ಎಸ್.ಜಾನಕಿ ಭಾರತೀಯ ಚಿತ್ರರಂಗ ಕಂಡ ಅದ್ಭುತ ಗಾಯಕಿ, ಗೀತಸಾಹಿತಿ ಮತ್ತು ಸಂಗೀತ ನಿರ್ದೇಶಕಿ. ಕನ್ನಡ, ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಭಾಷೆಗಳಲ್ಲಿ ಸಾವಿರಾರು ಗೀತೆಗಳಿಗೆ ಧ್ವನಿಯಾಗಿದ್ದಾರೆ. ತಮ್ಮ ಅದ್ಭುತ ಧ್ವನಿ ವೈವಿಧ್ಯಕ್ಕೆ ಹೆಸರಾಗಿರುವ ಇವರು ಚಿಕ್ಕ ಮಕ್ಕಳಂತೆ ಕೂಡ ಹಾಡಬಲ್ಲರು.
1938ರಲ್ಲಿ ಆಂಧ್ರಪ್ರದೇಶದ ಗುಂಟೂರಿನ ಹಳ್ಳಿಯಲ್ಲಿ ಜನಿಸಿದರು. ತಮ್ಮ ಮೂರನೆ ವಯಸ್ಸಿನಲ್ಲೇ ಸಂಗೀತಗಾರ್ತಿಯ ಸಕಲ ಸುಲಕ್ಷಣಗಳನ್ನೂ ಹೊರಹೊಮ್ಮಿಸಿದ ಬಾಲಕಿ ಜಾನಕಿ. ನಾದಸ್ವರ ವಿದ್ವಾನ್ ಶ್ರೀ ಪೈಡಿಸ್ವಾಮಿ ಎಂಬುವವರಲ್ಲಿ ಸಂಗೀತಾಭ್ಯಾಸ ಪ್ರಾರಂಭಿಸಿದರು.
ಸಂಗಿತ ಪಯಣ: 1956ರ ವರ್ಷದಲ್ಲಿ ಆಕಾಶವಾಣಿ ನಡೆಸಿದ ಸಂಗೀತ ಸ್ಪರ್ಧೆಗಳಲ್ಲಿ ಆಗಿನ ರಾಷ್ಟ್ರಪತಿ ಬಾಬು ರಾಜೇಂದ್ರ ಪ್ರಸಾದ್ ಅವರಿಂದ ಬಹುಮಾನ ಸ್ವೀಕರಿಸಿದ ಜಾನಕಿ, ಮುಂದೆ ಚೆನ್ನೈಗೆ ಬಂದು ಸಂದರ್ಶನ ವೊಂದರಲ್ಲಿ ಲತಾ ಮಂಗೇಶ್ಕರ್ ಹಾಡಿದ್ದ `ರಸಿಕ್ ಬಲಮಾ’ ಎಂಬ ಸುಪ್ರಸಿದ್ಧ ಗೀತೆಯನ್ನು ಮನೋಜ್ಞವಾಗಿ ಹಾಡಿ ಪ್ರಸಿದ್ಧ ಎವಿಎಮ್ ಸಂಸ್ಥೆಯವರ ಕಾಂಟ್ರಾP್ಟï ಪಡೆದರು.
ತಮ್ಮ 19ನೆ ವಯಸ್ಸಿನಲ್ಲಿ ಗಾಯನ ಆರಂಭಿಸಿದ ಜಾನಕಿ ಅವರು ತಮ್ಮ ಚಿಕ್ಕಪ್ಪನ ಸಲಹೆಯಂತೆ ಚೆನ್ನೈಗೆ ಬಂದು ಎವಿಎಮ್ ಸ್ಟುಡಿಯೋದಲ್ಲಿ ಗಾಯಕಿಯಾಗಿ ಸೇರಿದರು. 1957ರಲ್ಲಿ ಚಿತ್ರಗಳಲ್ಲಿ ಹಾಡಲು ಆರಂಭಿಸಿದ ಜಾನಕಿ ಅದೇ ವರ್ಷದಲ್ಲಿ ಆರು ಭಾಷೆಗಳಲ್ಲಿ ಹಾಡಿದರು. ಸಂಗೀತ ನಿರ್ದೇಶಕ ಇಳಯರಾಜ ಮತ್ತು ಹಿನ್ನೆಲೆ ಗಾಯಕ ಎಸ್.ಪಿ.ಬಾಲಸುಬ್ರಹ್ಮಣ್ಯಂ ಜೊತೆ ಅತಿ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದಾರೆ.
ಅವರು ಸುಮಾರು 48 ಸಾವಿರ ಗೀತೆಗಳನ್ನು ಹಾಡಿದ್ದಾರೆ. ಭಾರತದ ಪ್ರಮುಖ ಭಾಷೆಗಳು ಸೇರಿದಂತೆ ಸಿಂಹಳ, ಜಪಾನಿ, ಲ್ಯಾಟಿನ್, ಅರೇಬಿಕ್ ಒಳಗೊಂಡಂತೆ ಹದಿನೇಳು ಭಾಷೆಗಳಲ್ಲಿ ಹಾಡಿದ ಹೆಗ್ಗಳಿಕೆ ಅವರದ್ದು.
