Friday, November 22, 2024
Homeರಾಜ್ಯಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ

ಏ.28ಕ್ಕೆ ಮತ್ತೆ ರಾಜ್ಯಕ್ಕೆ ಮೋದಿ ಆಗಮನ, ಉತ್ತರ ಕರ್ನಾಟಕದಲ್ಲಿ ಮತಬೇಟೆ

ಬೆಂಗಳೂರು, ಏ.23- ಲೋಕಸಭಾ ಚುನಾವಣೆಯ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳ ಮತದಾನಕ್ಕೆ ಮೂರೇ ದಿನ ಬಾಕಿ ಇರುವಾಗಲೇ ಪ್ರಧಾನಿ ನರೇಂದ್ರಮೋದಿ ಅವರು ಏ.28ರಂದು ಮತ್ತೆ ರಾಜ್ಯಕ್ಕೆ ಆಗಮಿಸಲಿದ್ದಾರೆ. ಮೇ7ರಂದು ರಾಜ್ಯದ 17 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದ್ದು, ಬಹುತೇಕ ಮಧ್ಯ ಕರ್ನಾಟಕ, ಕಲ್ಯಾಣ ಮತ್ತು ಕಿತ್ತೂರು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ.

ಬಹುತೇಕ ಲಿಂಗಾಯಿತರ ಪ್ರಾಬಲ್ಯ ಹೊಂದಿರುವ ಈ ಕ್ಷೇತ್ರದಲ್ಲಿ ಬಿಜೆಪಿ 14 ಕ್ಷೇತ್ರಗಳನ್ನು ಗೆಲ್ಲುವ ಗುರಿಯನ್ನು ಇಟ್ಟುಕೊಂಡಿದೆ. ಹೀಗಾಗಿ ರಾಜ್ಯಕ್ಕೆ ಮೋದಿ ಅವರಿಂದ ಹೆಚ್ಚು ಸಾರ್ವಜನಿಕ ಸಭೆಗಳನ್ನು ನಡೆಸಲು ಉದ್ದೇಶಿಸಿದೆ.

2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಈ ಭಾಗದ ಎಲ್ಲ ಸ್ಥಾನಗಳನ್ನು ಗೆದ್ದು ಬೀಗಿತ್ತು. ಈ ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರ ಹಣಾಹಣಿ ಏರ್ಪಟ್ಟಿದ್ದು, ಮೋದಿ ಅವರಿಂದಲೇ ಬೃಹತ್ ಸಮಾವೇಶಗಳನ್ನು ನಡೆಸಲು ಉದ್ದೇಶಿಸಿದೆ.

ಲೋಕಸಭೆ ಚುನಾವಣೆಗೆ ದಿನಾಂಕ ಘೋಷಣೆಯಾದ ಬಳಿಕ ಪ್ರಧಾನಿ ಮೋದಿ ಮೊದಲ ಬಾರಿಗೆ ಉತ್ತರ ಕರ್ನಾಟಕಕ್ಕೆ ಆಗಮಿಸುತ್ತಿದ್ದಾರೆ. ಎಪ್ರಿಲ್ 28 ಹಾಗೂ 29ರಂದು ಆರು ಕಡೆಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮೆಗಾ ಕ್ಯಾಂಪೇನ್ ಮಾಡಲಿದ್ದಾರೆ. ಎರಡು ದಿನ, 12 ಕ್ಷೇತ್ರಗಳ ಟಾರ್ಗೆಟ್ ಮಾಡಿ ಆರು ಕಡೆ ಬೃಹತ್ ಸಮಾವೇಶ ನಡೆಸಲಿದ್ದಾರೆ.

ಮೋದಿ ಕಾರ್ಯಕ್ರಮದ ವೇಳಾಪಟ್ಟಿ:
ಏ.28ರಂದು ದಾವಣಗೆರೆ, ಕಾರವಾರ, ಬೆಳಗಾವಿ ಬಿಜೆಪಿ ಅಭ್ಯರ್ಥಿಗಳ ಪರ ಮತಯಾಚಿಸಲಿದ್ದಾರೆ. ಅಂದು ಪ್ರಧಾನಿ ಮೋದಿ ಬೆಳಗಾವಿಯಲ್ಲೇ ವಾಸ್ತವ್ಯ ಹೂಡಲಿದ್ದಾರೆ. ವಿಟಿಯು ಗೆಸ್ಟ್ ಹೌಸ್, ಐಟಿಸಿ ವೆಲ್ಕಮ್, ಮೇರಿಯಟ್, ಯುಕೆ-27 ಯಾವುದಾದರು ಒಂದು ಹೊಟೇಲ್ನಲ್ಲಿ ತಂಗಲಿದ್ದಾರೆ. ಎಸ್ಪಿಜಿ ಪರಿಶೀಲನೆ ಬಳಿಕ ಹೊಟೇಲ್ ನಿಗದಿಯಾಗಲಿದೆ. ಎಪ್ರಿಲ್ 29 ರಂದು ವಿಜಯಪುರ, ಕೊಪ್ಪಳ ಹಾಗೂ ಕಲಬುರಗಿ ಬಿಜೆಪಿ ಅಭ್ಯರ್ಥಿಗಳ ಪರ ಮತ ಯಾಚಿಸಲಿದ್ದಾರೆ.

ದಾವಣಗೆರೆಯಿಂದ ಆರಂಭವಾಗುವ ಮೋದಿ ದಂಡಯಾತ್ರೆ ಬೆಳಗಾವಿ, ಕಲಬುರ್ಗಿ ಸೇರಿದಂತೆ ಆರು ಜಿಲ್ಲೆಗಳಲ್ಲಿ ನಡೆಯಲಿದೆ. ಎರಡು ಲೋಕಸಭೆ ಕ್ಷೇತ್ರಕ್ಕೆ ಒಂದರಂತೆ 6 ಬೃಹತ್ ಸಮಾವೇಶ ನಡೆಸಲಿದ್ದಾರೆ.

ಬೃಹತ್ ಸಮಾವೇಶಗಳ ಮೂಲಕ ಕಿತ್ತೂರು ಕರ್ನಾಟಕದ ಆರು ಕ್ಷೇತ್ರಗಳನ್ನು ಮರಳಿ ಗೆಲ್ಲಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ. ಕಲ್ಯಾಣ ಕರ್ನಾಟಕ ಹಾಗೂ ಮಧ್ಯ ಕರ್ನಾಟಕ ಭಾಗದಲ್ಲಿ ಎರಡು ದಿನಗಳ ಕಾಲ 12 ಕ್ಷೇತ್ರಗಳನ್ನು ಟಾರ್ಗೆಟ್ ಮಾಡಿ ಭರ್ಜರಿ ಮತಬೇಟೆ ನಡೆಸಲಿದ್ದಾರೆ.

RELATED ARTICLES

Latest News