ಚಳ್ಳಕರೆ,ಏ.26-ಮತಗಟ್ಟೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಮಹಿಳಾ ಸಿಬ್ಬಂಧಿ ಅಸ್ವಸ್ಥಗೊಂಡು ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ಮೃತಪಟ್ಟಿರುವ ಘಟನೆ ಇಲ್ಲಿ ನಡೆದಿದೆ.
ತಾಲ್ಲೂಕಿನ ಹೊಟ್ಟೆಪ್ಪನಹಳ್ಳಿ ಮತಗಟ್ಟೆಯಲ್ಲಿ ಮತದಾನ ನಡೆಯುತ್ತಿದ್ದ ವೇಳೆ ರಕ್ತದೊತ್ತಡದಲ್ಲಿ ಏರುಪೇರಾಗಿ ಯಶೋಧ (55) ಎಂಬುವವರು ಅಸ್ವಸ್ಥಗೊಂಡು ಮೃತಪಟ್ಟಿದ್ದಾರೆ.
- Advertisement -
ಚಳ್ಳಕರೆ ನಗರದ ವಿಠಲನಗರ ನಿವಾಸಿಯಾದ ಯಶೋಧ ಅವರು ತಾಲೂಕು ಪಂಚಾಯ್ತಿ ನೌಕರರೆಂದು ತಿಳಿದುಬಂದಿದೆ. ಘಟನೆ ಬಗ್ಗೆ ಜಿಲ್ಲಾ ಚುನಾವಣಾಧಿಕಾರಿ ಸಂತಾಪ ವ್ಯಕ್ತಪಡಿಸಿದ್ದಾರೆ.
- Advertisement -
