Homeರಾಜ್ಯಪೊಲೀಸರ ಭರ್ಜರಿ ಕಾರ್ಯಾಚರಣೆ 11.44 ಕೋಟಿ ವೌಲ್ಯದ ಡ್ರಗ್ಸ್ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ 11.44 ಕೋಟಿ ವೌಲ್ಯದ ಡ್ರಗ್ಸ್ ಜಪ್ತಿ

ಬೆಂಗಳೂರು,ನ.25-ಮಾದಕ ವಸ್ತು ಜಾಲದ ವಿರುದ್ಧ ನಗರ ಪೊಲೀಸರು ಭರ್ಜರಿ ಕಾರ್ಯಾಚರಣೆ ಮುಂದುವರೆಸಿದ್ದು, 11.44 ಕೋಟಿ ಮೌಲ್ಯದ ಮಾದಕ ವಸ್ತು ವಶಪಡಿಸಿ ಕೊಂಡಿದ್ದಾರೆ.ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಯಲಹಂಕ ಉಪನಗರ ಠಾಣೆ ಪೊಲೀಸರು ಸ್ನೇಹಿತರಿಬ್ಬರನ್ನು ಬಂಧಿಸಿ 5.72 ತೂಕದ ಎಂಡಿಎಂಎ ಮಾದಕ ವಸ್ತು ಹಾಗೂ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಗಂಗೊಂಡನಹಳ್ಳಿಯ ನಿವಾಸಿ, ಕಾರ್‌ ಮೆಕ್ಯಾನಿಕ್‌ ಇಮ್ರಾನ್‌ ಪಾಷ(28) ಮತ್ತು ಆತನ ಸ್ನೇಹಿತೆ ಹೊಸಕೋಟೆ ಕಣ್ಣೂರು ಹಳ್ಳಿ ಮುಖ್ಯ ರಸ್ತೆ ನಿವಾಸಿ ಆಯಿಷಾ ಸಿದ್ಧಿಕಿ (27) ಬಂಧಿತರು.ಬೆಂಗಳೂರಿನಿಂದ ವಿಮಾನದಲ್ಲಿ ದೆಹಲಿಗೆ ಹೋಗುತ್ತಿದ್ದ ಇವರಿಬ್ಬರು ಅಲ್ಲಿ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ವಾಪಸ್‌‍ ನಗರಕ್ಕೆ ಕಾರಿನಲ್ಲಿ ಹಿಂದಿರುಗುತ್ತಿದ್ದರು ಎಂಬುವುದು ಪೊಲೀಸರ ತನಿಖೆಯಿಂದ ತಿಳಿದು ಬಂದಿದೆ.

ಡ್ರಗ್ಸ್ ತೆಗೆದುಕೊಂಡು ವಿಮಾನದಲ್ಲಿ ಬೆಂಗಳೂರಿಗೆ ವಾಪಸ್‌‍ ಬಂದರೆ ತಪಾಸಣೆ ಸಂದರ್ಭದಲ್ಲಿ ಸಿಕ್ಕಿಹಾಕಿಕೊಳ್ಳುತ್ತೇವೆಂಬ ಭಯದಲ್ಲಿ ಕಾರಿನಲ್ಲಿ ನಗರಕ್ಕೆ ಬಂದಿದ್ದಾರೆಂಬುವುದು ಪೊಲೀಸರ ವಿಚಾರಣೆ ವೇಳೆ ಗೊತ್ತಾಗಿದೆ. ಯಲಹಂಕ ಉಪನಗರ ಪೊಲೀಸ್‌‍ ಠಾಣೆ ವ್ಯಾಪ್ತಿಯ ಸಿಂಗನಾಯಕನಹಳ್ಳಿ ಅಂಚೆ, ಕೆಂಚೇನಹಳ್ಳಿಯಿಂದ ಹಾರೋಹಳ್ಳಿಗೆ ಹೋಗುವ ರಸ್ತೆಯ ಮಧ್ಯದಲ್ಲಿರುವ ಖಾಲಿ ಲೇಔಟ್‌ನ ರಸ್ತೆ ಬದಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಮಾರಾಟ ಮಾಡಲು ಯತ್ನಿಸುತ್ತಿದ್ದಾರೆಂಬ ಮಾಹಿತಿ ಪೊಲೀಸರಿಗೆ ಲಭಿಸಿದೆ.

ಖಚಿತ ಮಾಹಿತಿ ಮೇರೆಗೆ ಯಲಹಂಕ ಉಪನಗರ ಪೊಲೀಸ್‌‍ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡ ಪೊಲೀಸರು ಸ್ಥಳದ ಮೇಲೆ ದಾಳಿ ಮಾಡಿ ಇಬ್ಬರನ್ನು ಬಂಧಿಸಿ ಅವರುಗಳ ಬಳಿ ಇದ್ದ 5.72 ತೂಕದ ಎಂಡಿಎಂಎ ಮಾದಕ ವಸು ಹಾಗೂ ಕೃತ್ಯಕ್ಕೆ ಬಳಸಿದ್ದ ಕಾರನ್ನು ವಶಕ್ಕೆ ಪಡೆದಿದ್ದಾರೆ.

ಇವುಗಳ ಮೌಲ್ಯ ಸುಮಾರು 11 ಕೋಟಿ 44 ಲಕ್ಷ ರೂ.ಗಳೆಂದು ಅಂದಾಜಿಸಲಾಗಿದೆ. ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಇನ್ನಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಯಲಹಂಕ ಉಪನಗರ ಠಾಣೆ ಇನ್ಸ್ ಪೆಕ್ಟರ್‌ ರೂಪಾ ಹಡಗಲಿ, ಸಬ್‌ಇನ್ಸ್ ಪೆಕ್ಟರ್‌ ಆನಂದ ಅವರನ್ನೊಳಗೊಂಡ ಸಿಬ್ಬಂದಿ ತಂಡವು ಆರೋಪಿಗಳನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.

ಭಾರತಿನಗರ:
ಈಶಾನ್ಯ ವಿಭಾಗದ ಭಾರತಿನಗರ ಠಾಣೆ ಪೊಲೀಸರು ಒಬ್ಬನನ್ನು ಬಂಧಿಸಿ 30 ಲಕ್ಷ ಮೌಲ್ಯದ 150.43 ಗ್ರಾಂ ಎಂಡಿಎಂಎ ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ. ಈ ಆರೋಪಿಯನ್ನು ಪೊಲೀಸರು ಹೆಚ್ಚಿನ ವಿಚಾರಣೆಗೆ ಒಳಪಡಿಸಿ ಈ ಮಾದಕ ವಸ್ತು ಎಲ್ಲಿಂದ ತರಲಾಗಿದೆ. ಯಾರು ತಂದುಕೊಟ್ಟರು, ಈ ಜಾಲದ ಹಿಂದೆ ಇನ್ನೂ ಯಾರ್ಯಾರಿದ್ದಾರೆ ಎಂಬಿತ್ಯಾದಿ ಮಾಹಿತಿಗಳನ್ನು ಕಲೆ ಹಾಕುತ್ತಿದ್ದಾರೆ.

RELATED ARTICLES

Latest News