ಹೈದರಾಬಾದ್,ನ.22- ತೆಲಂಗಾಣ ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಮತ್ತಷ್ಟು ತೀವ್ರಗೊಂಡಿದೆ. ಭಿನ್ನಮತೀಯ ಶಾಸಕರನ್ನು ಹುಚ್ಚು ನಾಯಿಗಳು ಎಂದು ಟೀಕಿಸಿದ್ದ ಮುಖ್ಯಮಂತ್ರಿ ರೇವಂತ್ ರೆಡ್ಡಿ ವಿರುದ್ಧ ಕಾಂಗ್ರೆಸ್ ಶಾಸಕ ಕೋಮತಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಅಧಿಕಾರದ ದುರಹಂಕಾರದಿಂದ ವರ್ತಿಸಬಾರದು, ಸಾರ್ವಜನಿಕವಾಗಿ ಮಾತನಾಡುವಾಗ ಉನ್ನತ ಸ್ಥಾನದಲ್ಲಿರುವ ನಾಯಕರು ಘನತೆ ಕಾಪಾಡಿಕೊಳ್ಳಬೇಕು ಎಂದು ತಿರುಗೇಟು ನೀಡಿದ್ದಾರೆ.
ಗುರುವಾರ ಸಿದ್ದಿಪೇಟೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ್ದ ಮುಖ್ಯಮಂತ್ರಿ ರೇವಂತ್ ರೆಡ್ಡಿ, ಸರ್ಕಾರದ ಕಾರ್ಯವೈಖರಿಯನ್ನು ಖಾಸಗಿಯಾಗಿ ಹೊಗಳಿ, ಸಾರ್ವಜನಿಕವಾಗಿ ಟೀಕಿಸುವ ಕೆಲವು ಕಾಂಗ್ರೆಸ್ ನಾಯಕರ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದರು.
ನಮದೇ ಪಕ್ಷದ ಕೆಲವರಿಗೆ ಹುಚ್ಚು ನಾಯಿಗಳು ಕಚ್ಚಿದಂತಿದೆ. ಸಾರ್ವಜನಿಕವಾಗಿ ಸರ್ಕಾರವನ್ನು ಟೀಕಿಸುತ್ತಾರೆ. ಆದರೆ ಖಾಸಗಿಯಾಗಿ ಸರ್ಕಾರದ ಉತ್ತಮ ಕೆಲಸಗಳನ್ನು ಹೊಗಳಲು ಮನೆಗೆ ಬರುತ್ತಾರೆ. ಇಂತಹವರನ್ನು ಕಾಂಗ್ರೆಸ್ ಕಾರ್ಯಕರ್ತರು ಎರ್ರಗಡ್ಡದ ಮಾನಸಿಕ ಆಸ್ಪತ್ರೆಗೆ ಕರೆದೊಯ್ಯುತ್ತಾರೆ ಎಂದು ವ್ಯಂಗ್ಯವಾಡಿದ್ದರು.
ಈ ಹೇಳಿಕೆ ಕಾಂಗ್ರೆಸ್ನ ಭಿನ್ನಮತೀಯ ಶಾಸಕರಾದ ಕೋಮತಿರೆಡ್ಡಿ ರಾಜ್ ಗೋಪಾಲ್ ರೆಡ್ಡಿ ಮತ್ತು ಅನಿರುದ್ಧ ರೆಡ್ಡಿ ಅವರನ್ನು ಉದ್ದೇಶಿಸಿ ಮಾಡಲಾಗಿದೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ಆರಂಭವಾಗಿದೆ.ಮುಖ್ಯಮಂತ್ರಿಯ ಹೇಳಿಕೆಗೆ ಸಾಮಾಜಿಕ ಜಾಲತಾಣ ಎಕ್್ಸನಲ್ಲಿ ತೀವ್ರ ಪ್ರತಿಕ್ರಿಯೆ ನೀಡಿರುವ ರಾಜ್ಗೋಪಾಲ್ ರೆಡ್ಡಿ, ಅಧಿಕಾರದಲ್ಲಿರುವವರು ತಮ ಸ್ಥಾನದ ಘನತೆಯನ್ನು ಅರಿತುಕೊಳ್ಳಬೇಕು ಎಂದು ಹೇಳಿದ್ದಾರೆ.
ಅಧಿಕಾರದ ದುರಾಸೆ ಮತ್ತು ದುರಹಂಕಾರದಿಂದ ನಿರಂಕುಶವಾಗಿ ವರ್ತಿಸಿದರೆ ಜನರು ಅದನ್ನು ಸಹಿಸುವುದಿಲ್ಲ. ಅದೃಷ್ಟವಶಾತ್ ಅಧಿಕಾರ ಪಡೆದು, ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿ, ಸಾರ್ವಜನಿಕರ ಅಗತ್ಯಗಳನ್ನು ನಿರ್ಲಕ್ಷಿಸುವ ನಾಯಕರನ್ನು ತೆಲಂಗಾಣದ ಜನತೆ ಅಥವಾ ಇತಿಹಾಸ ಎಂದಿಗೂ ಕ್ಷಮಿಸುವುದಿಲ್ಲ ಎಂದು ಎಚ್ಚರಿಸಿದ್ದಾರೆ.
ಅಲ್ಲದೆ, ಪ್ರಮುಖ ಸ್ಥಾನದಲ್ಲಿರುವ ನಾಯಕರು ಸಮಗ್ರತೆ ಮತ್ತು ಪ್ರಾಮಾಣಿಕತೆಯಿಂದ ಆಡಳಿತ ನಡೆಸಿ, ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸುವಂತೆ ಅಯ್ಯಪ್ಪ ಸ್ವಾಮಿಯಲ್ಲಿ ಪ್ರಾರ್ಥಿಸುವುದಾಗಿಯೂ ತಿಳಿಸಿದ್ದಾರೆ.
ಸರ್ಕಾರ ಭ್ರಷ್ಟಾಚಾರ ಮುಕ್ತವಾಗಿದೆಯೇ? ಸಿಎಂಗೆ ಸವಾಲು
ಮಾಧ್ಯಮಗಳೊಂದಿಗೆ ಮಾತನಾಡಿದ ರಾಜ್ ಗೋಪಾಲ್ ರೆಡ್ಡಿ, ವಿರೋಧ ಪಕ್ಷಗಳನ್ನು ಟೀಕಿಸುವ ಮೊದಲು ಆಡಳಿತಾರೂಢ ಕಾಂಗ್ರೆಸ್ ಸರ್ಕಾರ ತನ್ನ ಸಾಧನೆಗಳ ಬಗ್ಗೆ ಆತಾವಲೋಕನ ಮಾಡಿಕೊಳ್ಳಬೇಕು ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ರೇವಂತ್ ರೆಡ್ಡಿ ತಮ ಹೃದಯದ ಮೇಲೆ ಕೈಯಿಟ್ಟು, ನಿಮ ಸರ್ಕಾರ ನಿಜವಾಗಿಯೂ ಭ್ರಷ್ಟಾಚಾರ ಮುಕ್ತವಾಗಿದೆಯೇ ಎಂದು ಉತ್ತರಿಸಲಿ ಎಂದು ಸವಾಲು ಹಾಕಿದ್ದಾರೆ.