1957ರಲ್ಲಿ ಪ್ರಸಿದ್ಧ ಸಂಗೀತ ನಿರ್ದೇಶಕ ಟಿ.ಚಲಪತಿ ರಾವ್ ಅವರ ತಮಿಳು ಚಿತ್ರ ವಿಯಿನ್ ವಿಳಯಾಟ್ಟು ಅವರು ಹಾಡಿದ ಪ್ರಥಮ ಚಿತ್ರ. ಮುಂದೆ ತೆಲುಗಿನ ಚಿತ್ರ ಎಂಎಲïಎ, ಕನ್ನಡದ ಕೃಷ್ಣಗಾರುಡಿ ಇವೆಲ್ಲಾ ಒಂದಾದ ನಂತರ ಒಂದೊಂದರಂತೆ ಹರಿದು ಬರಲು ಪ್ರಾರಂಭವಾದುವು.
ಮಲಯಾಳಂ ಚಿತ್ರಗಳಲ್ಲಿ ಕೂಡ ಹಾಡಲು ಪ್ರಾರಂಭಿಸಿದರು. ಹೀಗೆ ಅವರು ದಕ್ಷಿಣ ಭಾರತದ ಎಲ್ಲಾ ಪ್ರಧಾನ ಭಾಷೆಗಳ ಗಾಯಕಿಯಾದರು. ಜೊತೆಗೆ ಹಿಂದಿಯನ್ನೊಳಗೊಂಡಂತೆ ಭಾರತದ ಬಹಳಷ್ಟು ಭಾಷೆಗಳಲ್ಲಿ ತಮ್ಮ ಗಾನಮಾಧುರ್ಯದ ಸವಿಯನ್ನು ಬಿತ್ತರಿಸಿದರು. ತಮಿಳಿನಲ್ಲಿ 1958ರ ಸುಮಾರಿನಲ್ಲಿ ಅವರು ಹಾಡಿದ ಸಿಂಗಾರವೇಲನೆ ದೇವ ಎಂಬ ಮಹಾನ್ ನಾದಸ್ವರ ವಿದ್ವಾನ್ ಅರುಣಾಚಲಂ ಅವರ ನಾದ ಸ್ವರದೊಂದಿಗೆ ಮೇಳೈಸಿ ಹಾಡಿದ ಗೀತೆ ಪ್ರಾರಂಭದ ವರ್ಷಗಳಲ್ಲೇ ಅವರನ್ನು ಅಪ್ರತಿಮ ಗಾಯಕಿ ಎಂದು ಇಡೀ ದೇಶ ಗುರುತಿಸುವಂತೆ ಮಾಡಿತು.
ಕನ್ನಡ ಚಿತ್ರ ಹೇಮಾವತಿಯಲ್ಲಿ ಅವರು ಹಾಡಿರುವ ಶಿವ ಶಿವ ಎನ್ನದ ನಾಲಿಗೆ ಏಕೆ? ಎಂಬ ಅನನ್ಯಗೀತೆಯು ಇಡೀ ಭಾರತ ದೇಶದ ಅತ್ಯಂತ ತ್ರಾಸದಾಯಕ ಗೀತೆ ಎನಿಸಿದೆ. ಜಾನಕಿಯವರು ಈ ಹಾಡು ನನ್ನ ಸಂಗೀತ ಜೀವನದಲ್ಲಿ ಭಯಪಟ್ಟು ಹಾಡಿದ ಹಾಡು, ಮತ್ತೆ ಹಾಡಲೂ ಆಗದ ಹಾಡು ಎಂದು ಹೇಳುತ್ತಾರೆ. ಆ ನಂತರದಲ್ಲಿ ಅವರು ಹಾಡಿರುವ ಗೀತೆಗಳ ಸಂಖ್ಯೆ 40,000ವನ್ನು ಮೀರಿದೆ.
ಕನ್ನಡದಲ್ಲಿ ಡಾ.ರಾಜ್ಕುಮಾರ್ ಜೊತೆ ಅತಿ ಹೆಚ್ಚು ಗೀತೆಗಳಿಗೆ ಧ್ವನಿಯಾಗಿದ್ದಾರೆ. ರಾಜ್ಯೋತ್ಸವ ಪ್ರಶಸ್ತಿಗೆ ಭಾಜನವಾಗಿರುವ ಜಾನಕಮ್ಮ ಅವರಿಗೆ ಮೈಸೂರು ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ನೀಡಿದೆ. ಜಾನಕಿ ಅವರು ನಾಲ್ಕು ಬಾರಿ ರಾಷ್ಟ್ರೀಯ ಪ್ರಶಸ್ತಿ, 32 ಬಾರಿ ರಾಜ್ಯ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಭಾರತ ಸರ್ಕಾರ 2013ರಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ಎಸ್. ಜಾನಕಿ ಅವರಿಗೆ ಘೋಷಿಸಿದಾಗ, ಪದ್ಮ ಪ್ರಶಸ್ತಿಗಳಲ್ಲಿ ದಕ್ಷಿಣ ಭಾರತೀಯರ ಬಗ್ಗೆ ಅಸಡ್ಡೆ ಇರುವುದನ್ನು ವಿರೋಸಿ, ಎಸ್.ಜಾನಕಿ ಅವರು ಈ ಪ್ರಶಸ್ತಿಯನ್ನು ತಿರಸ್ಕರಿಸಿದರು.ಜಾನಕಿ ಅವರು 1959ರಲ್ಲಿ ವಿ.ರಾಮಪ್ರಸಾದ್ ಅವರನ್ನು ವಿವಾಹವಾದರು. 1997ರಲ್ಲಿ ಪತಿಯ ಮರಣದ ನಂತರ ಪುತ್ರನ ಜೊತೆ
ಹೈದರಾಬಾದ್ನಲ್ಲಿ ನೆಲೆಸಿದ್ದಾರೆ.