ಬೆಂಗಳೂರು,ನ.27- ಕರ್ನಾಟಕ ಲೋಕಸೇವಾ ಆಯೋಗದ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಿಧಾನಸೌಧ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ಪ್ರತ್ಯೇಕ ಎಫ್‌ಐಆರ್ ದಾಖಲಿಸುವ ಕುರಿತು ಪೊಲೀಸರು ಅಡ್ವೊಕೇಟ್ ಜನರಲ್ ಅವರ ಕಾನೂನು ಸಲಹೆಯನ್ನು ಕೇಳಿದ್ದಾರೆ. ಇ.ಡಿ ನೀಡಿರುವ ದೂರಿನ ಆಧಾರದ ಮೇಲೆ ಯಾವುದೇ ಕಾನೂನು ತೊಡಕುಗಳಿಲ್ಲದ ಹೊಸ ಎಫ್‌ಐಆರ್ ದಾಖಲಿಸಲು ಈ ಸಂಬಂಧ ಅಡ್ವೊಕೇಟ್ ಜನರಲ್ ಕಚೇರಿಗೆ ವಿಧಾನಸೌಧ ಠಾಣೆ ಪೊಲೀಸರು ಪತ್ರ ಬರೆದು ಸಲಹೆ ಪಡೆಯುತ್ತಿದ್ದಾರೆ
ಹೈಕೋರ್ಟ್ ಆದೇಶದ ಮೇರೆಗೆ ಈಗಾಗಲೇ ಪ್ರಕರಣದ ತನಿಖೆ ನಡೆಸುತ್ತಿರುವ ಎಸ್‌ಐಟಿಗೂ ಇ.ಡಿ ಈ ಬಗ್ಗೆ ಮಾಹಿತಿ ನೀಡಿದೆ. ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎಫ್‌ಐಆರ್ ದಾಖಲಾದರೆ ಇ.ಡಿ ತನಿಖೆ ಆರಂಭಿಸಲಿದೆ.
