಚರಣೆಯನ್ನು ನಡೆಸಲಾಗುವುದು. ಅಂದು ಇಂದಿರಾ ಕ್ಯಾಂಟೀನ್‌ಗಳಲ್ಲಿ ಸಿಹಿ ವಿತರಿಸಲಾಗುವುದು ಎಂದರು.

ನಗರಾಭಿವೃದ್ಧಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿ, ಸ್ವಚ್ಛ ಭಾರತ ಯೋಜನೆಯಡಿ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ರಾಜ್ಯದಲ್ಲಿ 53 ತ್ಯಾಜ್ಯ ವಸ್ತುಗಳ ಮರುಪಡೆಯುವಿಕೆ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ದೊಡ್ಡ ಸವಾಲಾಗಿದ್ದು, ಆಧುನಿಕ ತಂತ್ರಜ್ಞಾನ ಬಳಸಿ ವೈಜ್ಞಾನಿಕವಾಗಿ ನಿರ್ವಹಿಸಬೇಕಿದೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ವಿಧಾನ ಪರಿಷತ್‌ ಸದಸ್ಯ ಸುಧಾಮ ದಾಸ್‌‍ ಸೇರಿದಂತೆ ಹಲವು ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 23ಕ್ಕೂ ಹೆಚ್ಚು ಕಡೆಗಳಿಂದ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ವರ್ಚುವಲ್‌ ಮೂಲಕ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

RELATED ARTICLES

Latest News